ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ ರೂಪಿಸುತ್ತಿರುವ ಮುಖ್ಯಮಂತ್ರಿ ರಾಜೀನಾಮೆ ವಿಚಾರದಲ್ಲಿ ಇದೇ ಮೊದಲ ಬಾರಿಗೆ ಮೌನ ಮುರಿದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆಯ ಸುಳಿವು ನೀಡಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಜುಲೈ ೨೫ರಂದು ಪಕ್ಷದ ಹೈಕಮಾಂಡ್ ನೀಡುವ ಸಂದೇಶಕ್ಕಾಗಿ ಕಾಯುತ್ತಿದ್ದೇನೆ. ಇಡೀ ದೇಶದಲ್ಲಿ 75 ವರ್ಷ ಮೀರಿದ ಯಾರಿಗೂ ಬಿಜೆಪಿ ಅಧಿಕಾರ ನೀಡಿಲ್ಲ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ ಹಾಗೂ ಜೆ.ಪಿ. ನಡ್ಡಾ ನನ್ನ ಬಗ್ಗೆ ವಿಶೇಷ ಕಾಳಜಿ ತೋರಿಸಿ ಅಧಿಕಾರ ನೀಡಿದ್ದಾರೆ.
ಜುಲೈ 25ಕ್ಕೆ ನಾನು ಎರಡು ವರ್ಷ ಅಧಿಕಾರ ಪೂರೈಸುತ್ತೇನೆ. ಅಂದು ಕೇಂದ್ರದ ನಾಯಕರು ನೀಡುವ ಸೂಚನೆಗೆ ಬದ್ಧನಾಗಿದ್ದೇನೆ ಎಂದರು.
ಪಕ್ಷದ ಕಾರ್ಯಕರ್ತರು ಯಾವುದೇ ಗೊಂದಲಕ್ಕೆ ಒಳಗಾಗಬಾರದು. ರಾಜ್ಯದ ವಿವಿಧ ಮಠಾಧೀಶರು ನನ್ನ ಬಗ್ಗೆ ತೋರಿಸಿದ ಕಾಳಜಿಗೆ ಧನ್ಯವಾದಗಳು. ಮುಂದಿನ ದಿನಗಳಲ್ಲಿ ಪಕ್ಷವನ್ನು ಸದೃಢಗೊಳಿಸಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವುದೇ ನನ್ನ ಗುರಿ. ಪಕ್ಷದ ಕಾರ್ಯಕರ್ತರು ಗೊಂದಲಕ್ಕೆ ಒಳಗಾಗಬಾರದು ಹಾಗೂ ಒತ್ತಡ ಅಥವಾ ಪ್ರತಿಭಟನೆಗಳನ್ನು ಮಾಡಬಾರದು ಎಂದು ಮನವಿ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post