ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಾಜಿ ಡಿಸಿಎಂ ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ ಬೆನ್ನಲ್ಲೇ, ಮಾಜಿ ಸಿಎಂ ಜಗದೀಶ್ ಶೆಟ್ಟರ್ Jagadish Shettar ಅವರು ಬಿಜೆಪಿ ಹೈಕಮಾಂಡ್’ಗೆ ಸೆಡ್ಡು ಹೊಡೆಯುವ ಸೂಚನೆ ನೀಡಿದ್ದಾರೆ.
ತಮಗೆ ಈ ಬಾರಿ ಟಿಕೇಟ್ ನೀಡುವುದಿಲ್ಲ ಎಂಬ ಕುರಿತಾಗಿ ಮಾತನಾಡಿದ ಅವರು, ಹೈಕಮಾಂಡ್ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Also read: ಈಶ್ವರಪ್ಪ ರಾಜಕೀಯ ನಿವೃತ್ತಿ: ಶಿವಮೊಗ್ಗದಲ್ಲಿ ಭುಗಿಲೆದ್ದ ಕಾರ್ಯಕರ್ತರ ಆಕ್ರೋಶ
ನಾನು ಆರು ಬಾರಿ ಶಾಸಕನಾಗಿ ಆಯ್ಕೆಯಾಗಿ, ಈವರೆಗೂ ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಕೆಲಸ ಮಾಡಿದ್ದೇನೆ. ಕ್ಷೇತ್ರದ ಜನರ ಹಾಗೂ ಕಾರ್ಯಕರ್ತರ ಅಭಿಪ್ರಾಯಕ್ಕೆ ವರಿಷ್ಠರು ಮನ್ನಣೆ ನೀಡುತ್ತಾರೆ ಎಂದುಕೊಂಡಿದ್ದೆ. ಆದರೆ, ಅವರ ನಿರ್ಧಾರಕ್ಕೆ ನಮ್ಮ ಸಮ್ಮತಿಯಿಲ್ಲ. ಏನಾದರೂ ಅಗಲಿ ಈ ಬಾರಿಯೂ ಸಹ ನಾನು ಚುನಾವಣೆಗೆ ನಿಲ್ಲುವುದು ನಿಶ್ಚಿತ ಎಂದಿದ್ದಾರೆ.










Discussion about this post