ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು ತಮ್ಮ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ಆರ್’ಎಸ್’ಎಸ್ #RSS ಹೆಸರನ್ನು ಅಸ್ತçವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ #Basavaraja Bommai ಕಿಡಿ ಕಾರಿದ್ದಾರೆ.
ಈ ಕುರಿತಂತೆ ಆರ್’ಎಸ್’ಎಸ್ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.
ಆರ್’ಎಸ್’ಎಸ್ ಹುಟ್ಟಿರುವುದೇ ಸೇವೆ ಮಾಡಲು, ಬ್ರಿಟೀಷರ ಕಾಲದಲ್ಲಿ ಕೆಳ ಮಟ್ಟದ ಜನರಿಗೆ ನ್ಯಾಯ ಸಿಗುತ್ತಿಲ್ಲ ಎಂದು ಹೇಳಿ ಅಂತ್ಯೋದಯ ವಿಚಾರ ಇಟ್ಟುಕೊಂಡು ಆರ್’ಎಸ್’ಎಸ್ ಹುಟ್ಟಿಕೊಂಡಿದೆ ಎಂದರು.
Also read: ಶಿವಮೊಗ್ಗ | ಇದು ಚಾನಲ್ಲೋ, ಚರಂಡಿಯೋ? ಕೊಳೆತು ನಾರುತ್ತಿದೆ ರಾಜೇಂದ್ರ ನಗರ ಚಾನಲ್
ಸಿಎಂ ಸಿದ್ದರಾಮಯ್ಯ ಅವರು ಆರ್’ಎಸ್’ಎಸ್ ಅನ್ನು ಬೈದರೆ ತಮ್ಮ ಮತ ಬ್ಯಾಂಕ್ ಗಟ್ಟಿಯಾಗುತ್ತದೆ ಎಂದು ತಿಳಿದು ಸಂಘದ ವಿರುದ್ದ ಆರೋಪ ಮಾಡುತ್ತಾರೆ. ಆರ್’ಎಸ್’ಎಸ್ ಏನು ಎಂದು ಸ್ವಾತಂತ್ರ ಬಂದು ಎಪ್ಪತ್ತೇಳು, ಎಪ್ಪತ್ತೆಂಟು ವರ್ಷದಲ್ಲಿ ಇಡೀ ದೇಶಕ್ಕೆ ಗೊತ್ತಿದೆ. ಕಾಂಗ್ರೆಸ್ ನಾಯಕಿ ಇಂದಿರ ಗಾಂಧಿಯೇ ಆರ್’ಎಸ್’ಎಸ್’ನ್ನು ಹೊಗಳಿದ್ದರು ಎಂದರು.
ಅಲ್ಲದೇ. ಕಾಂಗ್ರೆಸ್ ಮುಖಂಡರಗಿದ್ದ ಪ್ರಣಬ್ ಮುಖರ್ಜಿ ಅವರೇ ಆರ್’ಎಸ್’ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ಮೂಲ ಕಾಂಗ್ರೆಸ್ಸಿಗರಲ್ಲ, ಅವರು ಹೊರಗಡೆಯಿಂದ ಬಂದವರು. ಯಾರು ಹೊರಗಡೆಯಿಂದ ಬಂದಿರುತ್ತಾರೊ ಅವರು ತಮ್ಮ ನಿಷ್ಠೆ ತೋರಿಸಲು ಪದೇ ಪದೇ ಮಾತನಾಡುತ್ತಾರೆ. ಹೀಗಾಗಿ ಸಿದ್ದರಾಮಯ್ಯ ಅವರು ತಮ್ಮ ನಾಯಕತ್ವ ಗಟ್ಟಿಗೊಳಿಸಿಕೊಳ್ಳಲು ಆರ್’ಎಸ್’ಎಸ್’ನ್ನು ಅಸ್ತçವಾಗಿ ಬಳಸುತ್ತಿದ್ದಾರೆ. ಆರ್’ಎಸ್’ಎಸ್ ಏನು ಎಂದು ಎಲ್ಲ ಜನರಿಗೂ ಗೊತ್ತಿದೆ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post