No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನಕ್ಸಲೀಯರ ಶರಣಾಗತಿ | ಆದ್ಯತೆ ಮೇರೆಗೆ ಸಹಾನುಭೂತಿ ಕ್ರಮ | ಸಿಎಂ ಭರವಸೆ

kalpa News by kalpa News
December 31, 2024
in ಬೆಂಗಳೂರು ನಗರ
0
ನಾಡಹಬ್ಬ ದಸರಾ ಜನರ ಉತ್ಸವವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ #CM Siddaramaiah ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಮಧ್ಯೆ ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯು ನಡೆಯಬಾರದು ಎಂದು ಬಯಸುವ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಹಲವಾರು ಮುಖಂಡರು ನನ್ನನ್ನು ಭೇಟಿ ಮಾಡಿರುತ್ತಾರೆ. ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸುವಂತೆ ಮಾಡಲು ಸರ್ಕಾರವು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದಿದ್ದಾರೆ.
ಆದರೆ ನಕ್ಸಲೀಯರು #Naxalite ಮುಖ್ಯವಾಹಿನಿಗೆ ಬರಲು ಮಾತುಕತೆ ನಡೆಸಲು ಮುಂದಾಗಿದ್ದರೆ, ಈ ಪ್ರಕ್ರಿಯೆಯನ್ನು ಸರ್ಕಾರ ಕಾನೂನಿನ ಚೌಕಟ್ಟಿನಲ್ಲಿ ಸ್ವಾಗತಿಸಿ, ಸಹಾನುಭೂತಿಯಿಂದ ನಡೆದುಕೊಳ್ಳುತ್ತದೆ. ನಕ್ಸಲೀಯ ಚಟುವಟಿಕೆಗಳು ಕರ್ನಾಟಕದಲ್ಲಿ ಎಂದೂ ನೆರೆಯ ರಾಜ್ಯಗಳಂತೆ ವಿಪರೀತ ಪ್ರಮಾಣದಲ್ಲಿ ನಡೆದಿಲ್ಲ. ಆದರೆ, ಮಲೆನಾಡಿನಲ್ಲಿ ಎರಡು ದಶಕಗಳಿಂದ ಆಗಾಗ್ಗೆ ನಕ್ಸಲೀಯ ಚಟುವಟಿಕೆಗಳು ಕಾಣುತ್ತಲಿವೆ ಮತ್ತು ಆ ಕಾರಣದಿಂದ ಹಿಂಸೆ ಹಾಗೂ ಸಾವು-ನೋವುಗಳು ಸಂಭವಿಸಿವೆ ಎಂದಿದ್ದಾರೆ.

Also read: ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ

ಹಲವಾರು ಅಮಾಯಕರ, ಪೊಲೀಸರ ಮತ್ತು ನಕ್ಸಲೀಯ ಚಟುವಟಿಕೆಗಳಲ್ಲಿ ಇದ್ದವರ ಜೀವಹಾನಿಯೂ ಆಗಿದೆ. ಆದರೆ, ಪ್ರಜಾತಾಂತ್ರಿಕ ಸಮಾಜದಲ್ಲಿ ಬಂದೂಕಿನ ಮೂಲಕ ಬದಲಾವಣೆ ತರಲು ಹೊರಟಿರುವ ಆದರ್ಶವಾದಿಗಳು ತಮ್ಮ ಜೀವವನ್ನೂ ತೆತ್ತುಕೊಳ್ಳುತ್ತಾರೆ, ಇತರರ ಜೀವಹಾನಿಗೂ ಕಾರಣವಾಗುತ್ತಾರೆ. ಇದು ನೋವಿನ ವಿಚಾರವಾದರೂ, ಸಂವಿಧಾನಬದ್ಧವಾಗಿ ಆಡಳಿತ ನಡೆಸುವ ಸರ್ಕಾರ ಸುಮ್ಮನೇ ಕೂರುವುದು ಸಾಧ್ಯವಿಲ್ಲ ಎಂದಿದ್ದಾರೆ.

ಕರ್ನಾಟಕದ ಎಲ್ಲ ನಕ್ಸಲೀಯರು ಸಂಪೂರ್ಣವಾಗಿ ಶರಣಾಗತರಾಗಿ ಮುಖ್ಯವಾಹಿನಿಗೆ ಬರಲು ನಮ್ಮ ಸರ್ಕಾರವು ಬಯಸುತ್ತದೆ. ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮುಂದಾದ್ದಲ್ಲಿ ಶರಣಾಗತಿ ಕುರಿತು ಈಗಾಗಲೇ ಸರ್ಕಾರವು ನೀತಿಯನ್ನು ರೂಪಿಸಿದ್ದು, ಈ ನೀತಿಯನ್ನು ಸರಳೀಕರಣಗೊಳಿಸಿ, ಸಮಪರ್ಕವಾಗಿ ಜಾರಿ ಮಾಡಲಾಗುವುದೆಂದು ಭರವಸೆ ನೀಡುತ್ತೇನೆ ಎಂದಿದ್ದಾರೆ.

ನಕ್ಸಲೀಯರ ಶರಣಾಗತಿ ನೀತಿಯನ್ವಯ ಹಂತ ಹಂತವಾಗಿ ಆರ್ಥಿಕ ನೆರವು ನೀಡಲಾಗುವುದು ಹಾಗೂ ಆಯುಧಗಳನ್ನು ಸರ್ಕಾರಕ್ಕೆ ಅದ್ಯಾರ್ಪಣೆ ಮಾಡುವ ನಕ್ಸಲೀಯರಿಗೆ ಪ್ರೋತ್ಸಾಹ ಧನ, ಕೌಶಲ್ಯ ತರಬೇತಿಗಳು ನೀಡುವುದಲ್ಲದೆ ಅವರುಗಳ ಪುನರ್ವಸತಿಗೂ ಸಹ ಎಲ್ಲ ಕ್ರಮಗಳನ್ನು ಸಹಾನುಭೂತಿಯಿಂದ ಹಾಗೂ ಆದ್ಯತೆ ಮೇರೆಗೆ ಪರಿಗಣಿಸಲು ಕ್ರಮವಹಿಸಲಾಗುವುದು ಎಂದಿದ್ದಾರೆ.

ಅವರ ಮೇಲಿನ ಮೊಕದ್ದಮೆ / ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದೆ ಹಾಗೂ ಅವರಿಗೆ ಕಾನೂನಿನ ನೆರವು ಸಹ ನೀಡಲಾಗುವುದು. ಈಗಾಗಲೇ ಶರಣಾಗತರಾದ ನಕ್ಸಲೀಯರ ಅಗತ್ಯಗಳನ್ನು ಸಹ ಗುರುತಿಸಿ ಅವರಿಗೂ ಸಹ ಪುನರ್ವಸತಿ ಕಲ್ಪಿಸುವ ಪ್ರಕ್ರಿಯೆಯನ್ನು ಮಾಡಲಾಗುತ್ತಿದೆ. ಅದೇ ಸಂದರ್ಭದಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವ ಮತ್ತು ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗುವ ಯಾರೇ ಆದರೂ, ಅವರ ವಿರುದ್ಧ ಕಠಿಣವಾದ ಕಾನೂನು ಕ್ರಮವನ್ನು ನಮ್ಮ ಸರ್ಕಾರವು ತೆಗೆದುಕೊಳ್ಳಲಿದೆ ಎಂದೂ ಈ ಸಂದರ್ಭದಲ್ಲಿ ಸ್ಪಷ್ಟಪಡಿಸಬಯಸುತ್ತೇನೆ ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2024/04/VID-20240426-WA0008.mp4

 

Tags: BangaloreCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNaxaliteNews_in_KannadaNews_Kannadaನಕ್ಸಲೀಯರುಬೆಂಗಳೂರುಮುಖ್ಯಮಂತ್ರಿ ಸಿದ್ಧರಾಮಯ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ

Next Post

ಸರ್ಕಾರಿ ಗೋಮಾಳ ಜಾಗದಲ್ಲಿ ಅಕ್ರಮವಾಗಿ ಸಮುದಾಯ ಭವನ ನಿರ್ಮಾಣ | ಕ್ರಮಕ್ಕೆ ಆಗ್ರಹ

kalpa News

kalpa News

Next Post
ಸರ್ಕಾರಿ ಗೋಮಾಳ ಜಾಗದಲ್ಲಿ ಅಕ್ರಮವಾಗಿ ಸಮುದಾಯ ಭವನ ನಿರ್ಮಾಣ | ಕ್ರಮಕ್ಕೆ ಆಗ್ರಹ

ಸರ್ಕಾರಿ ಗೋಮಾಳ ಜಾಗದಲ್ಲಿ ಅಕ್ರಮವಾಗಿ ಸಮುದಾಯ ಭವನ ನಿರ್ಮಾಣ | ಕ್ರಮಕ್ಕೆ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL