ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ವಿಧಾನ ಸಭಾ ಕ್ಷೇತ್ರದ ಶಂಕರ ಮಠ ವಾರ್ಡ್‌ನ ಸ್ವಾಮಿ ವಿವೇಕಾನಂದ ಆಟದ ಮೈದಾನದಲ್ಲಿ ಇಂದು ಬೆಳಿಗ್ಗೆ ಮಹಾಲಕ್ಷ್ಮಿ ಎಜುಕೇಶನಲ್ ಟ್ರಸ್ಟ್ ಹಾಗೂ ನೆಮ್ಮದಿ ಯೋಗ ಶಾಲೆ ವತಿಯಿಂದ ಸಾಮೂಹಿಕ 108 ಸೂರ್ಯ ನಮಸ್ಕಾರ ಯಜ್ಞ ಸೂರ್ಯ ಥಾನ್ ಹಮ್ಮಿಕೊಳ್ಳಲಾಗಿತ್ತು.

ಅಬಕಾರಿ ಸಚಿವ ಕೆ. ಗೋಪಾಲಯ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ಸದೃಢ ದೇಹ ಹೊಂದಲು, ದೈಹಿಕ ಮತ್ತು ಮಾನಸಿಕ ಒತ್ತಡವನ್ನು ನಿಯಂತಿಸಿ, ಮನಸ್ಸನ್ನು ಹತೋಟಿಯಲ್ಲಿ ಇಟ್ಟುಕೊಂಡು ಉಲ್ಲಾಸಿತ ಜೀವನ ನಡೆಸಲು ಯೋಗ ಸಹಕಾರಿ ಎಂದು ಅವರು ಹೇಳಿದರು.
ಮಹಾಮಾರಿ ಕರೋನ ಸೋಂಕು ತಗುಲಿ ಜನ ಜೀವನ ಅಸ್ತವ್ಯಸ್ತಗೊಂಡಿರುವುದರಿಂದ ಸಾರ್ವಜನಿಕರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಆಗುತ್ತಿಲ್ಲ. ಹಾಗಾಗಿ ದೈನಂದಿನ ಜೀವನದಲ್ಲಿ ವ್ಯಾಯಾಮ, ಯೋಗ ಎಲ್ಲವನ್ನೂ ಮೈಗೂಡಿಸಿಕೊಳ್ಳಬೇಕು ಎಂದು ಸಚಿವರು ಕರೆ ನೀಡಿದರು.
ಸಮಾರಂಭದಲ್ಲಿ ರಾಜ್ಯ ಒಬಿಸಿ ಮೋರ್ಚಾ ಅಧ್ಯಕ್ಷ ನರೇಂದ್ರ ಬಾಬು, ಬಿಬಿಎಂಪಿ ಮಾಜಿ ಉಪ ಮಹಾಪೌರರಾದ ಹೇಮಲತಾ ಗೋಪಾಲಯ್ಯ, ಹರೀಶ್, ಮಹಾಲಕ್ಷ್ಮೀ ಎಜುಕೇಷನ್ ಟ್ರಸ್ಟ್‌ನ ಅಧ್ಯಕ್ಷ ಎನ್. ಜಯರಾಂ, ವೆಂಕಟೇಶ ಮೂರ್ತಿ, ಗಂಗ ಹನುಮಯ್ಯ, ಯೋಗ ಗುರು ಮುಕುಂದ ರಾವ್ ಸೇರಿದಂತೆ ಹಲವಾರು ಗಣ್ಯರು, ಯೋಗಪಟುಗಳು ಉಪಸ್ಥಿತರಿದ್ದರು..
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















