ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಇಂದು ಮಣ್ಣಿನ ಮಗ, ಕರ್ನಾಟಕದ ಹೆಮ್ಮೆಯ ಸುಪುತ್ರ ಎಚ್.ಡಿ.ದೇವೇಗೌಡರು ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನವಾಗಿದ್ದು, ಭರ್ತಿ 25 ವರ್ಷಗಳನ್ನ ಪೂರೈಸಿ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದೇವೆ ಎಂದು ನಿಖಿಲ್ ಕುಮಾರ ಸ್ವಾಮಿ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ಮಂತ್ರಿಯಾಗಿದ್ದ ಸಂದರ್ಭದಲ್ಲಿ ತಮ್ಮ ತವರು ನಾಡಿಗೂ ದೇವೇಗೌಡರು ಅಪಾರ ಕೊಡುಗೆ ನೀಡಿದ್ದು, ರೈಲ್ವೇ, ನೀರಾವರಿ, ವಿದ್ಯುತ್, ಕೈಗಾರಿಕೆ ಸೇರಿದಂತೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ರಾಜಕೀಯದಲ್ಲಿ ಹಲವು ನೋವು-ನವಿಲುಗಳನ್ನು ಕಂಡಿರುವ ದೇವೇಗೌಡರ ಪಯಣ ನಮ್ಮಂತ ಯುವ ಪೀಳಿಗೆಗೆ ದಾರಿ ದೀಪ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಣ್ಣಿನ ಮಗ, ಕರ್ನಾಟಕದ ಹೆಮ್ಮೆಯ ಸುಪುತ್ರ ಎಚ್.ಡಿ.ದೇವೇಗೌಡರು ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನ ಇದು. ಭರ್ತಿ 25 ವರ್ಷಗಳನ್ನ ಪೂರೈಸಿ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದೇವೆ.
1/4 pic.twitter.com/D539dTKt6m— Nikhil Kumar (@Nikhil_Kumar_k) June 1, 2021
ಅಧಿಕಾರದ ಅವಧಿ ಸಣ್ಣದಾದರೂ ಮಾಡಿದ ಸಾಧನೆ ದೊಡ್ಡದು. ಇಡೀ ದೇಶದಲ್ಲಿ ಐಟಿ ಉದ್ಯಮಕ್ಕೆ ಹತ್ತು ವರ್ಷಗಳ ಕಾಲ ಟ್ಯಾಕ್ಸ್ ಹಾಲಿಡೇ, ಬಾಂಗ್ಲಾ ದೇಶ ಹಾಗೂ ಭಾರತದ ನಡುವಿನ ಗಂಗಾ ನದಿ ವಿವಾದ ಬಗೆಹರಿಸಿದ್ದು, ಈಶಾನ್ಯದ ಏಳು ರಾಜ್ಯಗಳಿಗೆ ಭೇಟಿ ನೀಡಿ ಒಟ್ಟು 6 ಸಾವಿರ ಕೋಟಿಯ ಪ್ಯಾಕೇಜ್ ಘೋಷಣೆ ಹೀಗೆ ಹಲವು ಉತ್ತಮ ಕಾರ್ಯಗಳನ್ನು ಮಾಡಿರುವುದು ಶ್ಲಾಘನೀಯ ಎಂದು ಹೇಳಿದ್ದಾರೆ.
ಏರ್‌ಪೋರ್ಟ್, ರೈಲ್ವೇ ಯೋಜನೆ, ರಾಷ್ಟ್ರೀಯ ಹೆದ್ದಾರಿಗಳು, ವಿಶ್ವವಿದ್ಯಾಲಯಗಳನ್ನು ನಿರ್ಮಿಸಲು ವಿಶೇಷ ಅನುದಾನ ಮಂಜೂರು, ಕಾಶ್ಮೀರಕ್ಕೆ ಐದು ಬಾರಿ ಭೇಟಿ ನೀಡಿ 3 ಸಾವಿರ ಕೋಟಿ ಪ್ಯಾಕೇಜ್, ನೆನೆಗುದಿಗೆ ಬಿದ್ದಿದ್ದ ದೆಹಲಿ ಮೆಟ್ರೋಗೆ ಚಾಲನೆ, ನಾಗಾ ಬಂಡುಕೋರರೊಂದಿಗೆ ಶಾಂತಿ ಮಾತುಕತೆ ನಡೆಸಿ ಯುದ್ದವಿರಾಮ ಘೋಷಣೆ ಮಾಡಿರುವುದನ್ನು ಅವರು ಇಲ್ಲಿ ನೆನಪಿಸಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post