No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Saturday, August 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ದೇಶವೊಂದರ ಅಭಿವೃದ್ಧಿಯು ಯುವ ಜನರ ಕೌಶಲ್ಯದ ಮಟ್ಟವನ್ನು ಆಧರಿಸಿದೆ: ಸಿಎಂ ಯಡಿಯೂರಪ್ಪ

kalpa News by kalpa News
July 15, 2021
in ಬೆಂಗಳೂರು ನಗರ
0
ದೇಶವೊಂದರ ಅಭಿವೃದ್ಧಿಯು ಯುವ ಜನರ ಕೌಶಲ್ಯದ ಮಟ್ಟವನ್ನು ಆಧರಿಸಿದೆ: ಸಿಎಂ ಯಡಿಯೂರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ರಾಜ್ಯ ಯುವಶಕ್ತಿಯ ಕೌಶಲ್ಯ ಅಭಿವೃದ್ಧಿಯಿಂದ ‘ಕೌಶಲ್ಯ ಕರ್ನಾಟಕದ’ ನಿರ್ಮಾಣವು ಸಾಧ್ಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಭಿಪ್ರಾಯ ಪಟ್ಟರು.

ಇಂದು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಆಯೋಜಿಸಿರುವ ‘ವಿಶ್ವ ಯುವ ಕೌಶಲ್ಯ’ ದಿನಾಚರಣೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿನ ಅವರು, ದೇಶವೊಂದರ ಅಭಿವೃದ್ಧಿಯು ಯುವ ಜನರ ಕೌಶಲ್ಯದ ಮಟ್ಟವನ್ನು ಆಧರಿಸಿದೆ. ಕರ್ನಾಟಕ ಸರ್ಕಾರವು ಯುವಕರ ಕೌಶಲ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಳೆದ 2 ವರ್ಷಗಳಲ್ಲಿ ಹಲವು ಪ್ರಮುಖ ಯೋಜನೆಗಳನ್ನು ಹಮ್ಮಿಕೊಂಡಿದೆ.

ರಾಜ್ಯದ 150 ಸರಕಾರಿ ಐ.ಟಿ ಐ ಗಳನ್ನು ಉನ್ನತೀಕರಿಸಿ Industrial Automation, Robotics, Industry 4.0 ನಂತಹ ಅತ್ಯಾಧುನಿಕ ಲ್ಯಾಬ್‍ಗಳನ್ನು ಸ್ಥಾಪಿಸಲು 4,636.50 ಕೋಟಿ ರೂ.ಗಳ ಒಡಂಬಡಿಕೆಗೆ ಸಹಿ ಹಾಕಲಾಗಿದೆ. ಉನ್ನತೀಕರಣದ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸಿ ಇದೇ ಸೆಪ್ಟೆಂಬರ್ ನಲ್ಲಿ ಉದ್ಘಾಟಿಸಲಾಗುವುದು ಎಂದು ತಿಳಿಸಿದರು.

ಕೋವಿಡ್-19 ಸಾಂಕ್ರಾಮಿಕದ ಹಿನ್ನಲೆ ಇತರೆ ರಾಜ್ಯಗಳಿಂದ ಮರಳಿದ ವಲಸೆ ಕಾರ್ಮಿಕರ ತರಬೇತಿ ಮತ್ತು ಕೆಲಸ ದೊರಕಿಸಲು ಸರ್ಕಾರವು ಕೌಶಲ್‍ಕರ್-ಡಾಟ್-ಕಾo ವೆಬ್ ಪೋರ್ಟಲ್‍ನ್ನು ಅಭಿವೃದ್ಧಿಪಡಿಸಿದೆ. ಕೈಗಾರಿಕೆಗಳಲ್ಲಿರುವ ಉದ್ಯೋಗ ಅವಕಾಶಗಳಿಗೆ ಅನುಸಾರವಾಗಿ ಕುಶಲ ಯುವಕರಿಗೆ ಉದ್ಯೋಗ ಒದಗಿಸಲು Skill Connect ವೆಬಿ ಪೋರ್ಟಲ್‍ ಮೂಲಕ ವರ್ಚುಯಲ್ ಉದ್ಯೋಗ ಮೇಳಗಳನ್ನು ನಡೆಸಲಾಗುತ್ತಿದೆ. ವಿದೇಶದಲ್ಲಿರುವ ನುರಿತ ಮಾನವ ಸಂಪನ್ಮೂಲದ ಬೇಡಿಕೆಯನ್ನು ಪೂರೈಸಿ ರಾಜ್ಯದ ಯುವಕರು ವಿದೇಶಗಳಲ್ಲಿ ಉದ್ಯೋಗ ಪಡೆದುಕೊಳ್ಳಲು ನೆರವಾಗಲು ‘ಅಂತರರಾಷ್ಟ್ರೀಯ ವಲಸೆ ಕೇಂದ್ರ’ ವನ್ನು ಸ್ಥಾಪಿಸಿದೆ ಎಂದರು.

ಈಗಾಗಲೇ ಬ್ರಿಟನ್ನಿನ National Health Services ನೊಂದಿಗೆ ಒಡಂಬಡಿಕೆ ಮಾಡಿಕೊಂಡು ಕರ್ನಾಟಕದಿಂದ ವೈದ್ಯಕೀಯ ಸಿಬ್ಬಂದಿಯನ್ನು ಕಳುಹಿಸುವ ಕಾರ್ಯಪ್ರಗತಿಯಲ್ಲಿದೆ. ಸರ್ಕಾರಿ ಸಂಸ್ಥೆಗಳ ಮೂಲಕ ಉನ್ನತ ಮಟ್ಟದ ತಾಂತ್ರಿಕ ಕೌಶಲ್ಯವನ್ನು ನೀಡಿ ರಾಜ್ಯದ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ಕೌಶಲ್ಯಯುಕ್ತ ಮಾನವ ಸಂಪನ್ಮೂಲವನ್ನು ಒದಗಿಸಲು ಯುವಕರಿಗೆ ತಾಂತ್ರಿಕ ಕೌಶಲ್ಯ ತರಬೇತಿಗಾಗಿ ಪ್ರಸಕ್ತ ಸಾಲಿನಲ್ಲಿ 4 ಹೊಸ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (GTTC) ಡಿಪ್ಲೊಮಾ ಕಾಲೇಜುಗಳನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿವರಿಸಿದರು.

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ರಾಜ್ಯದಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಗ್ರಾಮ ಮಟ್ಟದ ಒಕ್ಕೂಟದ ಮುಖಾಂತರ ಸಮುದಾಯ ಹೂಡಿಕೆ ನಿಧಿಯಾಗಿ 400 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ಉದ್ದೇಶಿಸಲಾಗಿದ್ದು, 2021-22ನೇ ಸಾಲಿನಲ್ಲಿ ಈಗಾಗಲೇ 17,121 ಸ್ವ-ಸಹಾಯ ಗುಂಪುಗಳಿಗೆ ರೂ. 149.03 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ. ಕಳೆದ ಸಾಲಿನಲ್ಲಿ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಅಡಿಯಲ್ಲಿ ಒಂದು ಲಕ್ಷದ ಹತ್ತು ಸಾವಿರ ಬೀದಿ-ಬದಿ ವ್ಯಾಪಾರಿಗಳಿಗೆ ಪ್ರಧಾನ ಮಂತ್ರಿಗಳ ‘ಸ್ವ-ನಿಧಿ’ ಯೋಜನೆಯಡಿಯಲ್ಲಿ 10,000 ರೂ.ಗಳ ಹೂಡಿಕೆ ಬಂಡವಾಳವನ್ನು ಸಾಲದ ರೂಪದಲ್ಲಿ ವಿತರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 20,000 ರೂ.ಗಳನ್ನು ಹೆಚ್ಚುವರಿ ಹೂಡಿಕೆ ಬಂಡವಾಳವನ್ನು ಸಾಲದ ರೂಪದಲ್ಲಿ ವಿತರಿಸಲು ಉದ್ದೇಶಿಸಲಾಗಿದೆ ಎಂದರು.
ರಾಜ್ಯದಲ್ಲಿ ಮುಂದಿನ 5 ವರ್ಷಗಳಲ್ಲಿ ಹತ್ತು ಮಿಲಿಯನ್ ಉದ್ಯೋಗ ಅವಕಾಶಗಳನ್ನು ಸೃಷ್ಠಿಸಲು ಕರ್ನಾಟಕ ಕೌಶಲ್ಯ ಮತ್ತು ಉದ್ಯಮಶೀಲತಾ ಕಾರ್ಯಪಡೆಯನ್ನು ರಚಿಸಿದೆ. ಸರ್ಕಾರವು ಕಳೆದ ಎರಡು ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಕ್ರಿಯ ಮುಂದಾಳತ್ವದಲ್ಲಿ ರಾಜ್ಯದ ಯುವಕರಿಗೆ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯವನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಮಹತ್ತರ ಹೆಜ್ಜೆಗಳನ್ನು ಇಟ್ಟಿದೆ. ‘ಸ್ಕಿಲ್ ಇಂಡಿಯಾ ಮಿಷನ್’ ಹಾಗೂ ‘ಆತ್ಮನಿರ್ಭರ್ ಭಾರತ ಯೋಜನೆ’ಗಳು ಯುವಜನರ ಕೌಶಲ್ಯ ಹೆಚ್ಚಿಸುವ ನಿಟ್ಟಿನಲ್ಲಿ ಗಮನಾರ್ಹ ಸಾಧನೆ ಮಾಡಲಿದೆ ಎಂಬ ಆಶಯ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಐಟಿ ಮತ್ತು ಬಿಟಿ, ವಿಜ್ಞಾನ-ತಂತ್ರಜ್ಞಾನ, ಕೌಶಲಾಭಿವೃದ್ಧಿ ಸಚಿವರಾದ ಡಾ: ಅಶ್ವತ್ಥ್ ನಾರಾಯಣ, ಇಲಾಖೆಯ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಹಾಗೂ ಮತ್ತಿತರರು ಹಾಜರಿದ್ದರು.



ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM YadiyurappaCOVID 19Kannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಕೋವಿಡ್-19ಬೆಂಗಳೂರುಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪವಿಶ್ವ ಯುವ ಕೌಶಲ್ಯ ದಿನಾಚರಣೆ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಜುಲೈ 16, 17ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ತೆರೆಯಲು ತೀರ್ಮಾನ: ಗೃಹ ಸಚಿವ ಬಸವರಾಜ ಬೊಮ್ಮಾಯಿ

kalpa News

kalpa News

Next Post
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ತೆರೆಯಲು ತೀರ್ಮಾನ: ಗೃಹ ಸಚಿವ ಬಸವರಾಜ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL