ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟಿನ ಆದೇಶದಂತೆ, ರಾಜ್ಯದಲ್ಲಿ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 6 ಗಂಟೆಯವರೆಗೆ ಯಾವುದೇ ದ್ವನಿವರ್ಧಕಗಳ ಉಪಯೋಗಕ್ಕೆ ಅವಕಾಶವಿಲ್ಲ. ಬೇರೆ ಸಮಯದಲ್ಲಿ ದ್ವನಿ ವರ್ಧಕಗಳಿಂದ ಉತ್ಪತ್ತಿಯಾಗುವ ಶಬ್ದದ ಪ್ರಮಾಣ ಯಾವ ಸಾಂದ್ರತೆಯಲ್ಲಿರಬೇಕು ಎಂಬುದರ ಬಗ್ಗೆ ಮಾರ್ಗಸೂಚಿಯಲ್ಲಿ ಹೇಳಲಾಗಿದೆ ಎಂದರು.
ಯಾವ ದರ್ಜೆಯ ಅಧಿಕಾರಿಗಳು, ದ್ವನಿವರ್ಧಕಗಳಿಗೆ ಅನುಮತಿ ನೀಡಬಹುದು ಹಾಗೂ ಕಾನೂನು ಬಾಹಿರವಾಗಿ ಇರುವ ದ್ವನಿವರ್ಧಕಗಳನ್ನು ತೆಗೆದು ಹಾಕಬಹುದು ಎಂಬುದರ ಬಗ್ಗೆಯೂ, ಮಾರ್ಗಸೂಚಿಗಳು ಸ್ಪಷ್ಟವಾಗಿ ಉಲ್ಲೇಖಿಸುತ್ತವೆ. ಕೈಗಾರಿಕಾ ವಲಯ, ವಸತಿ ಪ್ರದೇಶಗಳು, ವಾಣಿಜ್ಯ ವಲಯ ಹಾಗೂ ನಿಶಬ್ದ ವಲಯಗಳಲ್ಲಿ ಯಾವ ಪ್ರಮಾಣದಲ್ಲಿ ಶಬ್ದ ಸಾಂದ್ರತೆ ಇರಬಹುದು ಎಂದೂ ಮಾರ್ಗಸೂಚಿಯಲ್ಲಿ ಹೇಳಲಾಗಿದೆ ಎಂದು ತಿಳಿಸಿದರು.
Also read: ಜಲಜ್ಞಾನದ ಕೊರತೆಯಿಂದಾಗಿ ನೀರಿನ ಸದ್ಭಳಕೆ, ಸಂಗ್ರಹಣೆ ಮತ್ತು ಮರುಬಳಕೆ ಅಸಾಧ್ಯ…
ಖಾಸಗಿ ಪ್ರದೇಶದಲ್ಲಿ ಸಹ ಶಬ್ದ ಪ್ರಮಾಣ ನಿಗದಿ:
ಅನುಮತಿ ಇಲ್ಲದೆ ದ್ವನಿವರ್ಧಕಗಳನ್ನು ಉಪಯೋಗಿಸುತ್ತಿರುವವರು ಇನ್ನು 15 ದಿನದ ಒಳಗೆ, ಸಂಬಂಧ ಪಟ್ಟ ಸಕ್ಷಮ ಅಧಿಕಾರಿಗಳಿಂದ ಅನುಮತಿ ಪಡೆದುಕೊಳ್ಳಬೇಕು.ಇದಕ್ಕೆ ತಪ್ಪಿದ್ದಲ್ಲಿ, ಸಂಬಂಧ ಪಟ್ಟ ಅಧಿಕಾರಿಗಳು, ದ್ವನಿವರ್ಧಕ ಗಳನ್ನು ತೆಗೆಸಿ ಹಾಕುತ್ತಾರೆ. ಇದರಿಂದ ಯಾರಿಗೂ ವಿನಾಯಿತಿ ಇಲ್ಲ. ಚರ್ಚುಗಳು, ಮಸೀದಿಗಳು ಹಾಗೂ ದೇವಸ್ಥಾನಗಳನ್ನು ಒಳಗೊಂಡಂತೆ ಯಾವುದೇ ತಾರತಮ್ಯ ಇಲ್ಲದಂತೆ ಕಾನೂನನ್ನು ಜಾರಿಗೊಳಿಸಲಾಗುವುದು.ಶಬ್ದ ಮಾಲಿನ್ಯ ಉಂಟುಮಾಡುವ ಹಾಗೂ ಅನುಮತಿ ಇಲ್ಲದ ದ್ವನಿವರ್ಧಕಗಳನ್ನು, ತೆಗೆದು ಹಾಕುವ ಪ್ರಕ್ರಿಯೆ, ಇಡೀ ರಾಜ್ಯದಲ್ಲಿ ನಡೆಯಲಿದೆ ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post