ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೋವಿಡ್‌ನಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಪ್ರಾಣದ ಹಂಗುತೊರೆದು ಕರ್ತವ್ಯ ನಿರ್ವಹಿಸುವ ವೈದ್ಯಕೀಯ ವೃತ್ತಿ ಪವಿತ್ರವಾದದ್ದು. ನಿಸ್ವಾರ್ಥ ಮನೋಭಾವದಿಂದ ರೋಗಿಗಳ ಆರೈಕೆ ಮಾಡಿದ ಆರೋಗ್ಯ ಕ್ಷೇತ್ರದ ಸಿಬ್ಬಂದಿಯ ಸೇವೆಯು ಸ್ಮರಣೀಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ #Dinesh Gundurao ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಗಾಂಧಿ ಭವನದಲ್ಲಿ ಭಾನುವಾರ ರಾಘವಿ ಚಾರಿಟೇಬಲ್ ಟ್ರಸ್ಟ್ ಸೇವಾ ಫೌಂಡೇಶನ್ ಹಾಗೂ ಶ್ರೀ ಲಕ್ಷ್ಮೀ ಆಸ್ಪತ್ರೆಗಳ ಸಮೂಹ ಸಂಸ್ಥೆಯು ಆರೋಗ್ಯ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆರೋಗ್ಯ ಜ್ಯೋತಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

Also read: ಬದ್ಧತೆಯೊಂದಿಗೆ ಸಂವಿಧಾನದ ಆಶಯಗಳ ಅನುಷ್ಠಾನ ಅತ್ಯಗತ್ಯ: ಡಾ.ಶೇಖರ್ ಅಭಿಪ್ರಾಯ
ರಾಘವಿ ಚಾರಿಟೇಬಲ್ ಟ್ರಸ್ಟ್ ಮತ್ತು ಸೇವಾ ಫೌಂಡೇಶನ್ ಮುಖ್ಯಸ್ಥ ರಾಘವೇಂದ್ರ ಮಾತನಾಡಿ, ಕೋವಿಡ್-19 ನಮ್ಮೆಲ್ಲರ ಜೀವನದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ. ನಮ್ಮ ವೈದ್ಯರು ಮತ್ತು ವೈದ್ಯಕೀಯ ಸಹಾಯಕ ಸಿಬ್ಬಂದಿ ಮಾರಣಾಂತಿಕ ಕೊರೋನ ವೈರಸ್ ವಿರುದ್ಧ ಹೋರಾಡಲು ವೈಯಕ್ತಿಕವಾಗಿಯೂ ಸಾಕಷ್ಟು ತ್ಯಾಗಗಳನ್ನು ಮಾಡಿದ್ದಾರೆ. ಇಂತಹ ನಿಸ್ವಾರ್ಥ ಸೇವೆ ಮಾಡುವ ಸಿಬ್ಬಂದಿಯ ಸಾಧನೆಯನ್ನು ಗುರುತಿಸಿ ಗೌರವಿಸಲಾಗುತ್ತಿದೆ ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post