ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕರ್ನಾಟಕ ರಾಜ್ಯದ 19ನೇ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಇಂದು ಬೆಳಿಗ್ಗೆ ಅಧಿಕಾರ ಸ್ವೀಕರಿಸಿದರು.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ನೂತನ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್‌ಗೆ ಪ್ರಮಾಣವಚನ ಬೋಧಿಸಿದರು.
ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ಗಮಿತ ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಬಿ,ಎಸ್, ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಆರ್. ಅಶೋಕ್, ಸಂಸದೆ ಸುಮಲತಾ ಅಂಬರೀಶ್ ಇನ್ನಿತರರು ಉಪಸ್ಥಿತರಿದ್ದರು.
ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವರಾಗಿದ್ದ ಗೆಹ್ಲೋಟ್ ಅವರು ಈ ಹಿಂದೆ ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ಸಹ ಸೇವೆ ಸಲ್ಲಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post