ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಈ ಬಾರಿಯ ಮಳೆಗಾಲದಲ್ಲಿ ನಗರದಲ್ಲಿ ಸಂಭವನೀಯ ಪ್ರವಾಹದಿಂದ ಆಗಬಹುದಾದ ಅನಾಹುತವನ್ನು ತಡೆಗಟ್ಟಲು ಈಗಲೇ ಕ್ರಮಕೈಗೊಳ್ಳಲಾಗಿದೆ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಪ್ರತಿ ಮಳೆಗಾಲದಲ್ಲಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿ ಅಪಾರ ಹಾನಿ ಉಂಟಾಗುತ್ತದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಈಗಿನಿಂದಲೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post