ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ನಿಂತಿದ್ದ ಮೂರು ಬಸ್’ಗಳು ಅಗ್ನಿಗೆ ಆಹುತಿಯಾದ ಘಟನೆ ನಗರದಲ್ಲಿ ನಡೆದಿದೆ.
ಮೈಸೂರು ರಸ್ತೆಯ ಖಾಸಗಿ ಇಂಜಿನಿಯರಿಂಗ್ ಕಾಲೇಜು ಬಳಿಯಲ್ಲಿ ನಿಲ್ಲಿಸಲಾಗಿದ್ದ ಎಸ್’ಆರ್’ಎಸ್ ಕಂಪೆನಿಯ ಬಸ್’ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣ ಮಾತ್ರದಲ್ಲಿ ಬೆಂಕಿ ವ್ಯಾಪಿಸಿ, ಮೂರೂ ಬಸ್’ಗಳು ಸುಟ್ಟು ಕರಕಲಾಗಿವೆ.
ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿ, ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿದ ಕುರಿತಾಗಿ ವರದಿಯಾಗಿಲ್ಲ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















