ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಈಗಾಗಲೇ ನಿಗಧಿಪಡಿಸಿರುವಂತೆ ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯು ಪರೀಕ್ಷೆಗಳು Second PU Exam ನಡೆಯಲಿದ್ದು, ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಲಾಗಿದೆ. ಎಸ್‌ಎಸ್‌ಎಲ್‌ಸಿ ಮತ್ತು ಪೂರ್ವಭಾವಿ ಪರೀಕ್ಷೆಗಳಂತೆ ಇದು ಎಂದು ಭಾವಿಸಿ ವಿದ್ಯಾರ್ಥಿಗಳು ಯಾವುದೇ ಒತ್ತಡಕ್ಕೆ ಒಳಗಾಗದೇ, ಭಯಪಡದೇ ಧೈರ್ಯದಿಂದ ದ್ವಿತೀಯ ಪರೀಕ್ಷೆ ಎದುರಿಸಿ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ Minister B C Nagesh ತಿಳಿಸಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಲಿದ್ದು, ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ 3,46,936 ಬಾಲಕಿಯರು ಹಾಗೂ 3,37,319 ಬಾಲಕರು. 61,808 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 21,928 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.
ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತದೆ. ಪ್ರತಿ ವರ್ಷದಂತೆ ಬೆಂಗಳೂರು ದಕ್ಷಿಣದಲ್ಲಿ ಅತಿ ಹೆಚ್ಚು ಪರೀಕ್ಷಾ ಕೇಂದ್ರ 73, ರಾಮನಗರದಲ್ಲಿ ಅತಿ ಕಡಿಮೆ 13 ಪರೀಕ್ಷಾ ಕೇಂದ್ರಗಳನ್ನು ನಿಗಧಿಪಡಿಸಲಾಗಿದೆ. ವಿಜ್ಞಾನ ವಿಭಾಗದಲ್ಲಿ 2,10,569 ವಿದ್ಯಾರ್ಥಿಗಳು, ಕಲಾ ವಿಭಾಗದಲ್ಲಿ 2,28,167, ವಾಣಿಜ್ಯ ವಿಭಾಗ 2,45,519 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಅಳವಡಿಸಲಾಗಿದೆ ಎಂದರು.
Also read: ಸಿಎಂ ಅಧ್ಯಕ್ಷತೆಯಲ್ಲಿ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ ಸಭೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post