ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಅನಾಮಧೇಯ ಬೆದರಿಕೆ ಹಿನ್ನೆಲೆಯಲ್ಲಿ ಹಿರಿಯ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಗನ್ ಮ್ಯಾನ್ ಹಾಗೂ ಅವರ ಮನೆಗೆ ಬಿಗಿ ಭದ್ರತೆ ವಹಿಸಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಾಜಿ ಸಚಿವೆ ಹಾಗೂ ಸಾಹಿತಿ ಬಿ.ಟಿ. ಲಲಿತಾ ನಾಯಕ್, ನನ್ನನ್ನು, ನಟ ಶಿವರಾಜ್ ಕುಮಾರ್ ಹಾಗೂ ಬಿಜೆಪಿ ನಾಯಕ ಸಿ.ಟಿ. ರವಿ ಅವರನ್ನು ಕೊಲ್ಲುವುದಾಗಿ ಬೆದರಿಕೆ ಪತ್ರಬಂದಿದೆ ಎಂದಿದ್ದರು. ಈ ಹೇಳಿಕೆ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಶಿವರಾಜ್ ಕುಮಾರ್ ಹಾಗೂ ಲಲಿತಾ ನಾಯಕ್ ಅವರಿಗೆ ಭದ್ರತೆ ನೀಡಲಾಗಿದೆ.
ರಾಜ್ಯ ಸರ್ಕಾರ ಶಿವರಾಜ್ ಕುಮಾರ್ ನಿವಾಸಕ್ಕೆ ಎರಡು ಪಾಳಿಯಲ್ಲಿ ನಾಲ್ವರನ್ನು ಪೊಲೀಸರನ್ನು ಭದ್ರತೆಗೆ ನಿಯೋಜಿಸಿದ್ದು ಜೊತೆಗೆ ಗನ್ ಮ್ಯಾನ್ ಕೂಡ ನೀಡಿದೆ.
ಈ ಮಧ್ಯೆ ತಮ್ಮನ್ನು ಕೊಲ್ಲುವ ಬೆದರಿಕೆ ಪತ್ರದ ಕುರಿತು ಪ್ರತಿಕ್ರಿಯೆ ನೀಡಿರುವ ಶಿವರಾಜ್ ಕುಮಾರ್ ಈ ವಿಚಾರಕ್ಕೆ ಹೆಚ್ಚಿನ ಮಹತ್ವ ನೀಡುವುದು ಬೇಡ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post