ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನೈಋತ್ಯ ರೈಲ್ವೆ ವಲಯದ ಮೂಲಕ ಹಾದುಹೋಗುವ ಮೂರು ವಿಭಿನ್ನ ವಂದೇ ಭಾರತ್ ರೈಲುಗಳ Vande Bhaath Train ಮೇಲೆ ಭಾನುವಾರ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಯಾವುದೇ ಗಾಯಗಳಾಗದಿದ್ದರೂ ರೈಲಿನ ಗಾಜಿನ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ. ಒಂದೇ ದಿನದಲ್ಲಿ ಮೂರು ಘಟನೆಗಳು ನಡೆದಿದ್ದು, ರೈಲ್ವೆ ಪೊಲೀಸರು ವಿವಿಧ ಸ್ಥಳಗಳಿಗೆ ಧಾವಿಸಿ ತನಿಖೆ ನಡೆಸುತ್ತಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ನ ಇನ್‌ಸ್ಪೆಕ್ಟರ್ ಜನರಲ್ ಕಮ್ ಪ್ರಿನ್ಸಿಪಲ್ ಚೀಫ್ ಸೆಕ್ಯುರಿಟಿ ಕಮಿಷನರ್ ಆರ್, ರಾಮ ಶಂಕರ್ ಪ್ರಸಾದ್ ಸಿಂಗ್ ಮಾತನಾಡಿ, ಮೂರು ಘಟನೆಗಳಲ್ಲಿ ಎರಡು ಬೆಂಗಳೂರು ರೈಲ್ವೆ ವಿಭಾಗದ ವ್ಯಾಪ್ತಿಯಲ್ಲಿ ಸಂಭವಿಸಿವೆ. ಬೆಳಗ್ಗೆ 6.15ಕ್ಕೆ ಕೆಎಸ್‌ಆರ್ ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 20661) ಬೆಂಗಳೂರು ರೈಲ್ವೆ ವಿಭಾಗದ ಚಿಕ್ಕಬಾಣಾವರ ರೈಲು ನಿಲ್ದಾಣವನ್ನು ದಾಟಿದಾಗ ಮೊದಲ ಘಟನೆ ನಡೆದಿದೆ. ಕೋಚ್ C6 ನ 40, 41 ಮತ್ತು 42 ಸೀಟ್‌ಗಳಲ್ಲಿರುವ ಕಿಟಕಿಯ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ
ಎರಡನೇ ಘಟನೆ ಮಧ್ಯಾಹ್ನ 3.20 ರ ಸುಮಾರಿಗೆ ಧಾರವಾಡ-ಕೆಎಸ್‌ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 20662) ಸಂಚರಿಸುತ್ತಿದ್ದ ವೇಳೆ ಸಂಭವಿಸಿದೆ. ಮೈಸೂರು ವಿಭಾಗದ ಹಾವೇರಿ ಮತ್ತು ಹರಿಹರ ರೈಲು ನಿಲ್ದಾಣದ ಸಿ 5 ಕೋಚ್‌ನ ಕಿಟಕಿ ಗಾಜುಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಮೂರನೇ ಘಟನೆ ಮೈಸೂರು-ಎಂಜಿಆರ್ ಸೆಂಟ್ರಲ್ ವಂದೇ ಭಾರತ್ ನಲ್ಲಿ ಬೆಂಗಳೂರು ವಿಭಾಗದ ಕುಪ್ಪಂ ನಿಲ್ದಾಣದ 200 ಮೀಟರ್ ಮೊದಲು ಸಂಜೆ 4.30 ಕ್ಕೆ ಸಂಭವಿಸಿದೆ. ಇಂಜಿನ್‌ನ ಬಲಭಾಗದಿಂದ, 40, 41 ಮತ್ತು 42 ಆಸನಗಳಿರುವ C4 ಕೋಚ್‌ನಲ್ಲಿ ದುಷ್ಕರ್ಮಿಗಳು ಗಾಜಿನ ಫಲಕಗಳನ್ನು ಹಾನಿಗೊಳಿಸಿದರು ಎಂದು ಮಾಹಿತಿ ನೀಡಿದ್ದಾರೆ.
Also read: ಸುಧಾರಿತ ಜೈವಿಕ ಇಂಧನಗಳಿಗೆ ಉದಯೋನ್ಮುಖ ಪರಿಸರ ಸ್ನೇಹಿ ವ್ಯವಸ್ಥೆ ಅತ್ಯಗತ್ಯ
ಸೆಕ್ಷನ್ 147 (ರೈಲ್ವೆ ಹಳಿಯಲ್ಲಿ ಅತಿಕ್ರಮಣ) ಮತ್ತು ಸೆಕ್ಷನ್ 153 (ಉದ್ದೇಶಪೂರ್ವಕ ಕ್ರಿಯೆ ಅಥವಾ ಲೋಪದಿಂದ ರೈಲ್ವೆಯಲ್ಲಿ ಪ್ರಯಾಣಿಸುವ ವ್ಯಕ್ತಿಗಳ ಸುರಕ್ಷತೆಗೆ ಅಪಾಯವನ್ನುಂಟುಮಾಡುವುದು) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಸಿಂಗ್ ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post