ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅಪೂರ್ಣಗೊಂಡಿರುವ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕು ಭಾಗಮಂಡಲ ಮೇಲ್ಸೇತುವೆ ಕಾಮಗಾರಿ ಯನ್ನ ಜನವರಿ ತಿಂಗಳಾಂತ್ಯಕ್ಕೆ ಮುಗಿಸುವಂತೆ ಕಾವೇರಿ ಜಲ ನಿಗಮ ನಿಯಮಿತದ ಅಧಿಕಾರಿಗಳಿಗೆ ಗಡುವು ನಿಗದಿಗೊಳಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಬೋಸರಾಜು Minister Bose Raju ತಿಳಿಸಿದ್ದಾರೆ.
ಸಚಿವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಹಲವಾರು ವರ್ಷಗಳಿಂದ ಈ ಸೇತುವೆಯ ಕಾಮಗಾರಿ ನಡೆಯುತ್ತಿದೆ. ಆದರೆ, ಇದುವರೆಗೂ ಇದನ್ನ ಪೂರ್ಣಗೊಳಿಸಲಾಗಿಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ಇದನ್ನ ಶೀಘ್ರವಾಗಿ ಸಿದ್ದಗೊಳಿಸುವ ಅವಶ್ಯಕತೆಯಿದೆ. ಅಂತಿಮ ಹಂತದ ಕಾಮಗಾರಿಯನ್ನ ಮುಗಿಸುವ ಅವಶ್ಯಕತೆಯಿದ್ದು, ತಿಂಗಳಾಂತ್ಯದ ಒಳಗೆ ಕಾಮಗಾರಿ ಮುಗಿಸವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
Also read: ಎಸ್’ಸಿ, ಎಸ್’ಟಿ ಜನರು ಹೆಚ್ಚು ವಾಸಿಸುವ ಸ್ಥಳಗಳ ಅಭಿವೃದ್ದಿಗೆ ಕ್ರಿಯಾ ಯೋಜನೆ ರೂಪಿಸಿ: ಸಿಎಂ
ಜಲ ಸಂಪನ್ಮೂಲ ಇಲಾಖೆ ಮತ್ತು ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್ ಅವರು ಮಾತನಾಡಿ, ಅಧಿಕಾರಿಗಳು ಕಾಮಗಾರಿಯನ್ನ ಮುಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಬೇಕು. ಪ್ರತಿ ದಿನ ಕಾಮಗಾರಿ ಪ್ರಗತಿಯ ವರದಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಲ ಸಂಪನ್ಮೂಲ ಇಲಾಖೆ ಮತ್ತು ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್ ಅವರು ಹಾಗೂ ಕಾವೇರಿ ಜಲ ನಿಗಮ ನಿಯಮಿತದ ಅಧಿಕಾರಿಗಳು ಭಾಗವಹಿಸಿದ್ದರು.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post