ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಾರ್ಚ್ 7 ರಂದು ರಾಜ್ಯ ಬಜೆಟ್ #State Budget ಮಂಡನೆಯಾಗುವ ಸಾಧ್ಯತೆ ಇದ್ದು, ಫೆ.6 ಗುರುವಾರದಂದು ಸಿಎಂ ಸಿದ್ದರಾಮಯ್ಯ #CM Siddaramaiah ಬಜೆಟ್ ಸಿದ್ಧತೆ ಆರಂಭಿಸಲಿದ್ದಾರೆ ಎಂದು ತಿಳಿದುಬಂದಿದೆ.
ಎರಡು ದಿನಗಳ ಹಿಂದಷ್ಟೇ ಮಂಡಿ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದರು. ಅದರಂತೆ ಎರಡು ದಿನ ಸಿಎಂ ಅವರ ಎಲ್ಲಾ ಕಾರ್ಯಕ್ರಮ ಗಳನ್ನು ರದ್ದು ಮಾಡಲಾಗಿತ್ತು.
ಮಾರ್ಚ್ ಮೊದಲ ವಾರದಲ್ಲಿ ಜಂಟಿ ಅವೇಶನ ನಡೆಸಲು ಸರ್ಕಾರದ ಸಿದ್ಧತೆ ನಡೆಸಿದೆ. ಮಾರ್ಚ್ 3 ರಂದು ರಾಜ್ಯಪಾಲರು ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಸಾಧ್ಯತೆ ಇದೆ. ಮುಂದಿನ ಕ್ಯಾಬಿನೆಟ್‌ನಲ್ಲಿ ಬಜೆಟ್ ದಿನಾಂಕ, ಜಂಟಿ ಅವೇಶನ ದಿನಾಂಕ ಅಂತಿಮಗೊಳಿಸಲಿರುವ ಸರ್ಕಾರ ಅಧಿಕೃತ ಘೋಷಣೆ ಮಾಡಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post