ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹುಲಿ ಉಗುರು Tiger Claw ಪ್ರಕರಣದಲ್ಲಿ ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್ Big Boss Contestant Varthur Santhosh ಬಂಧನದ ನಂತರ ಸ್ಯಾಂಡಲ್‌ವುಡ್‌ನಲ್ಲಿ ಈ ವಿಚಾರ ಬಿರುಗಾಳಿ ಎಬ್ಬಿಸಿದ್ದು, ಹಲವು ಸ್ಟಾರ್ ನಟರ ಕುತ್ತಿಗೆಗೆ ಈ ವಿಚಾರ ಸುತ್ತಿಕೊಳ್ಳುತ್ತಿದೆ.
ಇದೇ ವಿಚಾರವಾಗಿ ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ Actor Jaggesh ಅವರ ನಿವಾಸದ ಮೇಲೆ ಅಧಿಕಾರಿಗಳು ಧಾಳಿ ನಡೆಸಿ, ಪರಿಶೀಲನೆ ನಡೆಸಿದ ಬೆನ್ನಲ್ಲೇ ಜಗ್ಗೇಶ್ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ಕಾನೂನು ದೊಡ್ಡದು ಅಧಿಕಾರಿಗಳು ಕೇಳಿದ ವಸ್ತು ಒಪ್ಪಿಸಲಾಗಿದೆ. ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಎಂದು ತಿಳಿಸಿರುವೆ ಎಷ್ಟೋ ದೋಚುವ ಮನುಷ್ಯರು, ಕೊಲೆ ಪಾತಕರು, ದೇಶದ್ರೋಹಿಗಳು, ಸಮಾಜಘಾತುಕರಿಗಿಂತ ನನ್ನ ತಾಯಿ ಕಾಣಿಕೆ ಬಗ್ಗೆ ನಿನ್ನೆಯಿಂದ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ. ತಲೆತಗ್ಗಿಸುವ ಕೆಲಸ ಮಾಡಿಲ್ಲ. ಮಾಡುವುದೂ ಇಲ್ಲ ಎಂದಿದ್ದಾರೆ.
ಇನ್ನೊಂದು ಟ್ವೀಟ್‌ನಲ್ಲಿ ಒಂದು ವಿಷಯ ಅದ್ಭುತವಾಗಿ ಅರಿತೆ ಪ್ರೀತಿಸುವವರು ಸಾವಿರ ಜನರಿದ್ದರೂ ವಿಷಯವಿಲ್ಲದೆ ದ್ವೇಷ ಮಾಡುವ ನೂರು ಮಂದಿ ಇದ್ದೇ ಇರುತ್ತಾರೆ. ಒಂದು ವಿಷಯ ನೆನಪ್ಪಿಟ್ಟುಕೊಳ್ಳಿ. ಒಳ್ಳೆಯ ಗುಣ ನಡತೆ ಇದ್ದಾಗ ಕೊಲ್ಲೋಕೆ ಸಾವಿರ ಮಂದಿ ಬಂದರೂ ಕಾಯಲು ಒಬ್ಬ ಬರುತ್ತಾನೆ. ಅವನೇ ದೇವರು. ಬದುಕಿನಲ್ಲಿ ಸಾಧ್ಯವಾದರೆ ಒಬ್ಬರಿಗೆ ಒಳ್ಳೆಯದನ್ನು ಮಾಡಿ. ಇನ್ನೊಬ್ಬರಿಗೆ ಕೆಡಕನ್ನು ಬಯಸಿದರೆ ನಾಶ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ವಾಹಿನಿಯೊಂದರಲ್ಲಿ ಸಂದರ್ಶನ ನೀಡುವ ವೇಳೆ ತಾವು ನಿಜವಾದ ಹುಲಿ ಉಗುರು ಧರಿಸಿರುವುದಾಗಿ ಜಗ್ಗೇಶ್ ಹೇಳಿಕೊಂಡಿದ್ದರು. ಈಗ ವರ್ತೂರು ಸಂತೋಷ್ ಪ್ರಕರಣದ ನಂತರ ಜಗ್ಗೇಶ್ ಅವರ ಹಿಂದಿನ ಸಂದರ್ಶನ ಆಧರಿಸಿ ಅಧಿಕಾರಿಗಳು ಅವರ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post