ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಪರೀಕ್ಷೆಗೆ ನೋಂದಣಿ ಮಾಡಿಕೊಂಡಿರುವ ಹೊಸ ವಿದ್ಯಾರ್ಥಿಗಳು, ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶವನ್ನು ಸಚಿವ ಸುರೇಶ್ ಕುಮಾರ್ ಅವರು ಬಿಡುಗಡೆ ಮಾಡಲಿದ್ದಾರೆ.
ಈ ಬಾರಿ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಮತ್ತು ಪ್ರಥಮ ಪಿಯುಸಿಯ ಅಂಕಗಳನ್ನು ಪರಿಗಣಿಸಿ 2021-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ.
ಸಂಜೆ 4 ಗಂಟೆಯ ಬಳಿಕ http://karresults.nic.in/ ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಈಗಾಗಲೇ ನೋಂದಣಿ ಸಂಖ್ಯೆ ಸಿಗದ ವಿದ್ಯಾರ್ಥಿಗಳು http://pue.kar.nic.in/ ನಲ್ಲಿ Know my registration number ಲಿಂಕ್ ಮೂಲಕ ನೋಂದಣಿ ಸಂಖ್ಯೆ ಪಡೆಯಬಹುದು. ಖಾಸಗಿ ಅಭ್ಯರ್ಥಿಗಳಿಗೆ ಪರೀಕ್ಷಾ ನಂತರವೇ ಫಲಿತಾಂಶ ಪ್ರಕಟವಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post