ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಲಾಕ್‌ಡೌನ್‌ನಿಂದಾಗಿ ಚಲನಚಿತ್ರ ರಂಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರು ಸಂಕಷ್ಟದಲ್ಲಿದ್ದು, ರಾಜ್ಯ ಸರ್ಕಾರ ನೆರವು ನೀಡಬೇಕೆಂದು ಮಾಜಿ ವಿಧಾನಪರಿಷತ್ ಸದಸ್ಯೆ ತಾರಾ ಅನುರಾಧ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೋನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ನಿಯಂತ್ರಿಸಲು ಈಗಾಗಲೇ ಸರ್ಕಾರ ಸೆಮಿ ಲಾಕ್‌ಡೌನ್ ಜಾರಿ ಮಾಡಿದ್ದು, ಇದನ್ನು ಮುಂದುವರಿಸುವುದರಿಂದ ರಾಜ್ಯದ ಅಸಂಘಟಿತ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿರುವುದಾಗಿ ಮಾಧ್ಯಮಗಳಿಂದ ತಿಳಿದು ಬಂದಿರುತ್ತದೆ. ಅದರಂತೆ ಚಲನಚಿತ್ರರಂಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರು ಹಾಗೂ ಪೋಷಕ ನಟರು, ಸಹ ಅಸಂಘಟಿತ ಕಾರ್ಮಿಕ ವರ್ಗಕ್ಕೆ ಸೇರಿದವರಾಗಿದ್ದು ಇವರಿಗೂ ಸಹ ವಿಶೇಷ ಪ್ಯಾಕೇಜ್‌ನಲ್ಲಿ ಸೇರಿಸಿಕೊಂಡು ಚಲನಚಿತ್ರರಂಗದ ಕಾರ್ಮಿಕರ ಕುಟುಂಬ ವರ್ಗದವರಿಗೂ ಆಸರೆ ಆಗಬೇಕೆಂದು ಒತ್ತಾಯಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post