ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ವಿಧಾನಸೌಧದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಅವರ ಅಧ್ಯಕ್ಷತೆಯಲ್ಲಿ ನಗರಾಭಿವೃದ್ದಿ ಇಲಾಖೆಯ ಹಾಗೂ ಕೈಗಾರಿಕಾ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ನಡೆಯಿತು.
ಐದಾರು ಕೈಗಾರಿಕಾ ಟೌನ್‌ಶಿಪ್‌ಗಳನ್ನು ಘೋಷಣೆ ಮಾಡಲು ಹಾಗೂ ಬಜೆಟ್‌ನಲ್ಲಿ ಘೋಷಣೆ ಮಾಡಿರುವ ರೀತಿಯಲ್ಲಿ ಕೈಗಾರಿಕೆಗಳಿಂದ ಕರ ಆಕರಣೆಯ ಬಗ್ಗೆ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ವಿಸ್ತ್ರುತ ಚರ್ಚೆ ನಡೆಸಿದ ಸಚಿವರು ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ಇದೇ ವೇಳೆ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಗೌರವ್ ಗುಪ್ತಾ, ನಗರಾಭಿವೃದ್ದಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ಕೈಗಾರಿಕಾಭಿವೃದ್ದಿ ಆಯುಕ್ತೆ ಗುಂಜನ್ ಕೃಷ್ಣ, ಡೈರೆಕ್ಟರ್ ಆಫ್ ಮುನ್ಸಿಪಲ್ ಅಡ್ಮಿನಿಸ್ಟ್ರೇಷನ್ ಕಾವೇರಿ ಸೇರಿದಂತೆ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post