ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಬೆಂಗಳೂರಿನಿಂದ ಜೈಪುರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿಯೇ ಗರ್ಭಿಣಿಯೋರ್ವರು ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜೈಪುರಕ್ಕೆ ಇಂಡಿಗೋ ವಿಮಾನ ಹೊರಟಿತ್ತು. ಇದರಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ವಿಮಾನ ಆಗಸದಲ್ಲಿದ್ದ ವೇಳೆಯೇ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಇದೇ ವೇಳೆ ವಿಮಾನದಲ್ಲಿದ್ದ ವೈದ್ಯರ ಸಹಾಯದಿಂದ ಅಲ್ಲಿಯೇ ಆಕೆಗೆ ಹೆರಿಗೆ ಮಾಡಿಸಲಾಗಿದ್ದು, ಮಹಿಳೆ ಸುಂದರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ತತಕ್ಷಣವೇ ಜೈಪುರ ನಿಲ್ದಾಣಕ್ಕೆ ಮಾಹಿತಿ ರವಾನಿಸಿ, ವಿಮಾನ ಅಲ್ಲಿಗೆ ತಲುಪುವ ವೇಳೆಗೆ ತಜ್ಞ ವೈದ್ಯರು ಹಾಗೂ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿತ್ತು. ವಿಮಾನ ಲ್ಯಾಂಡ್ ಆಗುತ್ತಿದ್ದಂತೆಯೇ ತಾಯಿ ಹಾಗೂ ಮಗುವನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಇಬ್ಬರೂ ಆರೋಗ್ಯದಿಂದಿದ್ದಾರೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post