ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕೇಂದ್ರ ಸರ್ಕಾರ ಬೆಳೆಗಳಿಗೆ ಬೆಂಬಲ ಬೆಲೆ ಏರಿಕೆ ಮಾಡಿದ್ದು, ಸರ್ಕಾರ ರೈತಪರವಾಗಿದೆ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದೆ.
ರೈತರಿಗೆ ಸಹಾಯವಾಗಲೆಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟ ಈ ನಿರ್ಧಾರ ಕೈಗೊಂಡಿದ್ದು, ಕೃಷಿ ಬೆಳೆಗಳ ಮೇಲಿನ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡಲಾಗಿದ್ದು ಭವಿಷ್ಯದಲ್ಲಿಯೂ ಇದು ಮುಂದುವರಿಸುವುದಾಗಿ ಕೇಂದ್ರ ಕೃಷಿ ಮಂತ್ರಿ ತೋಮರ್‌ಜಿ ಹೇಳಿದ್ದಾರೆ.
2021-22ರ ಬೆಳೆ ವರ್ಷಕ್ಕೆ ಭತ್ತದ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ)ಯನ್ನು ಪ್ರತಿ ಕ್ವಿಂಟಲ್‌ಗೆ 72 ರೂಪಾಯಿ ಏರಿಕೆ ಮಾಡಿದ್ದು, ಒಟ್ಟಾರೆ ಕ್ವಿಂಟಲ್ ಬೆಲೆ 1,940 ರೂ.ಗೆ ಏರಿಕೆಯಾಗಿದೆ.
2021-22 ಬೆಳೆ ವರ್ಷಕ್ಕೆ (ಜುಲೈ-ಜೂನ್) ಭತ್ತದ ಎಂಎಸ್‌ಪಿಯನ್ನು ಕ್ವಿಂಟಲ್‌ಗೆ 1,940 ರೂ.ಗೆ ಹೆಚ್ಚಿಸಲು ಕ್ಯಾಬಿನೆಟ್ ಅನುಮೋದನೆ ನೀಡಿದೆ. ಜೋಳದ ಎಂಎಸ್‌ಪಿಯನ್ನು ಕಳೆದ ವರ್ಷ ಕ್ವಿಂಟಲ್‌ಗೆ 2,150 ರೂ.ಗಳಿಂದ ಪ್ರಸಕ್ತ ವರ್ಷದಲ್ಲಿ ಕ್ವಿಂಟಲ್‌ಗೆ 2,250 ರೂ.ಗೆ ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post