ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶಾಲಾ ಮಕ್ಕಳಿಗೆ ಇದೇ 21 ರಿಂದ ಮಧ್ಯಾಹ್ನದ ಬಿಸಿಯೂಟ ಪುನರಾರಂಭಿಸಲಾಗುತ್ತದೆ ಹಾಗೂ 1 ರಿಂದ 5ನೇ ತರಗತಿಯ ಆರಂಭಕ್ಕೆ ಚಿಂತನೆ ನಡೆದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಅಕ್ಟೋಬರ್ 20ರವರೆಗೆ ಶಾಲೆಗಳಿಗೆ ದಸರಾ ರಜೆಯಿದೆ. ರಜೆ ಮುಗಿಯುತ್ತಿದ್ದಂತೆ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮ ಆರಂಭಿಸಲಾಗುವುದು. ಬಳಿಕ ೧ರಿಂದ ೫ನೇ ತರಗತಿ ಆರಂಭಕ್ಕೆ ಸಿದ್ಧತೆ ನಡೆಲಾಗುತ್ತಿದೆ ಎಂದರು.
ದಸರಾ ನಂತರ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ಶಾಲೆಗಳ ಆರಂಭ ಕುರಿತಂತೆ ಚರ್ಚಿಸಲಾಗುತ್ತದೆ. ರಾಜ್ಯದಲ್ಲಿ 1 ರಿಂದ 5ನೇ ತರಗತಿ ಆರಂಭಕ್ಕೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಬಳಿ ಅನುಮತಿ ಕೇಳುತ್ತೇವೆ, ಅನುಮತಿ ನೀಡಿದರೆ ಶಾಲೆ ಆರಂಭಿಸುತ್ತೇವೆ ಎಂದು ತಿಳಿಸಿದರು.
ಈಗಾಗಲೇ 6ನೇ ತರಗತಿ ಮೇಲ್ಪಟ್ಟ ತರಗತಿಗಳು ಆರಂಭವಾಗಿದ್ದು, ಕಿರಿಯ ಪ್ರಾಥಮಿಕ ತರಗತಿಗಳು ಆರಂಭವಾಗಬೇಕಿದೆ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post