ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಿರೀಕ್ಷೆಯಂತೆ ಅಧಿಕವಾಗಿ ಸಿಂದಗಿಯಲ್ಲಿ ನಮ್ಮ ಬಿಜೆಪಿ ಅಭ್ಯರ್ಥಿ ರಮೇಶ್ ಬೂಸನೂರ್ ಅವರು ಪ್ರಚಂಡ ಬಹುಮತದಿಂದ ಆಯ್ಕೆಯಾಗಿದ್ದು ಪಕ್ಷದ ಕಾರ್ಯಕರ್ತರಲ್ಲಿ ನವ ಚೈತನ್ಯ ಮೂಡಿಸಿದೆ ಎಂದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.
ಸಿಂದಗಿ ಕ್ಷೇತ್ರದಲ್ಲಿ ವಿರೋಧ ಪಕ್ಷ ಕಾಂಗ್ರೆಸ್ ತನ್ನೆಲ್ಲ ಸಂಪನ್ಮೂಲ ಗಳನ್ನು ಬಳಸಿ, ಕೇವಲ ಸಹಾನುಭೂತಿಯ ಬಲದಿಂದ ಚುನಾವಣೆಯನ್ನು ಎದುರಿಸಲು ಯೋಜನೆ ರೂಪಿಸಿತ್ತು. ಆದರೆ ಬಿ ಜೆ ಪಿ ಪಕ್ಷ ಮಾತ್ರ ತನ್ನ ಜನಪರ ಸಿದ್ದಾಂತ ಮತ್ತು ಕಾರ್ಯಕ್ರಮಗಳ ಆಧಾರದ ಮೇಲೆ ಚುನಾವಣಾ ಪ್ರಚಾರ ನಡೆಸಿದ್ದು, ಅದಕ್ಕೆ ಜನತೆಯ ಪ್ರಚಂಡ ಬೆಂಬಲ ವ್ಯಕ್ತವಾಗಿದೆ ಎಂದಿದ್ದಾರೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಬಿಜೆಪಿಯ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಪಕ್ಷದ ಅಭ್ಯರ್ಥಿಯ ಯಶಸ್ಸಿಗೆ ಕಾರಣವಾಗಿದೆ ಎಂದಿದ್ದಾರೆ.
ಹಾನಗಲ್ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯೂ ಗಣನೀಯ ಮತಗಳನ್ನು ಪಡೆದಿದ್ದರೂ, ಹಿನ್ನಡೆ ಆಗಿದೆ. ಈ ಎರಡೂ ಕ್ಷೇತ್ರಗಳಲ್ಲಿ ಬಂದಿರುವ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಯಾವುದೇ ರಾಜಕೀಯ ಸ್ಥಿತ್ಯಂತರಕ್ಕೆ ಕಾರಣವಾಗುವುದಿಲ್ಲ ಎಂದೂ ಸಚಿವರು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post