ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತೆಲುಗು ನಟ ನಾಗಾರ್ಜುನ ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಕಳೆದ ಶುಕ್ರವಾರ ನಿಧನರಾದ ಪುನೀತ್ ಅವರ ಸದಾಶಿವನಗರ ನಿವಾಸಕ್ಕೆ ಅಪರಾಹ್ನ ಆಗಮಿಸಿದ ನಾಗಾರ್ಜುನ, ಪುನೀತ್ ಫೋಟೋಗೆ ಅಂತಿಮ ನಮನ ಸಲ್ಲಿಸಿದರು. ಪುನೀತ್ ಪತ್ನಿ, ಮಕ್ಕಳು ಹಾಗೂ ಸಹೋದರ ಡಾ. ಶಿವರಾಜ್ ಕುಮಾರ್ ಮತ್ತಿತರರೊಂದಿಗೆ ಮಾತುಕತೆ ನಡೆಸಿ, ಧೈರ್ಯ ತುಂಬಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುನೀತ್ ನಿಧನ ಶಾಕಿಂಗ್ ಆಗಿದೆ. ಅವರು ನಿಧನರಾಗಿದ್ದಾರೆ ಎಂಬುದನ್ನು ನಂಬಲಿಕ್ಕೆ ಆಗುತ್ತಿಲ್ಲ, ಅವರು ಸೆಟ್ ನಲ್ಲಿದ್ದಾಗ ಎಲ್ಲರನ್ನು ಹುರಿದುಂಬಿಸುತ್ತಿದ್ದರು ಎಂದು ಸ್ಮರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post