Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಲವಣ ಮಿಶ್ರಿತ ಮರಳು ಪೂರೈಕೆ ಮಾಡಿದರೆ ಕಠಿಣ ಕ್ರಮ: ಮುರುಗೇಶ್ ನಿರಾಣಿ

ಪಟ್ಟಾ ಜಮೀನಿನಲ್ಲಿ ಮರಳು ತೆರವುಗೊಳಿಸಲು ಸೂಚನೆ

March 23, 2021
in Small Bytes, ಬೆಂಗಳೂರು ನಗರ
0 0
0
Image courtesy: Internet

Image courtesy: Internet

Share on facebookShare on TwitterWhatsapp
Read - 3 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲವಣಾಂಶ ರಹಿತ ಮರಳನ್ನು ಪೂರೈಕೆ ಮಾಡುತ್ತಿದ್ದೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ಹೇಳಿದರು.

ಕಾಂಗ್ರೆಸ್‌ನ ಕೆ.ಪ್ರತಾಪ ಚಂದ್ರಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಉಪ್ಪಿನಂಶ ಇರುವ ಮರಳು ಬಳಕೆಯಿಂದ ಗುಣಮಟ್ಟ ಹಾಳಾಗುತ್ತದೆ ಎಂದು ಸಮಿತಿಯು ನೀಡಿದ ವರದಿ ಆಧಾರದ ಹಿನ್ನೆಲೆಯಲ್ಲಿ ನಾವು ಈ ಕ್ರಮ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.
ಗಣಿ ಮತ್ತು ಭೂ ವಿಜ್ಞಾನ, ಕಂದಾಯ, ಅರಣ್ಯ, ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಇಲಾಖೆ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿ ನೀಡುವ ವರದಿ ಆಧರಿಸಿ ಲವಣ ಮಿಶ್ರಿತ ಮರಳು ಪೂರೈಕೆ ಮಾಡುವುದನ್ನು ನಿಲ್ಲಿಸಿದ್ದೇವೆ. ಎಲ್ಲಿಯಾದರೂ ಪೂರೈಕೆ ಮಾಡುತ್ತಿರುವುದು ಕಂಡು ಬಂದರೆ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಇತ್ತೀಚೆಗೆ ಮತ್ತೆ ಈ ಮರಳನ್ನು ಬಳಸಲಾಗುತ್ತಿದೆ ಎಂದಾಗ ಉತ್ತರ ನೀಡಿದ ಸಚಿವರು ನದಿಯ ನೀರು ಸಮುದ್ರಕ್ಕೆ ಸೇರುವ ಕಡೆಗಳಲ್ಲಿ ಮರಳು ದಿಬ್ಬದಿಂದ ಮರಳನ್ನು ಸಂಗ್ರಹಿಸಲಾಗುತ್ತದೆ. ಅದರ ಗುಣಮಟ್ಟ ಪರಿಶೀಲಿಸಿ ಲವಣಾಂಶ ಇಲ್ಲದೆ ಇರುವ ಮರಳನ್ನು ಮಾತ್ರ ಪೂರೈಕೆ ಮಾಡಲಾಗುತ್ತದೆ ಎಂದು ವಿವರಣೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ಸಿಆರ್ ಜಡ್ ಪ್ರದೇಶದಲ್ಲಿ 2018-19 ಹಾಗೂ 2019-20ರಲ್ಲಿ 22 ದಿಬ್ಬಗಳಿಂದ 11.53 ಲಕ್ಷ ಮೆಟ್ರಿಕ್ ಟನ್ ಮರಳನ್ನು ತೆಗೆಯಲಾಗಿತ್ತು. 2020-21ರಲ್ಲಿ 13 ದಿಬ್ಬಗಳಿಂದ 10.58, 2018-19ರಲ್ಲಿ 5 ದಿಬ್ಬಗಳಿಂದ 0.17, ಉಡುಪಿ ಜಿಲ್ಲೆಯಲ್ಲಿ 2019-20ರಲ್ಲಿ 8 ದಿಬ್ಬಗಳಿಂದ 7.96, 2020-21ರಲ್ಲಿ 10 ದಿಬ್ಬಗಳಿಂದ 7.13 ಲಕ್ಷ ಮೆಟ್ರಿಕ್ ಟನ್ ಮರಳಿನ ದಿಬ್ಬಗಳಿವೆ ಎಂದು ಅಂಕಿ-ಸಂಖ್ಯೆಗಳ ವಿವರ ನೀಡಿದರು.

ಕರಾವಳಿ ನಿಯಂತ್ರಣ ವಲಯ ಹೊರತುಪಡಿಸಿದ (ನಾನ್ ಸಿಆರ್ ಜಡ್ ) ಪ್ರದೇಶಗಳಲ್ಲಿ 2018 ರಿಂದ 2021ರ ವರೆಗೆ 49 ಬ್ಲಾಕ್‍ಗಳಲ್ಲಿ 12.71 ಲಕ್ಷ ಮೆಟ್ರಿಕ್ ಟನ್ ಮರಳು ಬ್ಲಾಕ್‍ಗಳನ್ನು ಗುರುತಿಸಿದ್ದೇವೆ. ಇದೇ ರೀತಿ ಉಡುಪಿ ಜಿಲ್ಲೆಯಲ್ಲಿ 2018 ರಿಂದ 2021ರ ವರೆಗೆ 28 ಬ್ಲಾಕ್‍ಗಳಲ್ಲಿ 3.47 ಲಕ್ಷ ಮೆಟ್ರಿಕ್ ಟನ್ ಮರಳು ಬ್ಲಾಕ್‍ಗಳನ್ನು ಗುರುತಿಸಲಾಗಿದೆ ಎಂದರು.
ಲೋಕೋಪಯೋಗಿ ಇಲಾಖೆ ಮತ್ತು ನಿರ್ಮಾಣ ಕಾಮಗಾರಿ ನಿರ್ವಹಿಸುವ ಇತರೆ ಇಲಾಖೆಗಳ ಮೂಲಕ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 2018-19ರಲ್ಲಿ 7.10 ಲಕ್ಷ ಮೆಟ್ರಿಕ್ ಟನ್ ಬೇಡಿಕೆ ಇತ್ತು. ಇದರಲ್ಲಿ 6.22 ಲಕ್ಷ ಮೆಟ್ರಿಕ್ ಟನ್ ಪೂರೈಸಿದ್ದು, 373.42 ಲಕ್ಷ ರಾಜಸ್ವವನ್ನು ಸಂಗ್ರಹಿಸಲಾಗಿದೆ.  2019-20ರಲ್ಲಿ 8.00 ಲಕ್ಷ ಮೆಟ್ರಿಕ್ ಟನ್ ಬೇಡಿಕೆಯಲ್ಲಿ 5.20 ಮರಳು ಪೂರೈಸಿದ್ದು, 301.38 ಲಕ್ಷ ರಾಜಸ್ವವನ್ನು ಸಂಗ್ರಹಣೆ ಮಾಡಲಾಗಿದೆ. 2020-21ರ ಫೆಬ್ರವರಿ ಅಂತ್ಯಕ್ಕೆ 9 ಲಕ್ಷ ಮೆಟ್ರಿಕ್ ಟನ್ ಮರಳು ಬೇಡಿಕೆ ಇದ್ದರೆ ಇದರಲ್ಲಿ 2.96 ಮೆಟ್ರಿಕ್ ಟನ್ ಪೂರೈಸಿದ್ದು, 274.67 ಲಕ್ಷ ರಾಜಸ್ವವನ್ನು ಸಂಗ್ರಹಿಸಿದ್ದೇವೆ ಎಂದು ತಿಳಿಸಿದರು.

ಉಡುಪಿಯಲ್ಲಿ 2018-19ರಲ್ಲಿ 8 ಲಕ್ಷ ಮೆಟ್ರಿಕ್ ಟನ್ ಬೇಡಿಕೆ ಪೈಕಿ 1.41 ಮೆಟ್ರಿಕ್ ಟನ್ ವಿತರಣೆ ಮಾಡಿ 84.84 ಲಕ್ಷ ರಾಜಸ್ವವನ್ನು ಸಂಗ್ರಹಿಸಲಾಗಿದೆ. 2019-20ರಲ್ಲಿ 8.50 ಲಕ್ಷ ಮೆಟ್ರಿಕ್ ಟನ್ ಬೇಡಿಕೆ ಪೈಕಿ 4.23 ಲಕ್ಷ ಮೆಟ್ರಿಕ್ ಟನ್ ವಿತರಿಸಿದ್ದೇವೆ. ಇದೇ ವರ್ಷ 253.85 ಲಕ್ಷ ರಾಜಸ್ವವನ್ನು ಸಂಗ್ರಹಿಸಲಾಗಿದೆ. ಪ್ರಸಕ್ತ ವರ್ಷದ ಫೆಬ್ರವರಿ ಅಂತ್ಯಕ್ಕೆ 9 ಲಕ್ಷ ಮೆಟ್ರಿಕ್ ಟನ್ ಬೇಡಿಕೆ ಇದ್ದು, ಇದರಲ್ಲಿ 4.86 ಲಕ್ಷ ಮೆಟ್ರಿಕ್ ಟನ್ ಪೂರೈಕೆಯಾಗಿದ್ದು, 393.85 ಲಕ್ಷ ರಾಜಸ್ವ ಸಂಗ್ರಹಣೆಯಾಗಿದೆ ಎಂದು ಹೇಳಿದರು.

2018-19ರಲ್ಲಿ 182 ಪ್ರಕರಣಗಳನ್ನು ಪತ್ತೆಹಚ್ಚಿ 130 ಮೊಕದ್ದಮೆಗಳನ್ನು ದಾಖಲಿಸಲಾಗಿದೆ. ಇದರಲ್ಲಿ 37.60 ಲಕ್ಷ ದಂಡ ವಸೂಲಿ ಮಾಡಿ 9138 ಲಕ್ಷ ಮೆಟ್ರಿಕ್ ಟನ್ ಮರಳು ವಶಪಡಿಸಿಕೊಳ್ಳಲಾಗಿದೆ. 2019-20ರಲ್ಲಿ 144 ಪ್ರಕರಣಗಳನ್ನು ಪತ್ತೆಹಚ್ಚಿ 127 ಮೊಕದ್ದಮೆ ದಾಖಲಾಗಿ 9.66 ಲಕ್ಷ ದಂಡ ವಸೂಲಿ ಮಾಡಿ 4747 ಲಕ್ಷ ಮೆಟ್ರಿಕ್ ಟನ್ ವಶಪಡಿಸಿಕೊಳ್ಳಲಾಗಿದೆ. ಫೆಬ್ರವರಿ ಅಂತ್ಯಕ್ಕೆ 155 ಪ್ರಕರಣಗಳನ್ನು ಪತ್ತೆಹಚ್ಚಿ 11 ಮೊಕದ್ದಮೆಗಳನ್ನು ದಾಖಲಿಸಿ 53.98 ಲಕ್ಷ ವಶಪಡಿಸಿಕೊಂಡು 6197 ಲಕ್ಷ ಮೆಟ್ರಿಕ್ ಟನ್ ಮರಳನ್ನು ವಶಪಡಿಸಿಕೊಂಡಿದ್ದೇವೆ ಎಂದರು.

ಉಡುಪಿಯಲ್ಲಿ 2018-19ರಲ್ಲಿ 110 ಪ್ರಕರಣ ಪತ್ತೆಯಾಗಿ, 83 ಮೊಕದ್ದಮೆ ದಾಖಲಾಗಿದ್ದವು. ಇದರಲ್ಲಿ 23.50 ಲಕ್ಷ ದಂಡ ವಸೂಲಿ ಜತೆಗೆ 116.50 ಲಕ್ಷ ಮೆಟ್ರಿಕ್ ಟನ್ ಮರಳನ್ನು ಜಿಲ್ಲಾಡಳಿತ ವಶಪಡಿಸಿಕೊಂಡಿದೆ. 2019-20ರಲ್ಲಿ 306 ಪ್ರಕರಣಗಳ ಪೈಕಿ 152 ಮೊಕದ್ದಮೆ ದಾಖಲಾಗಿ ₹ 81.60 ಲಕ್ಷ ದಂಡ ವಸೂಲಿ, 991 ಲಕ್ಷ ಮೆಟ್ರಿಕ್ ಟನ್ ಮರಳು ಹಿಂಪಡೆಯಲಾಗಿದೆ. ಫೆಬ್ರವರಿ ಅಂತ್ಯಕ್ಕೆ 162 ಪ್ರಕರಣನ್ನು ಪತ್ತೆಹಚ್ಚಿ 32 ಮೊಕದ್ದಮೆಗಳನ್ನು ದಾಖಲಿಸಿದ್ದೇವೆ. ಇದರಲ್ಲಿ 36.70 ಲಕ್ಷ ದಂಡ ವಸೂಲಿ ಹಾಗೂ 418 ಮೆಟ್ರಿಕ್ ಟನ್ ಮರಳನ್ನು ಜಪ್ತಿ ಮಾಡಲಾಗಿದೆ. ರಾಜ್ಯದಲ್ಲಿ ಅಕ್ರಮವಾಗಿ ಸಂಗ್ರಹಿಸಿರುವ ಜಿಲೆಟಿನ್ ಸೇರಿದಂತೆ ಇನ್ನಿತರ ಸ್ಫೋಟಕಗಳನ್ನು ಪೆÇಲೀಸ್, ಕಂದಾಯ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಒಪ್ಪಿಸುವಂತೆ ಮತ್ತೊಮ್ಮೆ ಎಚ್ಚರಿಕೆ ನೀಡುವುದಾಗಿ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

ವಿಧಾನ ಪರಿಷತ್‍ನಲ್ಲಿ ಸದಸ್ಯ ವಿಜಯಸಿಂಗ್ ಪರವಾಗಿ ಅರವಿಂದ ಕುಮಾರ್ ಅರಳಿ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕಲ್ಲು ಕ್ವಾರಿ ಸ್ಫೋಟ ಪ್ರಕರಣ ಪುನರಾವರ್ತಿತವಾಗದಂತೆ ಬಿಗಿ ಕ್ರಮ ಕೈಗೊಂಡಿದೆ. ಅಕ್ರಮ ಸ್ಫೋಟಕಗಳ ಸಂಗ್ರಹಿಸುವವರು, ಸಾಗಿಸುವವರು ಬಳಸುವವರ ವಿರುದ್ಧ ಕೇಸು ದಾಖಲಿಸಲಾಗುತ್ತದೆ. ಎಲ್ಲಾ ರಾಜ್ಯಗಳಲ್ಲಿ ಅಕ್ರಮ ಸಂಗ್ರಹಣೆಯನ್ನು ಸರ್ಕಾರಕ್ಕೆ ಒಪ್ಪಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಬೀದರ್ ಜಿಲ್ಲೆಯಲ್ಲಿ 16 ಕ್ವಿಂಟಾಲ್ ಜಿಲೆಟಿನ್ ಸಂಗ್ರಹವಾಗಿರುವುದು ನಿಜ. ಎಫ್‍ಐಆರ್ ದಾಖಲಿಸಿ ಇದರ ತನಿಖೆ ನಡೆಸಲಾಗುತ್ತಿದೆ. ತನಿಖೆ ಬಳಿಕ ಮಾಲೀಕರ ತಪ್ಪು ಕಂಡು ಬಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರಿಸಿದರು.

ಸಾರ್ವಜನಿಕ ಹಾಗೂ ಸರ್ಕಾರಿ ಕಾಮಗಾರಿಗಳಿಗೆ ನಿಯಮಿತವಾಗಿ ನಿಗದಿತ ದರದಲ್ಲಿ ಮರಳು ಪೂರೈಕೆ ಮಾಡುವ ಸಂಬಂಧ 5.5.2020ರಂದು ನೂತನ ಮರಳು ನೀತಿಯನ್ನು ಜಾರಿ ಮಾಡಲಾಗಿದೆ. 1, 2 ಮತ್ತು 3ನೆ ಶ್ರೇಣಿಯ ಹಳ್ಳ, ತೊರೆ, ಕೆರೆಗಳಲ್ಲಿ ಲಭ್ಯವಿರುವ ಮರಳನ್ನು ಗ್ರಾಪಂ ವ್ಯಾಪ್ತಿಯಲ್ಲಿ ಸ್ಥಳೀಯ ಜನರು ಸಾರ್ವಜನಿಕ ಮತ್ತು ಸರ್ಕಾರಿ ಕಟ್ಟಡಗಳಿಗೆ ಮರಳನ್ನು ಬಳಸಿಕೊಳ್ಳಲು ಅವಕಾಶ ನೀಡಿದ್ದೇವೆ. ರಾಜ್ಯದಲ್ಲಿ 193 ಮರಳು ಪ್ರದೇಶಗಳನ್ನು ಗುರುತಿಸಿದ್ದು, ಈ ಪೈಕಿ 87 ಮರಳು ಬ್ಲಾಕ್‍ಗಳನ್ನು ಆಯಾ ಜಿಲ್ಲಾ ಮರಳು ಸಮಿತಿಯಿಂದ ಅಧಿಸೂಚನೆ ಹೊರಡಿಸಲಾಗಿದೆ.  ಪ್ರವಾಹದಿಂದ ಪಟ್ಟಾ ಜಮೀನಿನಲ್ಲಿ ಸಂಗ್ರಹವಾಗಿರುವ ಮರಳನ್ನು ತೆರವುಗೊಳಿಸಲು 301 ಪಟ್ಟಾದಾರರಿಗೆ ಅನುಮತಿ ನೀಡಿ 84.796 ಮೆಟ್ರಿಕ್ ಟನ್ ಮರಳನ್ನು ವಿಲೇವಾರಿ ಮಾಡಿದ್ದೇವೆ ಎಂದು ಸಚಿವ ನಿರಾಣಿ ತಿಳಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreCoastal AreaDakshina KannadaDepartment of PWDKannada News WebsiteKaravali newsLatest News KannadaLocal NewsMangaloreMinister Murugesh NiraniSand NewsState NewsUdupiಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡಬೆಂಗಳೂರುಮಂಗಳೂರು
Previous Post

ಸಾಗರದ ಅಕ್ಷಯ್ ಪಂಡಿತ್’ಗೆ ಪ್ರತಿಷ್ಠಿತ ‘ಈ ಹೊತ್ತಿಗೆ’ ಕಥಾಪ್ರಶಸ್ತಿ

Next Post

ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ: ಸಿದ್ಧರಾಮಯ್ಯ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ: ಸಿದ್ಧರಾಮಯ್ಯ ಆಗ್ರಹ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನೆ ಬಳಿ ಬರಬೇಡಿ | ಫ್ಯಾನ್ಸ್’ಗೆ ಗೋಲ್ಡನ್ ಸ್ಟಾರ್ ಗಣೇಶ್ ಹೀಗೆ ಹೇಳಿದ್ದೇಕೆ?

July 1, 2025

ಜುಲೈ 9ರಂದು ರಾಷ್ಟ್ರಾದ್ಯಂತ ಬಿಸಿಯೂಟ ನೌಕರರ ಮುಷ್ಕರ

July 1, 2025

India Powers Global Festivities as the World celebrates International Kho Kho Day

July 1, 2025

ಬೆಂಗಳೂರು | ಜುಲೈ 4ರವರೆಗೆ ವಿಶೇಷ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳು

July 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನೆ ಬಳಿ ಬರಬೇಡಿ | ಫ್ಯಾನ್ಸ್’ಗೆ ಗೋಲ್ಡನ್ ಸ್ಟಾರ್ ಗಣೇಶ್ ಹೀಗೆ ಹೇಳಿದ್ದೇಕೆ?

July 1, 2025

ಜುಲೈ 9ರಂದು ರಾಷ್ಟ್ರಾದ್ಯಂತ ಬಿಸಿಯೂಟ ನೌಕರರ ಮುಷ್ಕರ

July 1, 2025

India Powers Global Festivities as the World celebrates International Kho Kho Day

July 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!