ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಒಳ ಮೀಸಲಾತಿ ವಿಚಾರದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ನಿವಾಸದ ಮೇಲೆ ಕಲ್ಲು ತೂರಾಟ ನಡೆದಿರುವುದು ಬಿಜೆಪಿಯ ಆಂತರಿಕ ಪಿತೂರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ D K Shivakumar ಆರೋಪಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಒಳ ಮೀಸಲಾತಿ ವಿಚಾರದಲ್ಲಿ ಯಡಿಯೂರಪ್ಪ ನಿವಾಸದ ಮೇಲೆ ನಡೆದ ದಾಳಿ ಅವರದೇ ಪಕ್ಷದ ಆಂತರಿಕ ಪಿತೂರಿಯಾಗಿದೆ. ಅವರ ಪಕ್ಷದದಲ್ಲಿ ಯಡಿಯೂರಪ್ಪ ಅವರನ್ನು ಮಟ್ಟ ಹಾಕಲು ಇಂತಹ ಕುತಂತ್ರ ಮಾಡಲಾಗಿದೆ ಎಂದು ದೂರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post