ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನೂರಾರು ವರ್ಷಗಳ ಇತಿಹಾಸ ಹೊಂದಿರುವ ಪಕ್ಷ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವ ಕಾಂಗ್ರೆಸ್ ಪಕ್ಷಕ್ಕೆ ಇಂದಿನ ಚುನಾವಣಾ ಫಲಿತಾಂಶ ಸರಿಯಾದ ಪಾಠ ಕಲಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ Farmer CM Kumaraswamy ಟಾಂಗ್ ನೀಡಿದ್ದಾರೆ.
ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಫಲಿತಾಂಶಕ್ಕೂ ಮುನ್ನವೇ ಗೆದ್ದುಬಿಟ್ಟಿದ್ದೇವೆ ಎಂದು ಬೀಗುತ್ತಾ, ಪ್ರಾದೇಶಿಕ ಪಕ್ಷಗಳನ್ನು ಮುಗಿಸಿಬಿಡುತ್ತೇವೆ ಎಂದು ಅಹಂಕಾರ ಪಡುತ್ತಿದ್ದ ಕಾಂಗ್ರೆಸ್’ಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದರು.
Also read: ಉತ್ತರ ಪ್ರದೇಶದಲ್ಲಿ ಅಡ್ಡಡ್ಡ ಮಲಗಿದ ಪ್ರಿಯಾಂಕಾ ವಾದ್ರಾ ತಂತ್ರಗಾರಿಕೆ
ದೇಶದಲ್ಲಿ ಬಿಜೆಪಿಗೆ ಪೈಪೋಟಿ ನೀಡುವುದು ಪ್ರಾದೇಶಿಕ ಪಕ್ಷಗಳು ಮಾತ್ರ ಎಂಬುದು ಪಶ್ಚಿಮ ಬಂಗಾಳ ಹಾಗೂ ಈಗಿನ ಚುನಾವಣೆಯ ಫಲಿತಾಂಶದಿಂದ ಸಾಬೀತಾಗಿದೆ. ಪಂಚರಾಜ್ಯಗಳ ಚುನಾವಣೆಗೂ ನಮ್ಮ ರಾಜ್ಯದ ಚುನಾವಣಾ ವಾತಾವರಣಕ್ಕೂ ವ್ಯತ್ಯಾಸವಿದೆ ಎಂದು ಮಾರ್ಮಿಕವಾಗಿ ನುಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post