ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶಾಲೆಯಲ್ಲಿ ವಿದ್ಯಾರ್ಥಿನಿಗೆ ಬಲವಂತವಾಗಿ ಕೋಳಿ ಮೊಟ್ಟೆ ತಿನ್ನಿಸಿರುವ ಘಟನೆಗೆ Forcefully fed egg to student ಸಂಬಂಧಪಟ್ಟಿರುವ ಶಿಕ್ಷಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಗ್ರಹಿಸಿದೆ.
ಈ ಕುರಿತಂತೆ ಮಹಾಸಭಾದ ಅಧ್ಯಕ್ಷರಾದ ಅಶೋಕ್ ಹಾರನಹಳ್ಳಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದ್ದು, ಘಟನೆಗೆ ಸಂಬಂಧಪಟ್ಟವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯೋರ್ವಳಿಗೆ ಶಿಕ್ಷಕರು ಶಾಲೆಯಲ್ಲಿ ಒತ್ತಾಯಪೂರ್ವಕವಾಗಿ ಕೋಳಿಮೊಟ್ಟೆ ತಿನ್ನಿಸಿರುತ್ತಾರೆ ಎಂದು ತಿಳಿದುಬಂದಿದ್ದು, ಆಹಾರ ಪದ್ಧತಿ ವೈಯಕ್ತಿಕ ವಿಚಾರ – ವ್ಯಕ್ತಿಗಳ ಧಾರ್ಮಿಕ ಆಚರಣೆ, ಆಹಾರ ಪದ್ಧತಿಗೆ ಯಾರೂ ಅಡ್ಡಿಪಡಿಸುವಂತಿಲ್ಲ. ಸಸ್ಯಾಹಾರಿಯಾದ ವಿದ್ಯಾರ್ಥಿನಿಗೆ ಈರೀತಿ ಇಷ್ಟವಿಲ್ಲದ ಆಹಾರವನ್ನು ಬಲತ್ಕರಿಸುವುದು ಸರಿಯಲ್ಲ. ಅದರಲ್ಲೂ ಶಾಲೆಗಳಲ್ಲಿ, ಎಳೆವಯಸ್ಸಿನ ಮಕ್ಕಳ ಮನಸ್ಸಿನ ಮೇಲೆ ಅಗಾಧ ಪರಿಣಾಮವನ್ನುಂಟು ಮಾಡುತ್ತದೆ ಎಂದು ತಿಳಿಸಿದ್ದಾರೆ.
Also read: ತೀರ್ಥಹಳ್ಳಿ ತುಂಗಾ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಎಂ.ಎಸ್. ಮಂಜುನಾಥ್‌ಗೆ ಬೀಳ್ಕೊಡುಗೆ
ವಿದ್ಯಾರ್ಥಿನಿಯ ಪೋಷಕರು ಈ ವಿಷಯಕ್ಕೆ ಸಂಬಂಧಪಟ್ಟಂತೆ ಶಿವಮೊಗ್ಗ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ (ಆಡಳಿತ) ಮನವಿ ಪತ್ರ ಸಲ್ಲಿಸಿದ್ದು, ಕೂಡಲೇ ಘಟನೆಗೆ ಸಂಬಂಧಿಸಿದ ಶಿಕ್ಷಕರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post