ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಸಚಿವ ಸಂತೋಷ್ ಲಾಡ್ Santhosh Lad ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ನಿಯೋಜಿಸಿದ್ದಾರೆ.
ಘಟನೆ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ವರದಿ ಕೇಳಿದ ಬಳಿಕ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಬಳಿಕ ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವನ್ನು ಒದಗಿಸಲು ಸೂಚನೆ ನೀಡಿದ್ದಾರೆ.

ರಾಜ್ಯ ತುರ್ತು ನಿರ್ವಹಣಾ ಕೇಂದ್ರ (SEOC)ದಲ್ಲಿ ನಾಗರೀಕರ ಅನುಕೂಲಕ್ಕಾಗಿ ಸಹಾಯ ವಾಣಿ ಸಂಖ್ಯೆ 1070, 080-22253707, 080-22340676 ತೆರೆಯಲಾಗಿದೆ.











Discussion about this post