ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪಠ್ಯ ಪರಿಷ್ಕರಣೆ ಬಹಳ ಸೂಕ್ಷ್ಮ ವಿಚಾರ. ಮಕ್ಕಳ ಹಿತದೃಷ್ಟಿಯಿಂದ ಕ್ರಮ ತೆಗೆದುಕೊಳ್ಳುತ್ತೇವೆ. ಮಕ್ಕಳ ಭವಿಷ್ಯಕ್ಕೆ ಒಳ್ಳೆಯ ಅಂಶ ಉಳಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ Madhu Bangarappa ತಿಳಿಸಿದರು.
ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷವೇ ಪಠ್ಯ ಪರಿಷ್ಕರಣೆಯಾಗಿದೆ. ಮಕ್ಕಳಿಗೆ ಅವಶ್ಯಕತೆ ಇಲ್ಲದ್ದನ್ನು ತಜ್ಞರು ಪರಿಶೀಲಿಸಿ ತೀರ್ಮಾನಿಸುತ್ತಾರೆ. ಸಂಪುಟದಲ್ಲಿ ಇಟ್ಟೇ ತೀರ್ಮಾನವಾಗಲಿದೆ. ಮುಂದಿನ ಸಂಪುಟದಲ್ಲೇ ಚರ್ಚೆ ಮಾಡಲಾಗುತ್ತದೆ. ಈ ಹಿಂದೆಯೂ ಸಪ್ಲಿಮೆಂಟರಿ ಪರಿಷ್ಕರಣೆ ಆಗಿದ್ದಿದೆ. ಈ ಸಂದರ್ಭದಲ್ಲಿ ಮಕ್ಕಳಿಗೆ ಒತ್ತಡ ಬೇಡ ಎಂದರು.
ಆರಂಭದಲ್ಲಿ ಸೇತು ಬಂಧ ಇರಲಿದೆ. ಮಕ್ಕಳು ಪಠ್ಯಕ್ಕೆ ಹೋಗಲ್ಲ. ಮತ್ತು ಪಠ್ಯದಲ್ಲಿ ಏನು ಓದಿಸಬೇಕು, ಯಾವುದು ಬೇಡ ಎಂಬುದನ್ನು ನಿರ್ಧರಿಸಲಾಗುತ್ತದೆ. ಪಠ್ಯ ಪರಿಷ್ಕರಣೆಯಾಗಬೇಕೆಂದು ಸಾಹಿತಿಗಳು ಸಿಎಂಗೆ ಮನವಿ ಕೊಟ್ಟಿದ್ದಾರೆ. ಮುಖ್ಯಮಂತ್ರಿಯವರು ಕೂಡ ಆಸಕ್ತಿ ತೋರಿಸಿದ್ದಾರೆ. ಪಠ್ಯ ಪುಸ್ತಕ ಪರಿಷ್ಕರಣೆ ಮಾಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದೆವು. ಅದನ್ನು ಮಾಡುತ್ತೇವೆ. ಈ ವಿಷಯದಲ್ಲಿ ಮುಖ್ಯಮಂತ್ರಿಯವರೇ ವಿಶೇಷ ಮುತುವರ್ಜಿ ವಹಿಸಿದ್ದಾರೆ. ಇದು ಖುಷಿಯ ವಿಚಾರ ಎಂದರು.
Also read: ಅತ್ಯಾಕರ್ಷಕ ಕೊಡುಗೆಗಳ ಅತಿದೊಡ್ಡ ಮಳಿಗೆ ಇಮ್ಯಾಜೀನ್ ಶುಭಾರಂಭ
ತಜ್ಞರು ಪಕ್ಷಕ್ಕೆ ಸೀಮಿತವಾಗಿರಲ್ಲ. ಅವರು ಕೊಡುವ ಸಲಹೆ ಪರಿಗಣಿಸಲಾಗುತ್ತದೆ. ತಪ್ಪು ತಿಳುವಳಿಕೆ ತಕ್ಷಣ ತಡೆ ಹಿಡಿಯಬೇಕಾಗುತ್ತದೆ. ಅದನ್ನು ನಾವು ಸಮರ್ಥವಾಗಿ ನಿಭಾಯಿಸುತ್ತೇವೆ. ಯಾವ ಪಠ್ಯ ಬೇಡ ಎಂದು ತಜ್ಞರು ಸೂಚಿಸುತ್ತಾರೋ ಅದನ್ನು ಬೋಧಿಸದಂತೆ ತಿಳಿಸಲು ಅವಕಾಶವಿದೆ ಎಂದರು.
ಶಿಕ್ಷಕರ ನೇಮಕದಲ್ಲಿ ಎರಡು ಸಮಸ್ಯೆ ಇದೆ. ಕಾನೂನಿನ ತೊಡಕಿದೆ ಅದನ್ನು ಎಜಿ ಅವರ ಚರ್ಚೆ ಮಾತನಾಡಲಾಗುತ್ತದೆ. ಶಿಕ್ಷಕರ ಕೊರತೆ ಇದೆ. ಅತಿಥಿ ಶಿಕ್ಷಕರೇ ಸಮಸ್ಯೆಗೆ ಪರಿಹಾರವಲ್ಲ. ಹೀಗಾಗಿ ಆದಷ್ಟು ಶೀಘ್ರವಾಗಿ ಪರಿಹರಿಸಲಾಗುತ್ತದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post