No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Saturday, August 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜೂನ್ 30ರಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ: ಸಚಿವ ಸುರೇಶ್ ಕುಮಾರ್

ಜುಲೈ 1ರಿಂದ 1-10 ನೇ ತರಗತಿಗಳ ಮಕ್ಕಳ ಉಪಯೋಗಕ್ಕಾಗಿ ದೀಕ್ಷಾ ಪೋರ್ಟಲ್

kalpa News by kalpa News
June 28, 2021
in ಬೆಂಗಳೂರು ನಗರ
0
ಶಾಲೆ ಆರಂಭಕ್ಕೆ ದಿನಾಂಕ ನಿಗದಿಯಾಗಿಲ್ಲ, ತರಾತುರಿಯಲ್ಲಿ ತೆರೆಯುವುದಿಲ್ಲ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಕಳೆದ 2-3 ವರ್ಷಗಳಿಂದ ಕಾಯುತ್ತಿದ್ದ ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಗೆ ಮಹೂರ್ತ ಕೂಡಿಬಂದಿದ್ದು, ಜೂ. 30ರಿಂದಲೇ ಪ್ರಾರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ವರ್ಗಾವಣೆ ಪ್ರಕ್ರಿಯೆ ವಿವರಗಳನ್ನು ಪ್ರಕಟಿಸಿದ ಅವರು, ಅಧಿಕೃತ ವೇಳಾಪಟ್ಟಿ ಹಾಗೂ ಅಧಿಸೂಚನೆ ಜೂ. 30ಕ್ಕೆ ಪ್ರಕಟಗೊಳ್ಳಲಿದ್ದು, ಅಂದಿನಿಂದಲೇ ವರ್ಗಾವಣಾ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ ಎಂದರು.

2019-20ನೇ ಸಾಲಿನಲ್ಲಿ ಕಡ್ಡಾಯ ಹಾಗೂ ಹೆಚ್ಚುವರಿ ವರ್ಗಾವಣೆಗೆ ಒಳಗಾಗಿದ್ದ ಶಿಕ್ಷಕರಿಗೆ ನ್ಯಾಯ ದೊರಕಿಸುವುದು ನಮ್ಮ ಜವಾಬ್ದಾರಿಯಾಗಿತ್ತು. ಅವರ ಸಂಕಷ್ಟಗಳನ್ನು ನಾನು ಕಣ್ಣಾರೆ ನೋಡಿದ್ದೇನೆ. ವಿಧಾನ ಮಂಡಲದಲ್ಲಿ ನಾವು ಉಭಯ ಸದನಗಳಲ್ಲಿ ಅನುಮೋದನೆ ಪಡೆದು ಕಾಯ್ದೆ ಅಧಿಸೂಚಿಸಿದ ಸಂದರ್ಭದಲ್ಲಿ ಕೆಲವು ಶಿಕ್ಷಕರು ನ್ಯಾಯಾಲಯದಿಂದ ತಡೆಯಾಜ್ಞೆಯನ್ನು ತಂದಿದ್ದರು. ಅದಕ್ಕಾಗಿ ನಾವು ಸುಗ್ರೀವಾಜ್ಞೆಯ ಮೂಲಕ ಕಾಯ್ದೆಗೆ ತಿದ್ದುಪಡಿ ತರಲು ಮುಂದಾದೆವು. ಸಚಿವ ಸಂಪುಟದ ಅನುಮೋದನೆಯನ್ನು ಪಡೆದು ರಾಜ್ಯಪಾಲರು ಒಪ್ಪಿದ ಬಳಿಕ ಸುಗ್ರೀವಾಜ್ಞೆಯನ್ನು‌ ನಾವು ಹೊರತಂದಿದ್ದೇವೆ. ಪೂರಕ‌ ನಿಯಮಗಳನ್ನು ಸಹ ಅಂತಿಮಗೊಳಿಸಿ, ವರ್ಗಾವಣಾ‌ ಪ್ರಕ್ರಿಯೆಗೆ ಚಾಲನೆ ನೀಡಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ವರ್ಗಾವಣೆ ಪ್ರಕ್ರಿಯೆ ಹಿಂದಿನ ಘಟನಾವಳಿಗಳನ್ನು ಸಚಿವರು ಮೆಲುಕು ಹಾಕಿದರು.

2019-2020ರಲ್ಲಿ ಕಡ್ಡಾಯ/ ಹೆಚ್ಚುವರಿ ವರ್ಗಾವಣೆಗೊಂಡ ಶಿಕ್ಷಕರಿಗೆ ಮೊದಲ ಆದ್ಯತೆ ದೊರೆಯಲಿದೆ. ಈ ಬಾರಿಗೆ ಸಂಬಂಧಿಸಿದಂತೆ ವಲಯ ಅಥವಾ ಹೆಚ್ಚುವರಿ ವರ್ಗಾವಣೆ ಯಾವುದೂ ಇರುವುದಿಲ್ಲ. 2019-20ರಲ್ಲಿ ಕಡ್ಡಾಯ/ಹೆಚ್ಚುವರಿ ವರ್ಗಾವಣೆಗೊಳಗಾಗಿದ್ದ ಶಿಕ್ಷಕರಿಗೆ ಮೊದಲ ಆದ್ಯತೆಯ ಕೌನ್ಸೆಲಿಂಗ್ ಇರಲಿದೆ. ಈಗಾಗಲೇ ಸ್ವೀಕೃತಗೊಂಡಿರುವ 75000 ಅರ್ಜಿಗಳಿಗೆ ಸಂಬಂಧಿಸಿದಂತೆ ಕೌನ್ಸೆಲಿಂಗ್ ಪ್ರಕ್ರಿಯೆ ಪ್ರಾರಂಭ ಮಾಡಲಾಗುತ್ತದೆ. ಈ ಶಿಕ್ಷಕರನ್ನು‌ ಹೊರತುಪಡಿಸಿ‌ ಹೆಚ್ಚುವರಿಯಾಗಿ ಅರ್ಹರಾಗುವ ಶಿಕ್ಷಕರಿಗೂ ಸಹ ಎರಡನೇ ಹಂತದ ಅವಕಾಶ ಕಲ್ಪಿಸಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು.
ಶಿಕ್ಷಕರು ಜವಾಬ್ದಾರಿ ಮೆರೆಯಬೇಕಿದೆ:
ಸಾವಿರಾರು ಶಿಕ್ಷಕರು ಜಾತಕಪಕ್ಷಿಗಳ ಹಾಗೆ ಕಾಯುತ್ತಿದ್ದಾರೆ. ಇದು ಸರ್ಕಾರ ಅವರಿಗಾಗಿ ಕಷ್ಟಪಟ್ಟು ಹೊರತಂದಿರುವ ಅತ್ಯಂತ ಶಿಕ್ಷಕ‌ಸ್ನೇಹಿ‌‌ ಕಾಯ್ದೆಯಾಗಿದೆ. ಇದನ್ನು ಅನುಷ್ಠಾನಗೊಳಿಸಿಕೊಂಡು ಅದರ‌ ಪ್ರಯೋಜನವನ್ನು ಪಡೆಯುವುದು, ತಮ್ಮ‌ ಸಮುದಾಯದ ಹಿತಕ್ಕೆ ಮಿಡಿಯುವುದೂ‌ ಅವರ ಕರ್ತವ್ಯವಾಗಿದೆ. ಎಲ್ಲ‌ ಶಿಕ್ಷಕರೂ ಇದನ್ನು ಸ್ವಾಗತಿಸುವ ಜವಾಬ್ದಾರಿ ಹೊಂದಿದ್ದಾರೆ. ಯಾವುದೇ ಅಡೆತಡೆಗಳಿಲ್ಲದೇ ಇದನ್ನು ಅನುಷ್ಠಾನ ಮಾಡಲು ಇಲಾಖೆ ಸಿದ್ಧತೆ ಮಾಡಿಕೊಂಡಿದೆ ಎಂದು ಸಚಿವರು ವಿವರಿಸಿದರು.

ಈ ಬಾರಿ ವರ್ಗಾವಣಾ‌ ಪ್ರಕ್ರಿಯೆಯೂ‌ ಅತ್ಯಂತ‌ ಪಾರದರ್ಶಕವಾಗಿರಲಿದೆ. ಶಿಕ್ಷಕ ಮಿತ್ರ ಆಪ್ ಮೂಲಕ ಶಿಕ್ಷಕರು‌ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ‌ ಪಾಲ್ಗೊಳ್ಳಬಹುದು. ಸ್ಥಳ ಆಯ್ಕೆಯನ್ನೂ ಮಾಡಿಕೊಳ್ಳಬಹುದು. ಹಾಗಾಗಿ ಇಂತಹುದೊಂದು ಶಿಕ್ಷಕರ‌ ಪರವಾದ‌ ಸಂಪೂರ್ಣ ಪಾರದರ್ಶಕವಾದ ವ್ಯವಸ್ಥೆಯನ್ನು ಪ್ರತಿಯೊಬ್ಬರೂ ಸ್ವಾಗತಿಸಿ, ಬಳಸಿ ಪ್ರಯೋಜನ ಪಡೆಯಬೇಕೆಂದು ಸುರೇಶ್ ಕುಮಾರ್ ಮನವಿ ಮಾಡಿದರು.

ಭೌತಿಕ ಶಾಲಾರಂಭಕ್ಕೆ ಕ್ರಿಯಾ ಯೋಜನೆ:
ಜುಲೈ1ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದ್ದರೂ ಹಿನ್ನೆಲೆಯಲ್ಲಿ ಭೌತಿಕ ತರಗತಿಗಳು ಆರಂಭವಾಗಿಲ್ಲ. ನಮ್ಮ‌ ಮಕ್ಕಳು ಕಲಿಕೆಯಿಂದ ವಂಚಿತರಾಗದಿರಲು ಕ್ರಿಯಾಯೋಜನೆಯನ್ನು ರೂಪಿಸಬೇಕೆನ್ನುವುದು ಎಲ್ಲರ ಒಲವಾಗಿದ್ದು, ಆ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕ್ರಮಕ್ಕೆ ಮುಂದಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ಶಿಕ್ಷಣ ತಜ್ಞರ ಜೊತೆ ಸುದೀರ್ಘ ಸಭೆ‌ ನಡೆಸಲಾಗಿದೆ. ಡಾ.ದೇವಿಶೆಟ್ಟಿ ಅವರ ವರದಿಯನ್ನು ಸಹ ಸಭೆಯಲ್ಲಿ‌ ಅವಲೋಕಿಸಿದ್ದು, ವಿಶೇಷವಾಗಿ ಗ್ರಾಮೀಣ ಭಾಗದ ನಮ್ಮ‌ ಮಕ್ಕಳು ಕಲಿಕೆಯಿಂದ ವಂಚಿತರಾಗದಿರಲು ಕ್ರಿಯಾಯೋಜನೆಯನ್ನು ರೂಪಿಸಬೇಕೆನ್ನುವುದು ಎಲ್ಲರ ಒಲವಾಗಿದೆ ಎಂದು ತಿಳಿಸಿದರು.

ಕಳೆದ ಸಾಲಿನಲ್ಲಿ ನಾವು ಜಾರಿಗೆ ತಂದ ಯಶಸ್ವಿ ಉಪಕ್ರಮವಾದ ವಿದ್ಯಾಗಮ 2.0 ಅನುಷ್ಠಾನ ಮಾಡಬೇಕೆನ್ನುವುದು ಎಲ್ಲರ‌ ಅಪೇಕ್ಷೆಯಾಗಿದೆ. ಆರೋಗ್ಯ ಇಲಾಖೆ ಹಲವಾರು ಆಯಾಮಗಳನ್ನು ಅವಲೋಕಿಸಿ ಶಾಲೆ ತೆರೆಯಲು ಅನುಮತಿಯನ್ನು ನೀಡಬೇಕಾಗುತ್ತದೆ. ಅದಕ್ಕಾಗಿಯೇ, ವಿಷಯ ಪರಿಣಿತರು, ಸರ್ಕಾರದ ತಾಂತ್ರಿಕ‌‌ಸಲಹಾ‌ ಸಮಿತಿ ಸದಸ್ಯರು, ಮಕ್ಕಳ ತಜ್ಞರು ಸೇರಿದಂತೆ ಈ‌ ಬಗ್ಗೆ ನಿರಂತರವಾದ ಸಲಹೆಗಳನ್ನು ನೀಡುವ ಶಿಕ್ಷಣ ಟಾಸ್ಕ್ ಫೋರ್ಸ್ ರಚನೆ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಇನ್ನೆರಡು ಮೂರು ದಿನಗಳಲ್ಲಿ ಈ ಕುರಿತಂತೆ ಅಧಿಕೃತ ಆದೇಶ ಹೊರಬೀಳಲಿದೆ ಎಂದರು.

ಈ ಸಮಿತಿ ವರ್ಷ ಪೂರ್ತಿ ಸ್ಥಳೀಯ ಅವಶ್ಯಕತೆಗೆ ಅನುಗುಣವಾಗಿ ಶಿಕ್ಷಣ ನೀಡುವ ವ್ಯವಸ್ಥೆಯನ್ನು ಅವಲೋಕಿಸಲಿದೆ. ಕಾಲಕಾಲಿಕ ವರದಿಗಳನ್ನು ಸಲ್ಲಿಸಲಿದೆ. ಇಂದಿನ ಸಂದರ್ಭದಲ್ಲಿ‌‌ ಕೇಂದ್ರೀಕೃತ ನಿರ್ಧಾರಗಳಿಗಿಂತಾ ಸ್ಥಳೀಯ ಅವಶ್ಯಕತೆಗೆ‌ ಅನುಗುಣವಾದ‌ ನಿರ್ಧಾರಗಳು‌ ಮುಖ್ಯವಾಗುತ್ತವೆ. ಉದ್ದೇಶಿತ ಟಾಸ್ಕ್ ಫೋರ್ಸ್ ಈ‌ ರೀತಿಯ ನಿರಂತರತೆಗೆ, ಶಿಕ್ಷಣ ಉತ್ತರ ದಾಯಿತ್ವಕ್ಕೆ‌ ಪೂರಕವಾಗಿ‌ ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದರು.

ಕಲಿಕೆಯ‌ ಮಟ್ಟವನ್ನು ಅಳೆಯುವುದು, ಮೌಲ್ಯಮಾಪನ ಪ್ರಕ್ರಿಯೆಯಲ್ಲಿ‌ ತರಬಹುದಾದ ಸುಧಾರಣೆಗಳನ್ನು ಅವಲೋಕಿಸುವುದು ಸೇರಿದಂತೆ ಹಲವು ಜವಾಬ್ದಾರಿಗಳನ್ನು ಈ‌ ಸಮಿತಿ ನಿರ್ವಹಿಸಲಿದೆ ಎಂದರು.

ಇನ್ನು ಇದೇ‌ ಜುಲೈ ಒಂದರಿಂದ 1-10 ನೇ ತರಗತಿಗಳ ಮಕ್ಕಳ ಉಪಯೋಗಕ್ಕಾಗಿ ದೂರದರ್ಶನದ‌ ಚಂದನ ವಾಹಿನಿಯ ಮೂಲಕ ಪಾಠಗಳನ್ನು ನಾವು ಪ್ರಾರಂಭಿಸುತ್ತಿದ್ದೇವೆ. ದೀಕ್ಷಾ ಪೋರ್ಟಲ್ ನಲ್ಲಿ ಎಲ್ಲ ಪಾಠಗಳ ವಿಡಿಯೋಗಳು, ಆಡಿಯೋಗಳು ಲಭ್ಯವಾಗುವಂತೆ ಮಾಡಿದ್ದೇವೆ. ಸುಮಾರು 22000 ಇ-ಕಂಟೆಂಟ್ ಅಲ್ಲಿ ಲಭ್ಯವಿದೆ ಎಂದು ಹೇಳಿದರು.

ಮಕ್ಕಳ ವಾಣಿ- ಯೂ ಟ್ಯೂಬ್ ಚಾನೆಲ್ ನಲ್ಲಿಯೂ ಪಾಠಗಳು ಲಭ್ಯವಿರಲಿದೆ. ಶಿಕ್ಷಕರು ಮಕ್ಕಳನ್ನು ಸಂಪರ್ಕಿಸಿ ಅವರ ಕಲಿಕೆಯನ್ನು ಪರಾಮರ್ಶೆ‌ ಮಾಡಲಿದ್ದಾರೆ. ಕಳೆದ ಸಾಲಿನಲ್ಲಿ‌ ಆದ ಕಲಿಕೆಯ ನಷ್ಟವನ್ನು ಸರಿತೂಗಿಸುವ ಜವಾಬ್ದಾರಿಯನ್ನು‌ ನಾವು ಹೊರಲಿದ್ದೇವೆ. ಕೋವಿಡ್ ಸಮಯದಲ್ಲಿ ವಾರ್ಷಿಕ‌ ಪರೀಕ್ಷೆಯೆನ್ನುವ ಪರಿಕಲ್ಪನೆಯ ಆಚೆಯೂ ನಾವು ಆಲೋಚನೆ ಮಾಡಬೇಕಾಗಿದೆ. ಅದಕ್ಕಾಗಿ, ಈಗಿನಿಂದಲೇ ಶಿಕ್ಷಕರು ಸಿದ್ಧತೆಗಳನ್ನು ಪ್ರಾರಂಭಿಸಿಕೊಳ್ಳಲಿದ್ದಾರೆ. ನಿರಂತರ ಮೌಲ್ಯಮಾಪನ ಈ ಬಾರಿ‌ ಹಿಂದೆಂದಿಗಿಂತಲೂ ಪರಿಣಾಮಕಾರಿಯಾಗಿರಲಿದೆ ಎಂದು ಸಚಿವರು ಹೇಳಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreEducation NewsKannada NewsKannada News LiveKannada News OnlineKannada News WebsiteKannada WebsiteLatest News KannadaMinister Suresh KumarNews in KannadaNews KannadaState Newsಬೆಂಗಳೂರುಸಚಿವ ಸುರೇಶ್ ಕುಮಾರ್
Share251Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೋವಿಡ್-19 ಲಸಿಕಾ ಅಭಿಯಾನಕ್ಕೆ ಡಿ.ಎಸ್. ಅರುಣ್ ಚಾಲನೆ

Next Post

ಚನ್ನಗಿರಿ: ಕೋವಿಡ್-19ನಿಂದ ಮೃತಪಟ್ಟವರ ಮನೆಗಳಿಗೆ ತೆರಳಿ ಸಾಂತ್ವನ ಹೇಳಿದ ಸಚಿವ ಬಿ.ಎ.ಬಸವರಾಜ್

kalpa News

kalpa News

Next Post
ಚನ್ನಗಿರಿ: ಕೋವಿಡ್-19ನಿಂದ ಮೃತಪಟ್ಟವರ ಮನೆಗಳಿಗೆ ತೆರಳಿ ಸಾಂತ್ವನ ಹೇಳಿದ ಸಚಿವ ಬಿ.ಎ.ಬಸವರಾಜ್

ಚನ್ನಗಿರಿ: ಕೋವಿಡ್-19ನಿಂದ ಮೃತಪಟ್ಟವರ ಮನೆಗಳಿಗೆ ತೆರಳಿ ಸಾಂತ್ವನ ಹೇಳಿದ ಸಚಿವ ಬಿ.ಎ.ಬಸವರಾಜ್

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL