ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಕ್ಕೆ ಪರಾರಿಯಾಗಿರುವ ತಮ್ಮ ಮೊಮ್ಮಗ, ಸಂಸದ ಪ್ರಜ್ವಲ್ ರೇವಣ್ಣ #Prajwal Revanna ಅವರಿಗೆ ಖಡಕ್ ಫೈನಲ್ ವಾರ್ನಿಂಗ್ ನೀಡಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು, #H D Devegowda ಎಲ್ಲಿದ್ರೂ ಬಂದು ಸರೆಂಡರ್ ಆಗು, ನನ್ನ ತಾಳ್ಮೆ ಪರೀಕ್ಷೆ ಮಾಡಬೇಡ ಎಂದಿದ್ದಾರೆ.
ಈ ಕುರಿತಂತೆ ಜೆಡಿಎಸ್ ಪಕ್ಷದ ಮೂಲಕ ಅಧಿಕೃತ ಪ್ರಕಟಣೆ ಹೊರಡಿಸಿರುವ ದೊಡ್ಡಗೌಡ್ರು, ಜನರು ನನ್ನ ಮತ್ತು ನನ್ನ ಕುಟುಂಬದರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಹಗರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು. ಅದರೂ ನಾನು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ ಎಂದಿದ್ದಾರೆ.
ಇತ್ತೀಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉತ್ಪ್ರೇಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ ಎಂದಿದ್ದಾರೆ.
Also read: ಕುಂಸಿ | ಕೃಷಿ ಹೊಂಡಕ್ಕೆ ಬಿದ್ದು ಇಬ್ಬರ ದಾರುಣ ಸಾವು | ಗರ್ಭಿಣಿ ಪತ್ನಿಯ ಆಕ್ರಂದನ
ಇರಲಿ ಸದ್ಯಕ್ಕೆ ನಾನು ಏನು ಮಾಡಬಹುದು ಎಂದರೆ ಪ್ರಜ್ವಲ್ ಎಲ್ಲಿದ್ದರೂ ಬಂದು, ಪೊಲೀಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸು ಎಂದು ಮುಲಾಜಿಲ್ಲದೆ ಹೇಳಬಲ್ಲೆ ಎಂದಿದ್ದಾರೆ.
ಪ್ರಜ್ವಲ್, ನಾನು ನಿನಗೆ ಕೊಡುತ್ತಿರುವ ಕೊನೆಯ ಎಚ್ಚರಿಕೆ ಇದೆ. ನೀನು ಮಾಡಿದ್ದೀಯ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಈ ಎಚ್ಚರಿಕೆಗೆ ನೀನು ತಲೆಬಾಗದಿದ್ದಲ್ಲಿ ನೀನು ನನ್ನ ಕುಟುಂಬದವರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ನನ್ನ ಬಗ್ಗೆ ಗೌರವವಿದ್ದರೆ ಕೂಡಲೇ ಬಂದು ಪೊಲೀಸರಿಗೆ ಶರಣಾಗು ಎಂದು ಎಚ್ಚರಿಕೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post