ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ #CM Siddaramaiah ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಮಧ್ಯೆ ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯು ನಡೆಯಬಾರದು ಎಂದು ಬಯಸುವ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಹಲವಾರು ಮುಖಂಡರು ನನ್ನನ್ನು ಭೇಟಿ ಮಾಡಿರುತ್ತಾರೆ. ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸುವಂತೆ ಮಾಡಲು ಸರ್ಕಾರವು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದಿದ್ದಾರೆ.

Also read: ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಹಲವಾರು ಅಮಾಯಕರ, ಪೊಲೀಸರ ಮತ್ತು ನಕ್ಸಲೀಯ ಚಟುವಟಿಕೆಗಳಲ್ಲಿ ಇದ್ದವರ ಜೀವಹಾನಿಯೂ ಆಗಿದೆ. ಆದರೆ, ಪ್ರಜಾತಾಂತ್ರಿಕ ಸಮಾಜದಲ್ಲಿ ಬಂದೂಕಿನ ಮೂಲಕ ಬದಲಾವಣೆ ತರಲು ಹೊರಟಿರುವ ಆದರ್ಶವಾದಿಗಳು ತಮ್ಮ ಜೀವವನ್ನೂ ತೆತ್ತುಕೊಳ್ಳುತ್ತಾರೆ, ಇತರರ ಜೀವಹಾನಿಗೂ ಕಾರಣವಾಗುತ್ತಾರೆ. ಇದು ನೋವಿನ ವಿಚಾರವಾದರೂ, ಸಂವಿಧಾನಬದ್ಧವಾಗಿ ಆಡಳಿತ ನಡೆಸುವ ಸರ್ಕಾರ ಸುಮ್ಮನೇ ಕೂರುವುದು ಸಾಧ್ಯವಿಲ್ಲ ಎಂದಿದ್ದಾರೆ.

ನಕ್ಸಲೀಯರ ಶರಣಾಗತಿ ನೀತಿಯನ್ವಯ ಹಂತ ಹಂತವಾಗಿ ಆರ್ಥಿಕ ನೆರವು ನೀಡಲಾಗುವುದು ಹಾಗೂ ಆಯುಧಗಳನ್ನು ಸರ್ಕಾರಕ್ಕೆ ಅದ್ಯಾರ್ಪಣೆ ಮಾಡುವ ನಕ್ಸಲೀಯರಿಗೆ ಪ್ರೋತ್ಸಾಹ ಧನ, ಕೌಶಲ್ಯ ತರಬೇತಿಗಳು ನೀಡುವುದಲ್ಲದೆ ಅವರುಗಳ ಪುನರ್ವಸತಿಗೂ ಸಹ ಎಲ್ಲ ಕ್ರಮಗಳನ್ನು ಸಹಾನುಭೂತಿಯಿಂದ ಹಾಗೂ ಆದ್ಯತೆ ಮೇರೆಗೆ ಪರಿಗಣಿಸಲು ಕ್ರಮವಹಿಸಲಾಗುವುದು ಎಂದಿದ್ದಾರೆ.
ಅವರ ಮೇಲಿನ ಮೊಕದ್ದಮೆ / ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದೆ ಹಾಗೂ ಅವರಿಗೆ ಕಾನೂನಿನ ನೆರವು ಸಹ ನೀಡಲಾಗುವುದು. ಈಗಾಗಲೇ ಶರಣಾಗತರಾದ ನಕ್ಸಲೀಯರ ಅಗತ್ಯಗಳನ್ನು ಸಹ ಗುರುತಿಸಿ ಅವರಿಗೂ ಸಹ ಪುನರ್ವಸತಿ ಕಲ್ಪಿಸುವ ಪ್ರಕ್ರಿಯೆಯನ್ನು ಮಾಡಲಾಗುತ್ತಿದೆ. ಅದೇ ಸಂದರ್ಭದಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವ ಮತ್ತು ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗುವ ಯಾರೇ ಆದರೂ, ಅವರ ವಿರುದ್ಧ ಕಠಿಣವಾದ ಕಾನೂನು ಕ್ರಮವನ್ನು ನಮ್ಮ ಸರ್ಕಾರವು ತೆಗೆದುಕೊಳ್ಳಲಿದೆ ಎಂದೂ ಈ ಸಂದರ್ಭದಲ್ಲಿ ಸ್ಪಷ್ಟಪಡಿಸಬಯಸುತ್ತೇನೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post