ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ದೇಶ ವಿರೋಧಿ ಮತ್ತು ಅಸಂವಿಧಾನಿಕ ಹೇಳಿಕೆ ನೀಡಿರುವ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಸ್ಥೆಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಳ್ಳಾಲದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಿಎಫ್‌ಐ ನಾಯಕರು ದೇಶ ವಿರೋಧಿ ಹೇಳಿಕೆ ನೀಡಿದ್ದಾರೆ. ಅದನ್ನು ಎಂದಿಗೂ ಸಹಿಸುವುದಿಲ್ಲ ಎಂದರು.
ಈ ಹೇಳಿಕೆಯೊಂದಿಗೆ ಪಿಎಫ್‌ಐ ಸಂಸ್ಥೆ ತನ್ನ ನಿಜ ಬಣ್ಣವನ್ನು ಜಗತ್ತಿಗೆ ತೋರಿಸಿದೆ ಎಂದು ವ್ಯಾಖ್ಯಾನಿಸಿದರು.
ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದೆ. ಆರ್‌ಎಸ್‌ಎಸ್ ಸಂಘಟನೆ ದೇಶಭಕ್ತಿಯ ಪ್ರತೀಕ. ಇದರ ವಿರುದ್ಧ ಪಿಎಫ್‌ಐ ಮುಖಂಡರು ಟೀಕೆ ಮಾಡಿರುವುದು ಖಂಡನಾರ್ಹ ಎಂದು ಹೇಳಿದರು.
ಇದು ದೇಶದ ಜನತೆಯನ್ನು ಒಡೆಯಲು ಮಾಡಿರುವ ಹುನ್ನಾರ. ಈ ರಾಷ್ಟ್ರ ವಿರೋಧಿ ಹೇಳಿಕೆ ನೀಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post