ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ Bangalore-Mysore Expresswayನಲ್ಲಿ ಜುಲೈ ತಿಂಗಳ ಮಧ್ಯದಿಂದ ಸೈಕಲ್, ದ್ವಿಚಕ್ರ, ತ್ರಿಚಕ್ರ ವಾಹನಗಳು ಹಾಗೂ ಟ್ರ್ಯಾಕ್ಟರ್‌ಗಳಂತಹ ಕೃಷಿ ವಾಹನಗಳನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.
ಮಾಧ್ಮಮದವರೊಂದಿಗೆ ಈ ಬಗ್ಗೆ ಮಾತನಾಡಿರುವ ಅವರು, ಮುಂದಿನ 10-15 ದಿನಗಳಲ್ಲಿ ಈ ನಿಯಮ ಜಾರಿಯಾಗಲಿದೆ. ಈ ಸಂಬಂಧ ಅಧಿಕೃತ ಅಧಿಸೂಚನೆಗಾಗಿ ಕಾಯುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಕಳೆದ ಅಕ್ಟೋಬರ್‌ನಲ್ಲಿ ಸಂಚಾರಕ್ಕೆ ತೆರೆಯಲಾದ 6-10 ಲೇನ್ ಎಕ್ಸ ಪ್ರೇಸ್ ವೇಯಲ್ಲಿ 150ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದು, ಕೇವಲ 90 ನಿಮಿಷಗಳಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತಲುಪಲು ಪ್ರಯಾಣಿಕರಿಗೆ ಸಹಾಯ ಮಾಡುವ 119-ಕಿಮೀ ಹೈವೇ ಮಾರ್ಚ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಅಧಿಕೃತವಾಗಿ ಉದ್ಘಾಟನೆಯಾಯಿತು. ಅಂದಿನಿಂದ ಒಂದಲ್ಲ ಒಂದು ಕಾರಣಕ್ಕಾಗಿ ಸುದ್ದಿಯಲ್ಲಿದೆ.
Also read: ಹಾಲು ಸರಬರಾಜು ವಾಹನ ಅಪಘಾತ: ಇಬ್ಬರು ಸಾವು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post