No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮಲೇರಿಯಾ ವಿರುದ್ಧ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು: ಸಚಿವ ಸುಧಾಕರ್

kalpa News by kalpa News
April 26, 2022
in ಬೆಂಗಳೂರು ನಗರ
0
ಹೆಚ್ಚು ಪರೀಕ್ಷೆ ನಡೆಸಿದ ರಾಜ್ಯಗಳಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಆರೋಗ್ಯ ಸಚಿವ ಡಾ. ಸುಧಾಕರ್

File image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಮನುಕುಲಕ್ಕೆ ಶಾಪವಾಗಿರುವ ಮಲೇರಿಯಾ ವಿರುದ್ಧ ಸರ್ಕಾರ ವಿವಿಧ ರೀತಿಯಲ್ಲಿ ಹೋರಾಟ ಮಾಡುತ್ತಿದೆ. ಕೇಂದ್ರ ಸರ್ಕಾರ 2030ಕ್ಕೆ ಮಲೇರಿಯಾ ಮುಕ್ತ ಭಾರತಕ್ಕೆ ಶ್ರಮಿಸುತ್ತಿದೆ. ಆದರೆ ಕರ್ನಾಟಕದಲ್ಲಿ 2027ರ ಹೊತ್ತಿಗೆ ಮಲೇರಿಯಾ ನಿರ್ಮೂಲನೆ ಆಗಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ Minister Sudhakar ಕರೆ ಕೊಟ್ಟಿದ್ದಾರೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿರುವ ಪಿಎಂಎಸ್ ಎಸ್ ವೈ ಆಸ್ಪತ್ರೆ ವಿಶ್ವ ಮಲೇರಿಯಾ ದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಲೇರಿಯಾ ವಿರುದ್ಧ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯ ಆಗಬೇಕಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಜೊತೆಯಾಗಿ ಶ್ರಮ ಪಟ್ಟರೆ ಆರೋಗ್ಯಯುಕ್ತ ಕರ್ನಾಟಕದ ಕನಸು ನನಸಾಗಬಹುದು ಎಂದು ಹೇಳಿದರು.

ಏಪ್ರಿಲ್ 25ನ್ನು ವಿಶ್ವ ಮಲೇರಿಯಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಸಾರ್ವಜನಿಕರಲ್ಲಿ ಮಲೇರಿಯಾ ಬಗ್ಗೆ ಅರಿವು ಮೂಡಿಸುವ ಕಾರ್ಯ ಜಾಥಾಗಳ ಮೂಲಕ ನಡೆಯುತ್ತಿದೆ. ಪ್ರತಿಯೊಂದು ತಾಲೂಕುಗಳಲ್ಲೂ ಮಲೇರಿಯಾ ಬಗ್ಗೆ ಅರಿವು ಮೂಡಿಸುವ ಕಾರ್ಯ ವಿಭಿನ್ನವಾಗಿ ನಡೆಯುತ್ತಿದೆ. ಆರೋಗ್ಯ ಕಾರ್ಯಕರ್ತರು ಮತ್ತು ಆಶಾ ಕಾರ್ಯಕರ್ತರು ಸ್ವಚ್ಛತೆಯ ಮಹತ್ವನ್ನು ಸಾರ್ವಜನಿಕರಿಗೆ ತಿಳಿಸುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.

ವಿಶ್ವ ಮಲೇರಿಯಾ ದಿನವನ್ನು ಆರಂಭದಲ್ಲಿ “ಆಫ್ರಿಕಾ ಮಲೇರಿಯಾ ದಿನ” ಎಂದು ಆಚರಣೆ ಮಾಡಲಾಗುತ್ತಿತ್ತು. ಬಿಸಿಲಿರುವ ಪ್ರದೇಶಗಳಲ್ಲಿ ಮಲೇರಿಯಾ ಹೆಚ್ಚಾಗಿತ್ತು. ಹೀಗಾಗಿ ಆಫ್ರಿಕಾ ದೇಶಗಳಲ್ಲಿ, ಏಷ್ಯಾಖಂಡದಲ್ಲಿ ಮಲೇರಿಯಾ ಸೋಂಕು ಹೆಚ್ಚಿದೆ. ಅಮೆರಿಕಾದಲ್ಲಿ ಪ್ರವಾಸಿಗರಿಂದಾಗಿ ಅಪರೂಪಕ್ಕೆ ಮಲೇರಿಯಾ ಪ್ರಕರಣಗಳು ಕಾಣಿಸಿಕೊಳ್ಳುತ್ತವೆ. ಐರೋಪ್ಯ ದೇಶಗಳಲ್ಲಿ ಮಲೇರಿಯಾ ಪ್ರಕರಣಗಳು ಅತೀ ಕಡಿಮೆ ಪ್ರಮಾಣದಲ್ಲಿ ದಾಖಲಾಗುತ್ತವೆ. ಏಷ್ಯಾ ಖಂಡದಲ್ಲಿ ಮಲೇರಿಯಾದಿಂದಾಗುವ ಸಾವುಗಳ ಪೈಕಿ ಅತೀ ಹೆಚ್ಚು ಸಾವು ಭಾರತದಲ್ಲೇ ಆಗುತ್ತದೆ. ಇದು ಗಂಭೀರ ವಿಚಾರ ಎಂದು ಹೇಳಿದರು.

ಭಾರತದಲ್ಲಿ 2030ರ ಒಳಗೆ ಮಲೇರಿಯಾ ನಿರ್ಮೂಲನೆ ಮಾಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸಂಕಲ್ಪ ತೊಟ್ಟಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನದ ಮೂಲಕ ಅನೇಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಸರ್ಕಾರ ಮತ್ತು ಸಮಾಜ ಒಟ್ಟಾಗಿ ಪ್ರತಿರೋಧ ಒಡ್ಡಿದರೆ ಮಾತ್ರ ಯಶಸ್ಸು ಸಿಗುತ್ತದೆ. ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಹೆಚ್ಚಾಗಿ ನಡೆಯಬೇಕು. ಎಲ್ಲಾ ಹಳ್ಳಿಗಳಲ್ಳೂ ಆಶಾ ಕಾರ್ಯಕರ್ತರು ಶುಚಿತ್ವ ಮತ್ತು ನೈರ್ಮಲ್ಯದ ಪ್ರಾಮುಖ್ಯತೆಯ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ವೈದ್ಯಕೀಯ ಕಾಲೇಜುಗಳು ತಮ್ಮ ವಿದ್ಯಾರ್ಥಿಗಳನ್ನು ಬಳಸಿಕೊಂಡು ಆಯಾ ಜಿಲ್ಲೆಗಳಲ್ಲಿ, ತಾಲೂಕುಗಳಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು. ಸಾರ್ವಜನಿಕ ಆರೋಗ್ಯ ಕಾಪಾಡುವ ಕೆಲಸ ಕೇವಲ ಆರೋಗ್ಯ ಇಲಾಖೆಯ ಕೆಲಸ ಮಾತ್ರವಲ್ಲ. ವೈದ್ಯಕಿಯ ಶಿಕ್ಷಣ ನೀಡುವ ವೈದ್ಯಕೀಯ ಕಾಲೇಜುಗಳು ಕೂಡ ಮಾಡಬೇಕು ಎಂದು ತಿಳಿಸಿರು.

ಸ್ವಚ್ಛ ಭಾರತ್ ಎಲ್ಲದಕ್ಕೂ ಅಡಿಪಾಯ:
ಪ್ರಧಾನಿ ಮಂತ್ರಿ ನರೇಂದ್ರ ಮೋದಿ, ಸ್ವಚ್ಛ ಭಾರತ್ ಅಭಿಯಾನ ಆರಂಭಿಸಿದಾಗ ವಿರೋಧಿಗಳು ಗೇಲಿ ಮಾಡಿದ್ದರು. ಸ್ವಚ್ಛ ಭಾರತದ ಉದ್ದೇಶವೇ ಬೇರೆ ಆಗಿದೆ. ಆರೋಗ್ಯ ವ್ಯವಸ್ಥೆ ಸಂಪೂರ್ಣವಾಗಿ ಸರಿಯಾಗಬೇಕಾದರೆ ಶುಚಿತ್ವ ಬಹುಮುಖ್ಯ. ಐದಾರು ದಶಕಗಳಲ್ಲಿ ಯಾರಿಗೂ ಅರ್ಥವಾಗದೇ ಇದ್ದಿದ್ದು, ಪ್ರಧಾನಿಯವರಿಗೆ ಅರ್ಥವಾಯಿತು, ಹೀಗಾಗಿ ಸ್ವಚ್ಛ ಭಾರತವನ್ನು ಆಂದೋಲನದ ರೀತಿಯಲ್ಲಿ ಕೈಗೊಂಡರು. ಈ ಹಿಂದೆ ಗ್ರಾಮೀಣ ಪ್ರದೇಶದ ಶೇಕಡಾ 70-80ರಷ್ಟು ಮನೆಗಳಲ್ಲಿ ಶೌಚಾಲಯಗಳು ಇರುತ್ತಿರಲಿಲ್ಲ. ಬಯಲು ಶೌಚಾಲಯದ ಮೊರೆ ಹೋಗಬೇಕಿತ್ತು. ಇದು ಸಾಮಾಜಿಕ ಪೀಡುಗಾಗಿತ್ತು. ಜೊತೆಗೆ ಆರೋಗ್ಯಕ್ಕೆ ಮಾರಕವಾಗಿರುತ್ತಿತ್ತು. ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಕಳೆದ 7 ವರ್ಷಗಳಲ್ಲಿ 12 ಕೋಟಿ ಶೌಚಾಲಯ ನಿರ್ಮಾಣವಾಗಿದೆ. ಶುಚಿತ್ವದ ಬಗ್ಗೆ ಮನೆ ಮನೆಯಲ್ಲೂ ಅರಿವು ಮೂಡಿಸುವ ಕೆಲಸ ನಡೆಯುತ್ತಿದೆ ಎಂದರು.

ಮಲೇರಿಯಾ ಅನಾಫಿಲಿಸ್ ಹೆಣ್ಣು ಸೊಳ್ಳೆಯ ಕಡಿತದಿಂದ. ಹೀಗಾಗಿ ಸೊಳ್ಳೆ ಬಾರದೇ ಇರುವ ಹಾಗೇ ಅಥವಾ ಅದರ ಸಂತತಿ ಉತ್ಪತ್ತಿಯಾಗದೇ ಇರುವ ಹಾಗೇ ನೋಡಿಕೊಳ್ಳಬೇಕು. ಮನೆಯ ಸುತ್ತಮುತ್ತ ಶುಚಿತ್ವ ಕಾಪಾಡಬೇಕು. ಮನೆಯ ಕಿಟಕಿ ಬಾಗಿಲುಗಳಿಗೆ ಸೊಳ್ಳೆ ಪರದೆ ಹಾಕಿಸಿಕೊಳ್ಳಬೇಕು. ರಾಜ್ಯದ 10 ಜಿಲ್ಲೆಗಳಲ್ಲಿ ಕಳೆದ 3 ವರ್ಷಗಳಿಂದ ಒಂದೇ ಒಂದು ಮಲೇರಿಯಾ ಪ್ರಕರಣ ಕಂಡು ಬಂದಿಲ್ಲ. ಇದು ಇಲಾಖೆ ಹಾಗೂ ಅದರಲ್ಲಿ ಕಾರ್ಯನಿರ್ವಹಿಸಿದ ಸಿಬ್ಬಂದಿಗಳ ಹೆಮ್ಮೆ. ಉಡುಪಿ, ಮಂಗಳೂರು ಪ್ರದೇಶಗಳಲ್ಲಿ ಮಲೇರಿಯಾ ಪ್ರಕರಣಗಳು ಹೆಚ್ಚಿವೆ. ಈ ಬಗ್ಗೆ ಅಧ್ಯಯನ ನಡೆಯುತ್ತಿದೆ. ವರದಿ ಬಂದ ಮೇಲೆ ಈ ಪ್ರದೇಶಗಳಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಅನ್ನುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಹೇಳಿದರು.

Also read: ಭಯೋತ್ಪಾದನೆಯನ್ನು ಎದುರಿಸಲು ಗೊ.ರು. ಚನ್ನಬಸಪ್ಪ ಅವರ ಪುಸ್ತಕ ಶಕ್ತಿ ನೀಡುತ್ತದೆ: ಸಿಎಂ

ತಪಾಸಣೆಗೆ ಮಹತ್ವ ನೀಡಿ:
ಜ್ವರ ಅಥವಾ ಬೇರೆ ರೋಗ ಲಕ್ಷಣ ಕಂಡು ಬಂದಾಗ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕ. ಇದರಿಂದ ರೋಗವನ್ನು ಬೇಗನೆ ಪತ್ತೆ ಹಚ್ಚಬಹುದು. ಚಿಕಿತ್ಸೆಯನ್ನು ಬೇಗನೆ ಆರಂಭಿಸಬಹುದು. ಸರ್ಕಾರ ಎಲ್ಲಾ ಪ್ರಾಥಮಿಕ, ಸಮುದಾಯ, ತಾಲೂಕು, ಜಿಲ್ಲಾ ಆಸ್ಪತ್ರೆಗಳಲ್ಲಿ ರಕ್ತ ಪರೀಕ್ಷೆಗೆ ಬೇಕಾದಂತಹ ವ್ಯವಸ್ಥೆಗಳನ್ನು ಮಾಡಿದೆ. ಸಾರ್ವಜನಿಕರು ಈ ವ್ಯವಸ್ಥೆಯನ್ನು ಹೆಚ್ಚಾಗಿ ಬಳಸಿಕೊಳ್ಳಬೇಕು. ಖಾಸಗಿ ಆಸ್ಪತ್ರೆಗಳು ಕೂಡ ಸರ್ಕಾರದ ಜೊತೆ ಕೈ ಜೋಡಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಖಾಸಗಿ ವೈದ್ಯರುಗಳು ಕೂಡ ಮಲೇರಿಯಾ ಮತ್ತು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲ ಪಡಿಸಬೇಕು. ಕರ್ನಾಟಕವನ್ನು ಮಲೇರಿಯಾ ಮುಕ್ತ ರಾಜ್ಯವನ್ನಾಗಿ ಮಾಡಬೇಕು. ಪ್ರಧಾನಿಗಳು 2030ಕ್ಕೆ ಮಲೇರಿಯಾ ಮುಕ್ತ ಭಾರತಕ್ಕೆ ಕರೆ ಕೊಟ್ಟಿದ್ದಾರೆ. ಆದರೆ ಕರ್ನಾಟಕ 2027ರ ಹೊತ್ತಿಗೆ ಮಲೇರಿಯಾವನ್ನು ಮುಕ್ತ ವಾಗಬೇಕು. ಅದಕ್ಕಾಗಿ ತಯಾರಿ, ಸಿದ್ಧತೆಗಳು ಮತ್ತು ವಿಶೇಷ ಕಾರ್ಯಯೋಜನೆಗಳು ಬೇಗನೆ ಸಿದ್ಧವಾಗಬೇಕು ಎಂದು ಹೇಳಿದರು.

ಕೆಲವು ಆರೋಗ್ಯ ಕಾರ್ಯಕರ್ತರಿಂದ ಸರ್ಕಾರಕ್ಕೆ ಇರುಸು ಮುರಿಸು ಉಂಟಾಗುವ ಘಟನೆ ನಡೆದಿದ್ದು, ಸರ್ಕಾರದ ಗಮನಕ್ಕೆ ಬಂದಿದೆ. ಅದಕ್ಕಾಗಿ ಕ್ರಮ ಗೊಳ್ಳಲಾಗಿದೆ. ಬಯೋ ಮೆಟ್ರಿಕ್ ವ್ಯವಸ್ಥೆ ಜಾರಿಗೆ ತರಲಾಗಿದೆ. ಸರ್ಕಾರ 7ನೇ ವೇತನ ಆಯೋಗದ ವರದಿಯಂತೆ ವೇತನ ನಿಡುತ್ತಿದೆ. ಆರೋಗ್ಯ ಕಾರ್ಯಕರ್ತರು ತಮ್ಮ ಕೆಲಸವನ್ನು ಮಹತ್ವ ಕೊಟ್ಟು ಮುಗಿಸಬೇಕು. ಬಡ ಜನರ ಸೇವೆ ಮಾಡಬೇಕು. ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಹೆಚ್ಚು ಹೆಚ್ಚು ಸೇವೆಗಳನ್ನು ನೀಡಲಾಗುತ್ತಿದೆ. ವೈದ್ಯರ ನೇಮಕವಾಗಿದೆ. ರಾಜ್ಯದ ಕಟ್ಟ ಕಡೆಯ ವ್ಯಕ್ತಿ ಕೂಡ ವಿಶ್ವಾಸ ಮತ್ತು ನಂಬಿಕೆಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಪಡೆಯಬೇಕು ಎಂದರು.

ಬ್ರಿಟನ್ ನಲ್ಲಿ ನ್ಯಾಷಲ್ ಹೆಲ್ತ್ ಸರ್ವೀಸ್ ಮೂಲಕ ಎಲ್ಲರಿಗೂ ಆರೋಗ್ಯದ ವಿಚಾರದಲ್ಲಿ ಸಂಪೂರ್ಣ ಉಚಿತ ಸೇವೆ ಸಿಗುತ್ತದೆ. ಕರ್ನಾಟಕದಲ್ಲೂ ಅದೇ ರೀತಿಯಲ್ಲಿ ಆರೋಗ್ಯ ಸೇವೆ ಸಿಗಬೇಕು. ಮಾರಕ ರೋಗ, ಕ್ಲಿಷ್ಟ ಶಸ್ತ್ರ ಚಿಕಿತ್ಸೆಗಳು ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್ಚು ಹೆಚ್ಚು ನಡೆಯಬೇಕು. ಈಗಾಗಲೇ ಪ್ರತಿದಿನ 30,000 ಸೈಕಲ್ ನಷ್ಟು ನಡೆಯುತ್ತಿದ್ದ ಡಯಾಲಿಸಿಸ್ ಅನ್ನು 60,000 ಸೈಕಲ್ ಗಳಿಗೆ ಏರಿಸಲಾಗಿದೆ. ಆರೋಗ್ಯ ಕರ್ನಾಟಕದ ಕನಸು ನನಸಾಗಬೇಕು. ಖಾಸಗಿಯಲ್ಲಿ ದುಬಾರಿಯಾಗಿರುವ ಸೇವೆ ಉಚಿತವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ಹೆಚ್ಚು ಸಿಗುವಂತಾದರೆ ಆರೋಗ್ಯಯುಕ್ತ ಕರ್ನಾಟಕ ನಿರ್ಮಾಣವಾಗುತ್ತದೆ.


ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister SudhakaNewsinKannadaNewsKannadaಬೆಂಗಳೂರುಸಚಿವ ಡಾ. ಕೆ. ಸುಧಾಕರ್‌
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಯೋತ್ಪಾದನೆಯನ್ನು ಎದುರಿಸಲು ಗೊ.ರು. ಚನ್ನಬಸಪ್ಪ ಅವರ ಪುಸ್ತಕ ಶಕ್ತಿ ನೀಡುತ್ತದೆ: ಸಿಎಂ

Next Post

ವಿಜಯಪುರ: ಬೂದಿಹಾಳ ಪೀರಾಪುರ ಏತ ನೀರಾವರಿ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ

kalpa News

kalpa News

Next Post
ವಿಜಯಪುರ: ಬೂದಿಹಾಳ ಪೀರಾಪುರ ಏತ ನೀರಾವರಿ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ

ವಿಜಯಪುರ: ಬೂದಿಹಾಳ ಪೀರಾಪುರ ಏತ ನೀರಾವರಿ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL