ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತೆಲುಗು ನಟ ನಂದಮೂರಿ ತಾರಕತ್ನ (39) ಹೃದಯಾಸ್ತಂಭನದಿಂದ ನಿಧನರಾಗಿದ್ದಾರೆ.
ಜನವರಿ 27 ರಂದು ಆಂಧ್ರಪ್ರದೇಶದ ಕುಪ್ಪಂನಲ್ಲಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದು ಬಿದಿದ್ದ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗಿತ್ತು. ತೀವ್ರ ಹೃದಯಾಘಾತಕ್ಕೀಡಾಗಿದ್ದ ತಾರಕರತ್ನ ಅವರಿಗೆ ಕಳೆದ 23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ನಂದಮೂರಿ ತಾರಕ ರತ್ನ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆ ಮುಂಭಾಗ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post