ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಕೋಲಾರ |
ಶಿಕ್ಷಕರು ವಿದ್ಯಾರ್ಥಿಗಳಿಗೆ ಮನೋಸ್ಥೈರ್ಯ ತುಂಬುವ ಅವಶ್ಯಕತೆಯಿದೆ ಎಂದು ಮೇಲ್ಮನೆ ಉಪಸಭಾನಾಯಕ ಡಾ.ವೈ.ಎ. ನಾರಾಯಣಸ್ವಾಮಿ ಹೇಳಿದ್ದಾರೆ.
ಕೋಲಾರದಲ್ಲಿಂದು ಡಾ. ವೈ.ಎ.ನಾರಾಯಣಸ್ವಾಮಿ ಶಿಕ್ಷಕರ ಸಂಘ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಜೊತೆ ಮಾತನಾಡುತ್ತಾ ಅವರ ಸಮಸ್ಯೆಗಳ ಕುರಿತು ಚರ್ಚಿಸಿದರು.
ಕೋವಿಡ್‌ನಿಂದಾಗಿ ಸ್ಥಗಿತಗೊಂಡಿದ್ದ ಶಾಲಾಕಾಲೇಜುಗಳು ಈಗ ಮತ್ತೆ ಪುನಾರಾರಂಭಗೊಂಡಿವೆ. ಶಿಕ್ಷಕರು ವಿದ್ಯಾರ್ಥಿಗಳು ಹಾಗೂ ಪೋಷಕರ ಮನಸ್ಥಿತಿ ಪರಿಸ್ಥಿತಿಯನ್ನರಿತು ನಡೆದುಕೊಳ್ಳುವ ಅವಶ್ಯಕತೆಯಿದೆ. ಶೈಕ್ಷಣಿಕ ಕಾರ್ಯದ ಜೊತೆಗೆ ಆರೋಗ್ಯದತ್ತವೂ ಕೂಡ ಅರಿವು ಮೂಡಿಸುವ ಅವಶ್ಯಕತೆ ಎಂದು ಸಲಹೆ ನೀಡಿದರು.
ಹಲವು ಸಮಸ್ಯೆಗಳ ನಡುವೆಯೂ ಶಿಕ್ಷಕ ಸಮುದಾಯ ಮಕ್ಕಳಿಗೆ ಶಿಕ್ಷಣ ನೀಡುವ ಮಹತ್ತರ ಜವಾಬ್ದಾರಿಯನ್ನು ಚಾಚುತಪ್ಪದೇ ನಿರ್ವಹಿಸುತ್ತಿದ್ದು, ಶಿಕ್ಷಕರ ನೈಜ ಸಮಸ್ಯೆಗಳನ್ನು ಅರಿತು ಪರಿಹರಿಸುವ ಜವಾಬ್ದಾರಿ ಜನಪ್ರತಿನಿಧಿಗಳ ಮೇಲಿದೆ. ರಾಜ್ಯ ಸರ್ಕಾರಿ ನೌಕರರು ಕೋವಿಡ್ ಸಂದರ್ಭದಲ್ಲಿಯೂ ಕೂಡ ಕೊರೋನಾ ವಾರಿಯರ್ಸ್ ಆಗಿ ಕೆಲಸ ಮಾಡಿದ್ದಾರೆ. ಶಿಕ್ಷಕರ ಸಂಘಗಳು ಬಡ್ತಿವೇತನ, ಅನುದಾನ, ವರ್ಗಾವಣೆ ಸೇರಿದಂತೆ ಹಲವು ಸಮಸ್ಯೆಗಳನ್ನು ತಮ್ಮ ಗಮನಕ್ಕೆ ತಂದಿದ್ದು, ಪ್ರಸ್ತುತ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ಬಗ್ಗೆ ಚರ್ಚಿಸಲು ಬರುವುದಿಲ್ಲ. ಹೀಗಾಗಿ ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಶಿಕ್ಷಕರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಡಾ. ವೈ.ಎ.ನಾರಾಯಣಸ್ವಾಮಿ ಭರವಸೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
 
	    	





 Loading ...
 Loading ... 
							



 
                
Discussion about this post