No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Thursday, April 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಎಲ್ಲರಿಗೂ ಪೌಷ್ಟಿಕ ಆಹಾರ ಲಭ್ಯವಾಗುವ ನಿಟ್ಟಿನಲ್ಲಿ ಸರ್ಕಾರ ಚಿಂತಿಸಬೇಕು: ತೇಜಸ್ವಿನಿ ಅನಂತಕುಮಾರ್‌

ಅದಮ್ಯ ಚೇತನದಿಂದ ಪೌಷ್ಟಿಕ ಸಾತ್ವಿಕ ಆಹಾರ ಆಂದೋಲನಕ್ಕೆ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 7, 2021
in ಬೆಂಗಳೂರು ನಗರ
0
ಎಲ್ಲರಿಗೂ ಪೌಷ್ಟಿಕ ಆಹಾರ ಲಭ್ಯವಾಗುವ ನಿಟ್ಟಿನಲ್ಲಿ ಸರ್ಕಾರ ಚಿಂತಿಸಬೇಕು: ತೇಜಸ್ವಿನಿ ಅನಂತಕುಮಾರ್‌
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಬಿಸಿ ಮತ್ತು ಪೌಷ್ಟಿಕ ಆಹಾರ ಎಲ್ಲರಿಗೂ ಲಭ್ಯ ಮಾಡುವ ನಿಟ್ಟಿನಲ್ಲಿ ಸರಕಾರ ಚಿಂತನೆ ನಡೆಸಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅದಮ್ಯ ಚೇತನ ಮುಖ್ಯಸ್ಥೆ ಡಾ ತೇಜಸ್ವಿನಿ ಅನಂತಕುಮಾರ್‌ ಅಭಿಪ್ರಾಯಪಟ್ಟರು.

ಅನಂತಕುಮಾರ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗಿದ್ದ 5 ನೇ ದೇಶ ಮೊದಲು – ಹಸಿವನ್ನು ಮೀರಿದ ಪೌಷ್ಠಿಕತೆ – ದೇಶದಲ್ಲಿ ಹೆಚ್ಚುವರಿ ಆಹಾರ ಮತ್ತು ಕಡಿಮೆ ಪೌಷ್ಟಿಕತೆಯ ಒಗಟು ವೆಬಿನಾರ್‌ ನಲ್ಲಿ ಅವರು ಮಾತನಾಡಿದರು.

ಪೌಷ್ಟಿಕತೆಯ ಸೂಚ್ಯಾಂಕದಲ್ಲಿ ಭಾರತ ದೇಶದ ಸ್ಥಾನ ಬಹಳ ಕೆಳಗಿನದ್ದಾಗಿದೆ. ಹಾಗಂತ ನಮ್ಮ ದೇಶದಲ್ಲಿ ಆಹಾರ ಉತ್ಪಾದನೆಯ ಪ್ರಮಾಣ ಕಡಿಮೆಯದ್ದು ಎಂದು ಅರ್ಥವಲ್ಲ. ನಾವು ಅಗತ್ಯ ಪ್ರಮಾಣಕ್ಕಿಂತಲೂ ಹೆಚ್ಚು ಆಹಾರ ಉತ್ಪಾದನೆ ಮಾಡುವ ರಾಷ್ಟ್ರವಾಗಿದ್ದೇವೆ. ಆದರೆ, ನಮ್ಮಲ್ಲಿ ಶೇಕಡಾ 40 ಆಹಾರವನ್ನು ಹಾಳಾಗುತ್ತಿದೆ. ಕೆಲವೆಡೆ ಆಹಾರ ಹಾಳಾದರೆ, ಕೆಲವೆಡೆ ಆಹಾರ ಸಿಗುತ್ತಿಲ್ಲ. ಈ ಅಂತರವನ್ನು ಕಡಿಮೆ ಮಾಡಬೇಕು. ಸರಿಯಾದ ಊಟ ಮಾಡಿಯೂ ಅಗತ್ಯ ಪೌಷ್ಟಿಕಾಂಶಗಳನ್ನು ಸೇವಿಸದೇ ಇರುವುದು ಅಪೌಷ್ಟಿಕತೆ. ನಾವು ನಮ್ಮ ಪ್ರಾಚೀನ ವೈವಿಧ್ಯಮಯ ಆಹಾರ ಪದ್ದತಿಯಿಂದ ವಿಮುಖರಾಗುತ್ತಿದ್ದು, ಅವಸರದ ಹಾಗೂ ಸರಿಯಾದ ಪೌಷ್ಟಿಕ ಆಹಾರ ಇಲ್ಲದೆ ಬಳುತ್ತಿದ್ದೇವೆ. ಅದಮ್ಯ ಚೇತನ ಸಂಸ್ಥೆ ತನ್ನ ಬಿಸಿಯೂಟದಲ್ಲಿ ಪೌಷ್ಟಿಕತೆಯನ್ನು ಸೇರಿಸುವ ಮೂಲಕ ವಿದ್ಯಾರ್ಥಿಗಳು ಅಪೌಷ್ಟಿಕತೆಯಿಂದ ಬಳಲದೇ ಇರುವುದಕ್ಕೆ ಆದಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು.

ಕೇಂದ್ರ ಮತ್ತು ರಾಜ್ಯ ಸರಕಾರಗಳು ಆಯಾ ಪ್ರದೇಶದ ಜನಸಂಖ್ಯೆಯ ಆಧಾರದ ಮೇಲೆ ಕಮ್ಯೂನಿಟಿ ಕಿಚನ್‌ಗಳನ್ನು ಪ್ರಾರಂಭಿಸಬೇಕು. ಪೌಷ್ಟಿಕತೆ ಮತ್ತು ಶುಚಿತ್ವಕ್ಕೆ ಆದ್ಯತೆ ನೀಡುವ ಮೂಲಕ ಎಲ್ಲರಿಗೂ ಬಿಸಿ ಮತ್ತು ಪೌಷ್ಟಿಕ ಆಹಾರ ಕಡಿಮೆ ದರದಲ್ಲಿ ಅಥವಾ ಉಚಿತವಾಗಿ ದೊರಕಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಇದೇ ವೇಳೆ, ಅದಮ್ಯ ಚೇತನ ಸಂಸ್ಥೆಯ ವತಿಯಿಂದ ಪೌಷ್ಟಿಕ ಮತ್ತು ಸಾತ್ವಿಕ ಆಹಾರ ಆಂದೋಲನಕ್ಕೆ ಚಾಲನೆ ನೀಡಲಾಯಿತು. 1000 ರೂಪಾಯಿಗಳನ್ನು ನೀಡಿ ಸದಸ್ಯರಾದವರಿಗೆ ನಮ್ಮ ಪ್ರಾಚೀನ ಆಹಾರ ಧಾನ್ಯಗಳನ್ನು ಒಳಗೊಂಡಂತಹ ಕಿಟ್‌ ನ್ನು ನೀಡಲಾಗುತ್ತದೆ. ಇದು ಸಾಂಕ್ರಾಮಿಕ ರೋಗದ ಸಮಯದಲ್ಲಿ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಕಾರಿ ಎಂದರು.

ಆರೋಗ್ಯ ಮತ್ತು ಶಿಕ್ಷಣವನ್ನು ದಾನದ ವರ್ಗದಲ್ಲಿ (ಚಾರಿಟಿ ಕೆಟಗರಿ) ಸೇರಿಸಿದ್ದು ತೆರಿಗೆಯಲ್ಲಿ ಹಲವಾರು ವಿನಾಯಿತಿಗಳನ್ನು ನೀಡಲಾಗಿದೆ. ಆದರೆ, ಆಹಾರವನ್ನು ದಾನವಾಗಿ ನೀಡುವಂತಹ ಸಂಸ್ಥೆಗಳಿಗೆ ಇನ್ನೂ ಯಾವುದೇ ವಿನಾಯಿತಿಗಳು ಇಲ್ಲದ ಕಾರಣ ಬಹಳಷ್ಟು ಜನರು ತಮಗೆ ಇಷ್ಟವಿದ್ದರೂ ಈ ಕಾರ್ಯದಲ್ಲಿ ತೊಡಗಿಕೊಳ್ಳದೇ ಇರುವಂತಾಗಿದೆ. ಆದ್ದರಿಂದ ದೇಶದ ಕಾನೂನು ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿರುವ ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ಅಮೇರಿಕಾದ ವಿಶ್ವ ಭಾರತೀಯ ವಿಜ್ಞಾನಿಗಳು ಮತ್ತು ಟೆಕ್ನೋಕ್ರಾಟ್‌ಗಳ ಅಸೋಷಿಯೇಷನ್‌ ನ ಸಂಚಾಲಕರು ಮತ್ತು ದೇಶದಲ್ಲಿ ಆಹಾರ ಕ್ರಾಂತಿ – ಪೌಷ್ಟಿಕತೆಯ ಮಿಷನ್ ನ ಮುನ್ನಡೆಸುತ್ತಿರುವ ಡಾ. ಯೆಲ್ಲೋಜಿ ರಾವ್‌ ಮಿರ್ಜಾಕರ್‌ ಮಾತನಾಡಿ, ನಾವು ಹುಟ್ಟುವುದಕ್ಕೂ ಮುಂಚಿನಿಂದಲೂ ಸರಿಯಾದ ಪೌಷ್ಟಿಕತೆಯನ್ನ ಪಡೆದುಕೊಳ್ಳುವುದು ಬಹಳ ಅವಶ್ಯ ಎಂದು ಸಂಶೋಧನೆಗಳು ಹೇಳುತ್ತವೆ. ಅದರಲ್ಲೂ ಗರ್ಭ ಧರಿಸಿದಾಗ ತಾಯಿ ತಗೆದುಕೊಳ್ಳುವ ಆಹಾರ ಮಗುವಿನ ಬೆಳವಣಿಗೆಯಲ್ಲಿ ಬಹಳ ಮಹತ್ವದ ಕೆಲಸವನ್ನು ಮಾಡುತ್ತದೆ. ಅದೇ ಬೆಳವಣಿಗೆಯ ಹಂತದಲ್ಲಿರುವ ಮಗು ಅಪೌಷ್ಟಿಕತೆಯಿಂದ ಬಳಲಿದಾಗ ಮೆದುಳು ಕುಗ್ಗುವುದನ್ನೂ ಸಂಶೋದನೆಗಳು ತಿಳಿಸಿವೆ ಎಂದರು.

ದೇಶ ಅಪೌಷ್ಟಿಕತೆಯ ಸೂಚ್ಯಾಂಕದಲ್ಲಿ ಬಹಳ ಹಿಂದಿನ ಸ್ಥಾನದಲ್ಲಿದ್ದು, ನಮ್ಮಲ್ಲಿ ಬಹಳಷ್ಟು ಜನರು ಅಪೌಷ್ಟಿಕತೆಯಿಂದ ಬಳಲುತ್ತಿರುವುದನ್ನು ಕಾಣಬಹುದಾಗಿದೆ. ನಮ್ಮ ಪ್ರಾಚೀನ ಆಹಾರ ಪದ್ದತಿಯಲ್ಲಿ ಪೌಷ್ಟಿಕಾಂಶಗಳನ್ನು ಅಳವಡಿಸಿಕೊಳ್ಳುವ ಮೂಲಕ ವೈವಿಧ್ಯಮಯ ಆಹಾರ ಪದ್ದತಿಯನ್ನು ಅನುಸರಿಸಲಾಗುತ್ತಿತ್ತು. ಆದರೆ, ಕೇವಲ ಕಾರ್ಬೋಹೈಡ್ರೈಟ್‌ ಧಾನ್ಯಗಳ ಅತಿಯಾದ ಕೃಷಿಯಿಂದಾಗಿ ಪೌಷ್ಟಿಕ ಆಹಾರ ಧಾನ್ಯಗಳ ಕೊರತೆ ಹೆಚ್ಚಾಗಿದೆ. ಇದನ್ನು ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಮುಂದಾಗಿದ್ದು, ಮುಂದಿನ ದಿನಗಳಲ್ಲಿ ದೇಶದಾದ್ಯಂತ ಪೌಷ್ಟಿಕ ಆಹಾರ ಪದ್ದತಿಯ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯ ನಡೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಅನಂತಕುಮಾರ್‌ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೋ. ಪಿ.ವಿ ಕೃಷ್ಣ ಭಟ್‌, ಡಾ ಬಿ.ಎಸ್‌ ಶ್ರೀನಾಥ್‌, ಅದಮ್ಯ ಚೇತನ ಸಂಸ್ಥೆಯ ಟ್ರಸ್ಟಿಗಳಾದ ಪ್ರದೀಪ್‌ ಓಕ್‌ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಸುಮಾರು 800 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News licveKannada News LiveKannada News OnlineKannada News WebsiteKannada WebsiteLatest News KannadaNews in KannadaNutrition FoodState NewsThejaswini Ananthakumarತೇಜಸ್ವಿನಿ ಅನಂತಕುಮಾರ್‌ಪೌಷ್ಟಿಕ ಆಹಾರಬೆಂಗಳೂರು
Share198Tweet123Send
Previous Post

ಬೀಜ ಮತ್ತು ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕಾನೂನುರೀತ್ಯ ಕ್ರಮ: ಕೃಷಿ ಸಚಿವ ಬಿ. ಸಿ. ಪಾಟೀಲ್

Next Post

ಕೃಷಿ ಸಚಿವ ಬಿ.ಸಿ. ಪಾಟೀಲ್-ಸಂಸದ ಬಿ.ವೈ. ರಾಘವೇಂದ್ರ ಭೇಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೃಷಿ ಸಚಿವ ಬಿ.ಸಿ. ಪಾಟೀಲ್-ಸಂಸದ ಬಿ.ವೈ. ರಾಘವೇಂದ್ರ ಭೇಟಿ

ಕೃಷಿ ಸಚಿವ ಬಿ.ಸಿ. ಪಾಟೀಲ್-ಸಂಸದ ಬಿ.ವೈ. ರಾಘವೇಂದ್ರ ಭೇಟಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
ಪ್ರತಿಯೊಬ್ಬ ವ್ಯಕ್ತಿಗೂ ಆಧ್ಯಾತ್ಮ ಬಹಳ ಮುಖ್ಯ: ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದರು

ಪ್ರತಿಯೊಬ್ಬ ವ್ಯಕ್ತಿಗೂ ಆಧ್ಯಾತ್ಮ ಬಹಳ ಮುಖ್ಯ: ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದರು

April 9, 2026
ಶಿವಮೊಗ್ಗದಲ್ಲಿ ನಾಳೆ ಬೃಹತ್ ಶಾಂತಿಯುತ ಪಾದಯಾತ್ರೆ | ಕಾರಣವೇನು?

ಶಿವಮೊಗ್ಗದಲ್ಲಿ ನಾಳೆ ಬೃಹತ್ ಶಾಂತಿಯುತ ಪಾದಯಾತ್ರೆ | ಕಾರಣವೇನು?

April 9, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 6ನೇ ತರಗತಿ ಬಾಲಕಿ

April 9, 2026
ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

April 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL