ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಅವರಣದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ #Bangalore Stampede ರಾಯಲ್ ಚಾಲೆಂಜರ್ಸ್ ಬೆಂಗಳೂರು #RCB ಮತ್ತು ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ #Virat Kohli ಕಾರಣ ಎಂದು ಕರ್ನಾಟಕ ಸರ್ಕಾರದ ವರದಿ ಹೇಳುತ್ತಿದೆ.
11 ಜನರ ಸಾವಿಗೆ ಕಾರಣವಾದ ಬೆಂಗಳೂರು ಕಾಲ್ತುಳಿತಕ್ಕೆ ಕರ್ನಾಟಕ ಸರ್ಕಾರ ಆರ್‌ಸಿಬಿಯನ್ನು ದೂಷಿಸಿದ್ದು, ಕ್ರೀಡಾಂಗಣದಲ್ಲಿ ವಿಜಯೋತ್ಸವದಲ್ಲಿ ಪಾಲ್ಗೊಳ್ಳುವಂತೆ ಅಭಿಮಾನಿಗಳನ್ವು ಆಹ್ವಾನಿಸಲಾಗಿತ್ತು. ಆದರೆ ಇದಕ್ಕೆ ತಂಡದ ಆಡಳಿತ ಮಂಡಳಿ ರಾಜ್ಯ ಸರ್ಕಾರವನ್ನಾಗಲೀ ಅಥವಾ ಪೊಲೀಸ್ ಇಲಾಖೆಯ ಅನುಮತಿ ಪಡೆದಿರಲಿಲ್ಲ. ದಿಢೀರ್ ಕಾರ್ಯಕ್ರಮ ಘೋಷಣೆ ಮಾಡಿದ್ದರಿಂದ ಹಠಾತ್ತನೆ “ಜಮಾಯಿಸಿದ ಜನಸಮೂಹ’ನೂಕು ನುಗ್ಗಲು ಉಂಟಾಯಿತು ಎಂದು ಕರ್ನಾಟಕ ಸರ್ಕಾರದ ವರದಿಯಲ್ಲಿ ತಿಳಿಸಲಾಗಿದೆ.

ವರದಿಯನ್ನು ಗೌಪ್ಯವಾಗಿಡಲು ರಾಜ್ಯ ಸರ್ಕಾರ ನ್ಯಾಯಾಲಯವನ್ನು ಒತ್ತಾಯಿಸಿತ್ತು, ಆದರೆ ಅಂತಹ ಗೌಪ್ಯತೆಗೆ ಯಾವುದೇ ಕಾನೂನು ಆಧಾರಗಳಿಲ್ಲ ಎಂದು ನ್ಯಾಯಾಲಯ ಹೇಳಿತ್ತು. ಹೀಗಾಗಿ ಕರ್ನಾಟಕ ಹೈಕೋರ್ಟ್ ನಿರ್ದೇಶನದ ಮೇರೆಗೆ ವರದಿಯನ್ನು ಬಹಿರಂಗಪಡಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post