ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೊಲೆ ಪ್ರಕರಣದಲ್ಲಿ #Murder Case ಜೀವಾವಧಿ ಶಿಕ್ಷೆ #Life Imprisonment ಅನುಭವಿಸುತ್ತಿರುವ ವ್ಯಕ್ತಿಯೊಬ್ಬನಿಗೆ ತನ್ನ ತಂದೆಯ ಹೆಸರಿನಲ್ಲಿ ಇರುವ ಜಮೀನಿನ ಕೃಷಿ ಚಟುವಟಿಕೆಗಳನ್ನು ನೋಡಿಕೊಳ್ಳಲು ಕರ್ನಾಟಕ ಹೈಕೋರ್ಟ್ 90 ದಿನಗಳ ಪೆರೋಲ್ #Parol ಮಂಜೂರು ಮಾಡಿದೆ.
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಿದ್ದದೇವರಹಳ್ಳಿಯ ಚಂದ್ರು (36) ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಇತ್ತೀಚೆಗೆ ಆದೇಶ ಹೊರಡಿಸಿದ್ದು, ಪೆರೋಲ್‌ನಲ್ಲಿ ಬಿಡುಗಡೆ ಮಾಡಬೇಕೆಂಬ ತನ್ನ ಮನವಿಯನ್ನು ಪರಿಗಣಿಸಿದೆ. ಆ ಮೂಲಕ ತಂದೆಯ ವೃತ್ತಿಯಲ್ಲಿ ತೊಡಗಿಕೊಳ್ಳಲು ಜೈಲು ಪಾಲಾಗಿರುವ ಮಗನಿಗೆ ಅವಕಾಶ ಕಲ್ಪಿಸಿದೆ.
Also read: ಸಮಗ್ರ, ಸುಸ್ಥಿರ ಕೃಷಿಯಲ್ಲಿ ಜೇನಿನ ಪಾತ್ರ ಹಿರಿದು: ಗೌತಮ್ ಬಿಚ್ಚುಗತ್ತಿ ಅಭಿಪ್ರಾಯ
ಅರ್ಜಿದಾರ ಚಂದ್ರು 11 ವರ್ಷಗಳಿಂದ ಜೈಲಿನಲ್ಲಿದ್ದಾರೆ. ಪೆರೋಲ್ ಮೇಲೆ ಯಾವತ್ತೂ ಬಿಡುಗಡೆಯಾಗಿಲ್ಲ. ಪ್ರಕರಣದ ಸತ್ಯಾಂಶ ಪರಿಶೀಲಿಸಿದರೆ ಪೆರೋಲ್ ಮೇಲೆ ಬಿಡುಗಡೆಯಾಗುವ ಅಗತ್ಯವನ್ನು ಅರ್ಜಿದಾರ ಮೇಲ್ನೋಟಕ್ಕೆ ಸಾಬೀತುಪಡಿಸಿದ್ದಾರೆ. ಆದ್ದರಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರು, ಆತನನ್ನು 90 ದಿನ ಪೆರೋಲ್ ಮೇಲೆ ಬಿಡುಗಡೆ ಮಾಡಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ.
ಪೆರೋಲ್ ಅವಧಿಯಲ್ಲಿ ಚಂದ್ರು ಯಾವುದೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗಬಾರದು. ಆತ ಪೆರೋಲ್ ಮುಗಿಸಿ, ಕಾರಾಗೃಹಕ್ಕೆ ಮರಳುವುದನ್ನು ಖಚಿತಪಡಿಸಿಕೊಳ್ಳಲು ಮುಖ್ಯ ಅಧೀಕ್ಷಕರು ಅಗತ್ಯ ಷರತ್ತು ವಿಧಿಸಬಹುದು. ಆ ಯಾವುದೇ ಷರತ್ತು ಉಲ್ಲಂಘಿಸಿದರೆ, ಪೆರೋಲ್ ಮಂಜೂರಾತಿ ಆದೇಶ ತನ್ನಿಂದ ತಾನೇ ರದ್ದಾಗುತ್ತದೆ. ಚಂದ್ರ ಪ್ರತಿ ವಾರದ ಮೊದಲ ದಿನದಂದು ಸ್ಥಳೀಯ ಪೊಲೀಸ್ ಠಾಣೆಗೆ ಹಾಜರಾಗಬೇಕೆಂದು ನ್ಯಾಯಾಲಯ ಆದೇಶದಲ್ಲಿ ನಿರ್ದೇಶಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post