ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಶಿವಮೊಗ್ಗದ ಜಿಲೆಟಿನ್ ಸ್ಪೋಟದ ಆಘಾತ ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಸ್ಫೋಟದ ದುರಂತ ಸಂಭವಿಸಿದ್ದು ತೀವ್ರ ಆಘಾತಕಾರಿ ದುರ್ಘಟನೆಯಾಗಿದೆ. ಸರಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕ್ರಮಕ್ಕೆ ಮುಂದಾಗಿದ್ದರೆ ಇದನ್ನು ತಪ್ಪಿಸಬಹುದಿತ್ತು. ಈ ಘಟನೆಗೆ ಸರಕಾರವೇ ಹೊಣೆಯಾಗಿದೆ. ಕೂಡಲೇ ತಪ್ಪಿತಸ್ಥರ ಮೇಲೆ ಕಠಿಣ ಕ್ರಮಕ್ಕೆ ಮುಂದಾಗಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಆಗ್ರಹಿಸಿದ್ದಾರೆ.
ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿ, ಸಂತ್ರಸ್ತ ಕುಂಟುಗಳಿಗೆ ಸಾಂತ್ವನ ಹೇಳಿದರೆ ಸಾಲದು, ಅವರ ಕುಟುಂಬಗಳ ನಿರ್ವಹಣೆಗೆ ಪರಿಹಾರ ಧನದ ಜೊತೆಗೆ ಕುಟುಂಬದಲ್ಲಿ ಒಬ್ಬರಿಗೆ ಸರಕಾರಿ ನೌಕರಿಯನ್ನು ನೀಡಬೇಕು ಎಂದು ಆಗ್ರಹಿಸಿದರು.
ಶಿವಮೊಗ್ಗದ ಸ್ಫೋಟದ ನಂತರವೂ ಎಚ್ಚೆತ್ತುಕೊಳ್ಳದ ಸರ್ಕಾರ, ಅಕ್ರಮ ಕಲ್ಲು ಕ್ವಾರಿಗಳಿಗೆ, ಅಕ್ರಮ ಸ್ಫೋಟಕಗಳಿಗೆ ಕಡಿವಾಣ ಹಾಕುವ ಬದಲು ಬೆಂಬಲವಾಗಿದ್ದರ ಪರಿಣಾಮ ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಜಿಲೆಟಿನ್ ಸ್ಫೋಟ ಸಂಭವಿಸಿದೆ. ಅದಕ್ಕೆ ನೇರ ಹೊಣೆ ಭೂ ಮತ್ತು ಗಣಿಗಾರಿಕೆ ಸಚಿವ ಮುರುಗೇಶ್ ನಿರಾಣಿ. ಕಲ್ಲು ಕ್ವಾರಿಯಲ್ಲಿ ನಡೆದ ಈ ಸ್ಫೋಟ ದುರಂತದ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಬೇಕು. ಬಡ ಕಾರ್ಮಿಕರ ಜೀವ ಹರಣಕ್ಕೆ, ಈ ದುರ್ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post