ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರು: ನಗರದ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್‌ಐಎ ಹಾಗೂ ಬೆಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಪತ್ತೆಯಾಗಿದ್ದ ಆರೋಪಿ ತಬ್ರೇಜ್ (35)ನನ್ನು ಬಂಧಿಸಿದ್ದಾರೆ.
2020ರ ಆಗಸ್ಟ್ 12ರಂದು ನಡೆದಿದ್ದ ಗಲಭೆಯ ಬಳಿಕ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಎನ್‌ಐಎ 109 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿತ್ತು.
ಸದ್ಯ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ತಬ್ರೇಜ್, ಹಳೆ ಬೆಂಗಳೂರು ಬಡಾವಣಿಯ ನಿವಾಸಿಯಾಗಿದ್ದ. ಹಾಗೂ ಸಗಾಯ್ ಪುರಂ ವಾರ್ಡಿನ ಎಸ್‌ಡಿಪಿಐ ಕಾರ್ಯಕರ್ತನಾಗಿದ್ದ.
ಸಾಮಾಜಿಕ ಜಾಲತಾಣಗಳ ಮೂಲಕ ಗಲಭೆಗೆ ಪ್ರಚೋದನೆ ನೀಡಿದ್ದ ಆರೋಪಿ, ಘಟನೆಯಲ್ಲಿ ಸಾರ್ವಜನಿಕರ ಆಸ್ತಿಪಾಸ್ತಿ ಹಾನಿಗೆ ಕಾರಣವಾಗಿದ್ದ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post