ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ನಕಲಿ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ಕನಿಷ್ಠ 3 ವರ್ಷ ಜೈಲು ಶಿಕ್ಷೆಯಾಗುವಂತೆ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತಿದೆ.
ಈ ಕುರಿತಂತೆ ಸದನದಲ್ಲಿ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಕಲಿ ವೈದ್ಯರ ಹಾವಳಿ ತಡೆಗೆ ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ ಬೋರ್ಡ್ ಹಾಕುವುದು ಕಡ್ಡಾಯಗೊಳಿಸಲಾಗಿದೆ. ನಕಲಿ ವೈದ್ಯರೆಂದು ಕಂಡುಬಂದರೆ 25 ಲಕ್ಷದವರೆಗೆ ದಂಡ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.
Also read: ಅಂಕೋಲ ದುರಂತ | ಪತ್ತೆ ಕಾರ್ಯಕ್ಕೆ ಹೆಲಿಕಾಪ್ಟರ್ | ಹಡಗಿನ ಮೂಲಕ ಪರಿಶೀಲಿಸಿದ ಡಿಸಿ, ಎಸ್’ಪಿ
ಹೊಸ ನಮ್ಮ ಕ್ಲಿನಿಕ್ ಸೇರ್ಪಡೆ
ರಾಜ್ಯದಲ್ಲಿ ಈಗಾಗಲೇ 503 ‘ನಮ್ಮ ಕ್ಲಿನಿಕ್’ಗಳು ಕಾರ್ಯನಿರ್ವಹಿಸುತ್ತಿದ್ದು ಶೀಘ್ರದಲ್ಲೆ 254 ಹೊಸ ಕ್ಲಿನಿಕ್ಗಳು ಸೇರ್ಪಡೆಯಾಗಲಿವೆ. ಇದಕ್ಕಾಗಿ ಸ್ಥಳ ಗುರುತಿಸುವ ಕಾರ್ಯ ಮುಕ್ತಾಯಗೊಂಡಿದೆ. ಸರ್ಕಾರಿ ಕಟ್ಟಡಗಳಲ್ಲೆ ಹೆಚ್ಚೆಚ್ಚು ಕ್ಲಿನಿಕ್ ತೆರೆಯಲು ಆದ್ಯತೆ ನೀಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post