ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ಮದ್ಯಪ್ರಿಯರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಪ್ರೀಮಿಯಂ ಬ್ಯಾಂಡ್’ಗಳ ದರದಲ್ಲಿ ಸ್ವಲ್ಪ ಮಟ್ಟಿಗೆ ಇಳಿಕೆಯಾಗಿದೆ.
ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವ ಪ್ರೀಮಿಯಂ ಬ್ರಾಂಡ್’ಗಳ ದರದಲ್ಲಿ ಇಳಿಕೆ ಮಾಡಲಾಗಿದೆ.
ಭಾರತದಲ್ಲಿ ತಯಾರಿಸಿರುವ ಮದ್ಯದ #Alchohal ಅಬಕಾರಿ ಸುಂಕದ ಸ್ಲಾö್ಯಬ್’ಗಳ ಸಂಖ್ಯೆಯನ್ನು ಇತರೆ ರಾಜ್ಯಗಳ ಮದ್ಯದ ದರಕ್ಕೆ ಅನುಗುಣವಾಗಿ ರಾಜ್ಯದಲ್ಲಿ ಮದ್ಯ ಮತ್ತು ಬಿಯರ್ ಬೆಲೆಗಳನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ.
Also read: ಸಾಗರ | ಕೃಷಿ ಹೊಂಡಕ್ಕೆ ಹಾರಿ ರೈತ ಆತ್ಮಹತ್ಯೆ | ಕಾರಣವೇನು?
ಇದರಿಂದ ರಾಜ್ಯದಲ್ಲಿ ಮದ್ಯದ ದರದಲ್ಲಿ ಸ್ವಲ್ಪಮಟ್ಟಿನ ವ್ಯತ್ಯಾಸವಾಗಲಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ.
ಈಗಾಗಲೇ ಕರಡು ಅಧಿಸೂಚನೆ ಹೊರಡಿಸಿ ಒಂದೂವರೆ ತಿಂಗಳಾದರೂ ಅಂತಿಮಗೊಳಿಸದ ಕಾರಣ ಮಾರುಕಟ್ಟೆಯಲ್ಲಿ ಪ್ರೀಮಿಯಂ ಬ್ರಾಂಡ್’ಗಳ ಮದ್ಯಕ್ಕೆ ಭಾರಿ ಕೊರತೆ ಉಂಟಾಗಿತ್ತು. ಇದೀಗ ಅಂತಿಮ ಅಧಿಸೂಚನೆಯಂತೆ ಸ್ಲಾö್ಯಬ್’ಗಳ ಸಂಖ್ಯೆ 18 ರಿಂದ 16ಕ್ಕೆ ಇಳಿಸಲಾಗಿದೆ. ಆದರೆ ಮೊದಲ ಮೂರು ಸ್ಲಾö್ಯಬ್’ಗಳಲ್ಲಿ ದರದ ವ್ಯತ್ಯಾಸ ಆಗುವುದಿಲ್ಲ. ನಾಲ್ಕನೇ ಸ್ಲ್ಯಾಬ್ ನಲ್ಲಿ ಮದ್ಯದ ದರ ಸ್ವಲ್ಪ ಏರಿಕೆಯಾಗಲಿದೆ. ಉಳಿದಂತೆ ಐದನೇ ಸ್ಲಾಬ್ ಬಳಿಕ 16ನೇ ಸ್ಲಾö್ಯಬ್’ವರೆಗೆ ದರ ಕಡಿಮೆಯಾಗಲಿದೆ. ಆ ಸ್ಲಾö್ಯಬ್’ಗಳಲ್ಲಿನ ವಿಸ್ಕಿ, ರಮ್, ಬ್ರಾಂಡಿಗಳ ಬೆಲೆ ಸಹಜವಾಗಿಯೇ ಕಡಿಮೆಯಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post