No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Wednesday, August 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೋವಿಡ್ ಲಸಿಕೆ ನೀಡುವ ಗುರಿ ತಲುಪುವಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ: ಸಚಿವ ಸುಧಾಕರ್

kalpa News by kalpa News
September 18, 2021
in ಬೆಂಗಳೂರು ನಗರ
0
ಕೋವಿಡ್ ಲಸಿಕೆ ನೀಡುವ ಗುರಿ ತಲುಪುವಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ: ಸಚಿವ ಸುಧಾಕರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 29 ಲಕ್ಷ ಲಸಿಕೆ ನೀಡಿದ್ದು, ಇನ್ನೂ 1.68 ಲಕ್ಷ ದಾಖಲು ಮಾಡಬೇಕಿದೆ. ದೇಶದಲ್ಲಿ ನೀಡಿದ ಒಟ್ಟು ಲಸಿಕೆಯಲ್ಲಿ ಶೇ.11 ರಷ್ಟು ರಾಜ್ಯದಲ್ಲಿ ನೀಡಲಾಗಿದೆ. ಈ ಮೂಲಕ ಕರ್ನಾಟಕ ಹೊಸ ಸಾಧನೆ ಮಾಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.



ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವನ್ನು ಲಸಿಕೆ ನೀಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿತ್ತು. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರೋತ್ಸಾಹ ನೀಡಿದರು. ಒಂದು ದಿನದಲ್ಲಿ 30 ಲಕ್ಷ ಲಸಿಕೆ ನೀಡುವ ಗುರಿ ಹಾಕಿಕೊಂಡಿದ್ದು, ಶನಿವಾರ ಬೆಳಗ್ಗೆ 8.30 ವೇಳೆಗೆ 29,50,093 ಲಸಿಕೆ ನೀಡಿರುವುದು ಕೋವಿಡ್ ನಲ್ಲಿ ದಾಖಲಾಗಿದೆ. ಇನ್ನೂ 1.68 ಲಕ್ಷ ಡೋಸ್ ಲಸಿಕೆ ನೀಡಿರುವುದನ್ನು ದಾಖಲು ಮಾಡಬೇಕಿದೆ. ಇದರಿಂದಾಗಿ 31 ಲಕ್ಷ ಲಸಿಕೆ ನೀಡಿದಂತಾಗುತ್ತದೆ. ದೇಶದಲ್ಲಿ ನೀಡಿದ ಒಟ್ಟು ಲಸಿಕೆಯಲ್ಲಿ ಶೇ.11 ರಷ್ಟು ರಾಜ್ಯದಲ್ಲಿ ನೀಡಲಾಗಿದೆ ಎಂದು ವಿವರಿಸಿದರು.

ಪ್ರತಿ ಅರ್ಹ ಹತ್ತು ಲಕ್ಷ ಜನಸಂಖ್ಯೆಗೆ ಹೆಚ್ಚು ಲಸಿಕೆ ನೀಡಿದ ರಾಜ್ಯಗಳ ಪೈಕಿ ಕರ್ನಾಟಕವು 62,003 ಲಸಿಕೆ ನೀಡುವ ಮೂಲಕ ಮೊದಲ ಸ್ಥಾನದಲ್ಲಿದೆ. 14,401 ಲಸಿಕೆ ಕೇಂದ್ರಗಳನ್ನು ಸಿದ್ಧಪಡಿಸಲಾಗಿದ್ದು, ಒಂದು ಕಡೆ ಸರಾಸರಿ 205 ಲಸಿಕೆ ನೀಡಲಾಗಿದೆ. 14 ಜಿಲ್ಲೆಗಳು ಗುರಿಗಿಂತ ಅಧಿಕ ಸಾಧನೆ ಮಾಡಿವೆ. 4 ಜಿಲ್ಲೆಗಳು ಮಾತ್ರ ಗುರಿಗಿಂತ ಶೇ.75ನಷ್ಟು ಸಾಧನೆ ಮಾಡಿವೆ ಎಂದರು.


ಇಡೀ ದೇಶದಲ್ಲಿ ಅತಿ ಹೆಚ್ಚು ಲಸಿಕೆಯನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ (4.09 ಲಕ್ಷ) ನೀಡಲಾಗಿದೆ. ಬೆಳಗಾವಿಯಲ್ಲಿ 2.57 ಲಕ್ಷ ಲಸಿಕೆ ನೀಡಲಾಗಿದೆ. ಜಿಲ್ಲಾಮಟ್ಟದ ಸಾಧನೆಯಲ್ಲಿ ಎರಡು ಸ್ಥಾನಗಳು ರಾಜ್ಯಕ್ಕೆ ಬಂದಿವೆ. ರಾಜ್ಯದಲ್ಲಿ ಒಟ್ಟು 14.96 ಲಕ್ಷ ಲಸಿಕೆಗಳನ್ನು ಮಹಿಳೆಯರು ಪಡೆದಿದ್ದು, ಪುರುಷರಿಗಿಂತ (14.53 ಲಕ್ಷ) ಮುಂದೆ ಇದ್ದಾರೆ. ಇವೆಲ್ಲ ಸೇರಿ ಈವರೆಗೆ ಒಟ್ಟು 5 ಕೋಟಿ ಲಸಿಕೆ ನೀಡಿದ್ದು, ಕಳೆದ 20 ದಿನಗಳಲ್ಲಿ 1 ಕೋಟಿ ಲಸಿಕೆ ನೀಡಲಾಗಿದೆ. 1 ಕೋಟಿ ಜನರಿಗೆ ಎರಡೂ ಡೋಸ್ ನೀಡಲಾಗಿದೆ ಎಂಬ ಹೆಗ್ಗಳಿಕೆ ಬಂದಿದೆ. ಕಲಬುರ್ಗಿಯಲ್ಲಿ ಗುರಿಗಿಂತ ಕೇವಲ ಶೇ41, ಕೊಪ್ಪಳದಲ್ಲಿ ಶೇ.62, ಉಡುಪಿಯಲ್ಲಿ ಶೇ.63 ಆಗಿದೆ. ಬೆಂಗಳೂರು ನಗರದಲ್ಲಿ ಶೇ.143, ಶಿವಮೊಗ್ಗದಲ್ಲಿ ಶೇ.134, ಧಾರವಾಡ, ಹಾಸನ, ಚಿಕ್ಕಬಳ್ಳಾಪುರ, ರಾಮನಗರ, ದಾವಣಗೆರೆ ಜಿಲ್ಲೆಗಳಲ್ಲಿ ಶೇ.120 ಸಾಧನೆ ಮಾಡಿವೆ ಎಂದರು.


ರಕ್ತ ಸಂಗ್ರಹ, ಅಂಗಾಂಗ ದಾನ:
ಇದೇ ದಿನ ರಾಜ್ಯದಲ್ಲಿ ರಕ್ತದಾನ ಶಿಬಿರ ನಡೆದಿದ್ದು, ಒಟ್ಟು 5,201 ಯುನಿಟ್ ರಕ್ತ ಸಂಗ್ರಹವಾಗಿದೆ. ಬಿಬಿಎಂಪಿಯಲ್ಲಿ 1,240 ಯುನಿಟ್, ಬಳ್ಳಾರಿಯಲ್ಲಿ 298, ದಕ್ಷಿಣ ಕನ್ನಡದಲ್ಲಿ 295 ಯುನಿಟ್ ಸಂಗ್ರಹವಾಗಿದೆ. ಎರಡು ವಾರಗಳಲ್ಲಿ ಒಂದು ಲಕ್ಷ ಯುನಿಟ್ ರಕ್ತ ಸಂಗ್ರಹಿಸಬೇಕೆಂಬ ಗುರಿ ಇದ್ದು, ಇದಕ್ಕಾಗಿ ಸೂಚನೆ ನೀಡಲಾಗಿದೆ. ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ.1 ಜನರಿಗೆ ರಕ್ತ ಬೇಕಿದೆ ಎಂದರು.

ಅಂಗಾಂಗ ಕಸಿಗೂ ದಾನ ಹೆಚ್ಚಬೇಕಿದೆ. ಇದಕ್ಕಾಗಿ ಮೆಡಿಕಲ್ ಕಾಲೇಜು, ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ದಾನ ವಿಭಾಗ ಆರಂಭಿಸಲು ತೀರ್ಮಾನಿಸಲಾಗಿದೆ. ಜೊತೆಗೆ ಮುಖ್ಯಮಂತ್ರಿಗಳಿಂದ ದೊಡ್ಡ ಅಭಿಯಾನಕ್ಕೆ ಚಾಲನೆ ನೀಡಿ ಜಾಗೃತಿ ಮೂಡಿಸಿ ಇಡೀ ದೇಶಕ್ಕೆ ಸಂದೇಶ ರವಾನಿಸಲಾಗುವುದು. ಜೊತೆಗೆ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ಅನ್ನು ಪ್ರತಿ ಕುಟುಂಬಕ್ಕೆ ನೀಡಲು ಮೂರು ತಿಂಗಳ ಗುರಿ ನೀಡಲಾಗುವುದು. ಎರಡೂವರೆ ಕೋಟಿ ಕುಟುಂಬಕ್ಕೆ ನೀಡುವ ಗುರಿ ಇದೆ ಎಂದರು.

ವಿಷನ್ ವರದಿ:
250 ತಜ್ಞರು ಸೇರಿ ರೂಪಿಸಿದ ಆರೋಗ್ಯ ವಲಯದ ವಿಷನ್ ವರದಿಯನ್ನು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿಗಳಿಗೆ ನೀಡಿ ಅವರಿಂದ ಚಾಲನೆ ನೀಡಲಾಗುವುದು ಎಂದರು.

ಓರ್ವ ವ್ಯಕ್ತಿ ನಿಫಾ ಪರೀಕ್ಷೆ ಮಾಡಿಸಿಕೊಂಡಿದ್ದು, ಅವರನ್ನು ಐಸೋಲೇಟ್ ಮಾಡಲಾಗಿದೆ. ಇನ್ನೂ ವರದಿ ಬಂದಿಲ್ಲ ಎಂದರು.

ಹಿಂದು ಧರ್ಮ ರಕ್ಷಣೆ ಬಗ್ಗೆ ಕಾಂಗ್ರೆಸ್ ನಿಂದ ಪಾಠ ಕಲಿಯಬೇಕಿಲ್ಲ. ಹಿಂದುತ್ವದ ರಕ್ಷಣೆ ಬಿಜೆಪಿಗೆ ಸ್ವಾಭಾವಿಕವಾಗಿಯೇ ಬಂದಿದೆ. ಈ ವಿಚಾರದಲ್ಲಿ ಅಚಾತುರ್ಯವಾಗಿದ್ದರೆ ಸರಿಪಡಿಸಲಾಗುತ್ತದೆ ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister SudhakarNews in KannadaNews KannadaPM Narendra ModiState Newsಪ್ರಧಾನಿ ನರೇಂದ್ರ ಮೋದಿ‌ಬೆಂಗಳೂರು:ಸಚಿವ ಸುಧಾಕರ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸುಸಜ್ಜಿತ ಶಾಲೆಗಳನ್ನು ಸ್ಥಾಪಿನೆಯೊಂದಿಗೆ ಗ್ರಾಮೀಣಾಭಿವೃಧ್ಧಿಗೆ ಅಗತ್ಯ ಕ್ರಮ: ಸಚಿವ ಈಶ್ವರಪ್ಪ

Next Post

ರಾಜ್ಯಕ್ಕೆ ನಾಲ್ಕು ಎನ್‍ಎಸ್‍ಎಸ್ ರಾಷ್ಟ್ರೀಯ ಪ್ರಶಸ್ತಿ: ಸಚಿವ ನಾರಾಯಣಗೌಡ ಅಭಿನಂದನೆ

kalpa News

kalpa News

Next Post
ರಾಜ್ಯಕ್ಕೆ ನಾಲ್ಕು ಎನ್‍ಎಸ್‍ಎಸ್ ರಾಷ್ಟ್ರೀಯ ಪ್ರಶಸ್ತಿ: ಸಚಿವ ನಾರಾಯಣಗೌಡ ಅಭಿನಂದನೆ

ರಾಜ್ಯಕ್ಕೆ ನಾಲ್ಕು ಎನ್‍ಎಸ್‍ಎಸ್ ರಾಷ್ಟ್ರೀಯ ಪ್ರಶಸ್ತಿ: ಸಚಿವ ನಾರಾಯಣಗೌಡ ಅಭಿನಂದನೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL