ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತಿರುಪತಿ ತಿರುಮಲ ದೇವಾಲಯದ #Tirupathi Tirumala Temple ಬಳಿಯಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಬಳ್ಳಾರಿ ಮೂಲದ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಬಳ್ಳಾರಿ ಮೂಲದ ಮೃತ ಮಹಿಳೆಯನ್ನು ನಿರ್ಮಲಾ(50) ಎಂದು ಗುರುತಿಸಲಾಗಿದೆ.

ಇನ್ನು, ಉಳಿದ ಮೃತರನ್ನು ವೈಜಾಗ್ ಮೂಲದ ರಜನಿ (47), ಲಾವಣ್ಯ (40), ಶಾಂತಿ (30), ಸೇಲಂನ ಮಲ್ಲಿಕಾ (49) ಹಾಗೂ ನರಸಿಪಟ್ಟಣದ ನಾಯ್ಡು ಬಾಬು (59) ಎಂದು ಗುರುತಿಸಲಾಗಿದೆ.
Also read: ಲಾಸ್ ಏಂಜಲೀಸ್ | ಭೀಕರ ಕಾಡ್ಗಿಚ್ಚಿಗೆ 15 ಸಾವಿರ ಎಕರೆ ಅರಣ್ಯ ಭಸ್ಮ | 5 ಮಂದಿ ಸಜೀವ ದಹನ
ಘಟನೆಯಲ್ಲಿ ಒಟ್ಟು 60ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಗುರುವಾರ ಬೆಳಗ್ಗೆ 5 ಗಂಟೆಯಿಂದ ಶ್ರಿನಿವಾಸಂ, ಸತ್ಯನಾರಾಯಣಪುರಂ ಮತ್ತು ಬೈರಾಗಿಪಟ್ಟೆಡ ಸೇರಿದಂತೆ 9 ಪ್ರದೇಶಗಳಲ್ಲಿ ಸ್ಥಾಪಿಸಲಾಗಿರುವ 94 ಕೌಂಟರ್’ಗಳ ಮೂಲಕ ವೈಕುಂಠ ದ್ವಾರ ದರ್ಶನ ಟಿಕೆಟ್ ನೀಡಲು ಟಿಟಿಡಿ ಯೋಜಿಸಿತ್ತು. ಆದರೆ, ಟೋಕನ್’ಗಳಿಗಾಗಿ ಬುಧವಾರ ಸಂಜೆಯೇ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.

ಇನ್ನು ಘಟನೆ ಹಿನ್ನೆಲೆಯಲ್ಲಿ ಸಿಎಂ ಚಂದ್ರಬಾಬು ನಾಯ್ಡು #Chandrababu Naidu ಅವರು ಇಂದು ತಿರುಪತಿಗೆ ಭೇಟಿ ನೀಡಲಿದ್ದಾರೆ.
ಈ ಕುರಿತಂತೆ ಸಿಎಂ ಕಚೇರಿ ಪ್ರಕಟಿಸಿರುವ ಮಾಹಿತಿಯಂತೆ, ಮುಖ್ಯಮಂತ್ರಿಗಳು ಇಂದು ತಿರುಪತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ನಂತರ ಗಾಯಗಳನ್ನು ಅವರು ಭೇಟಿ ಮಾಡಲಿದ್ದಾರೆ.
ಇನ್ನು, ಘಟನೆ ಹಿನ್ನೆಲೆಯಲ್ಲಿ ಟೋಕನ್ ವಿತರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ, ಇಂದು ಮತ್ತೆ ವಿತರಣೆ ಆರಂಭವಾಗಿದ್ದು, ಯಾವುದೇ ರೀತಿಯ ದುರ್ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post