ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನಿವಾಸಕ್ಕೆ ಇಂದು ಭೇಟಿ ನೀಡಿದ ಟಾಲಿವುಡ್ ನಟ ಅಲ್ಲು ಅರ್ಜುನ್ ಅವರು ಕುಟುಂಸ್ಥರಿಗೆ ಸಾಂತ್ವನ ಹೇಳಿದರು.
ಇಂದು ಮುಂಜಾನೆ ಬೆಂಗಳೂರಿನ ಎಚ್’ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಲ್ಲು ಅರ್ಜುನ್, ನಾಗಾವರದಲ್ಲಿರುವ ನಟ ಶಿವರಾಜಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದರು.
ಆನಂತರ ಸದಾಶಿವ ನಗರದಲ್ಲಿರುವ ಪುನೀತ್ ರಾಜಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ ಅಲ್ಲು ಅರ್ಜುನ್ ಪವರ್ ಸ್ಟಾರ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ನಂತರ ಪುನೀತ್ ರಾಜಕುಮಾರ್ ಅವರ ಸಮಾಧಿ ಸ್ಥಳಕ್ಕೆ ಅಲ್ಲು ಅರ್ಜುನ್ ಭೇಟಿ ನೀಡಿ ನಮನ ಸಲ್ಲಿಸಿದರು.
ಅಲ್ಲು ಅರ್ಜುನ್ ಭೇಟಿ ಹಿನ್ನೆಲೆಯಲ್ಲಿ ಪುನೀತ್ ನಿವಾಸದ ಬಳಿಯಲ್ಲಿ ಅಭಿಮಾನಿಗಳ ದಂಡೇ ನೆರೆದಿತ್ತು. ಸದಾಶಿವನಗರ ಪೊಲೀಸರು ಪುನೀತ್ ಮನೆ ಮುಂದೆ ಇದ್ದ ಅಭಿಮಾನಿಗಳನ್ನು ಕಳುಹಿಸಲು ಹರಸಾಹಸ ಪಡಬೇಕಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post